ಉತ್ಥಾನ ದ್ವಾದಶಿಯಂದು ಉಡುಪಿಯಲ್ಲಿ ವಾರ್ಷಿಕ ರಥೋತ್ಸವ ಆರಂಭ; 4 ದಿನಗಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಭಕ್ತರು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಉತ್ಥಾನ ದ್ವಾದಶಿಯಂದು ಉಡುಪಿಯಲ್ಲಿ ವಾರ್ಷಿಕ ರಥೋತ್ಸವ ಆರಂಭ; 4 ದಿನಗಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಭಕ್ತರು

ಉತ್ಥಾನ ದ್ವಾದಶಿಯಂದು ಉಡುಪಿಯಲ್ಲಿ ವಾರ್ಷಿಕ ರಥೋತ್ಸವ ಆರಂಭ; 4 ದಿನಗಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಭಕ್ತರು

ಉಡುಪಿ ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ರಥೋತ್ಸವ ಆರಂಭಗೊಂಡಿದೆ. ಶುಕ್ರವಾರ ಉತ್ಥಾನ ದ್ವಾದಶಿಯಂದು ಬೆಳಗ್ಗೆ ತುಳಸಿಪೂಜೆ, ಸಂಜೆ ಕ್ಷೀರಾಬ್ಧಿ ಪೂಜೆ ಬಳಿಕ ತೆಪ್ಪೋತ್ಸವ ಸಹಿತ ನಾಲ್ಕು ದಿನಗಳ ಲಕ್ಷ ದೀಪೋತ್ಸವ ಕಾರ್ಯಕ್ರಮ ನೆರವೇರಲಿದೆ.

ಉಡುಪಿ ಶ್ರೀಕೃಷ್ಣಮಠದ ಮಧ್ವಸರೋವರದ ಮಧ್ಯದಲ್ಲಿರುವ ಮಂಟಪದಲ್ಲಿ  ಉತ್ಥಾನ ದ್ವಾದಶಿಯ ಸಾಯಂಕಾಲ ಈ 4 ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು. ವಿವಿಧ ಮಠಾಧೀಶರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.  
icon

(1 / 9)

ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಸ್ವಾಮಿಗಳಾದ ಶ್ರೀರಾಜರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಪಟ್ಟದ ದೇವರಿಗೆ ಪೂಜೆಯನ್ನು ಮಾಡಿ ಕ್ಷೀರಾಬ್ಧಿಯನ್ನು ನೆರವೇರಿಸಿದರು. 
icon

(2 / 9)

ದ್ವಾದಶಿಯಾದ್ದರಿಂದ ಶುಕ್ರವಾರ ಬೆಳಗ್ಗೆ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು. ಬಳಿಕ ತುಳಸೀಪೂಜೆ ನೆರವೇರಿಸಿದರು. 
icon

(3 / 9)

ಇದಕ್ಕೂ ಮುನ್ನ ಒಂದು ತಿಂಗಳಿಂದ ನಡೆಯುತ್ತಿದ್ದ ಪಶ್ಚಿಮಜಾಗರ ಪೂಜೆಯನ್ನು ಸಮಾಪನಗೊಳಿಸಿದರು. ರಾತ್ರಿವರೆಗೆ ನಡೆದ ವಿವಿಧ ಪೂಜೆಗಳಲ್ಲಿ ಪರ್ಯಾಯ ಕೃಷ್ಣಾಪುರ, ಪಲಿಮಾರು ಹಿರಿಯ, ಕಿರಿಯ, ಅದಮಾರು ಕಿರಿಯ, ಪೇಜಾವರ, ಕಾಣಿಯೂರು, ಶೀರೂರು ಸ್ವಾಮೀಜಿಯವರು ಪಾಲ್ಗೊಂಡರು.
icon

(4 / 9)

ಅಪರಾಹ್ನ, ಉಡುಪಿ ರಥಬೀದಿಯಲ್ಲಿ ಅಳವಡಿಸಿದ್ದ ದಳಿಗಳ ಮೇಲೆ ಗೋಮಯವನ್ನು ಇಟ್ಟು, ಅದರ ಮೇಲೆ ಹಣತೆ ಇಡುವ ಮುಹೂರ್ತವನ್ನು ವಿವಿಧ ಸ್ವಾಮೀಜಿಯವರು ನೆರವೇರಿಸಿದರು.
icon

(5 / 9)

ಪೂಜೆ ಬಳಿಕ ಚಾತುರ್ಮಾಸ ವ್ರತಾಚರಣೆಯಲ್ಲಿ ಒಳಗಿದ್ದ ಉತ್ಸವ ಮೂರ್ತಿಯನ್ನು ಬಿರುದಾವಳಿಗಳಲ್ಲಿ ಹೊರಗೆ ತಂದು, ರಾತ್ರಿ ಆಕರ್ಷಕ ತೆಪ್ಪೋತ್ಸವ ನಡೆಯಿತು. ತೆಪ್ಪೋತ್ಸವ ಬಳಿಕ ರಥೋತ್ಸವ ನಡೆಯಿತು.
icon

(6 / 9)

ಶ್ರೀಕೃಷ್ಣ ಮುಖ್ಯಪ್ರಾಣ, ಶ್ರೀ ಅನಂತೇಶ್ವರ, ಶ್ರೀ ಚಂದ್ರಮೌಳೀಶ್ವರ ಉತ್ಸವಮೂರ್ತಿಗಳನ್ನು ಗರುಡರಥ ಮತ್ತು ಮಹಾಪೂಜಾ ರಥಗಳಲ್ಲಿ ಇರಿಸಿ, ಉತ್ಸವ ನಡೆಸಲಾಯಿತು. 
icon

(7 / 9)

ಇದೇ ವೇಳೆ ರಥಬೀದಿ, ಮಧ್ವ ಸರೋವರಗಳಲ್ಲಿ ಸಾವಿರಾರು ಹಣತೆಗಳ ದೀಪಗಳು ಕಂಗೊಳಿಸಿದವು. ವಿವಿಧ ಸ್ವಾಮೀಜಿಯವರು ಉತ್ಸವದಲ್ಲಿ ಪಾಲ್ಗೊಂಡರು. ಇನ್ನು ಮೂರು ದಿನ ಲಕ್ಷದೀಪೋತ್ಸವ ನಡೆಯಲಿದೆ.
icon

(8 / 9)

ಉಡುಪಿ ಲಕ್ಷ ದೀಪೋತ್ಸವಕ್ಕೆ ಆಗಮಿಸಿದ್ದ ವಿವಿಧ ಮಠಾಧೀಶರು
icon

(9 / 9)

ಇತರ ಗ್ಯಾಲರಿಗಳು