ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆಗಾಗಿ ಅರಣ್ಯ ಇಲಾಖೆ ತಂಡ ಹುಡುಕಾಟ: ಡ್ರೋಣ್ ಕ್ಯಾಮರಾ ಕಾರ್ಯಾಚರಣೆ ಹೀಗಿದೆ
- ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಂಗಳವಾರ ಚಿರತೆ ಕಾಣಿಸಿಕೊಂಡ ನಂತರ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಚಿರತೆ ಕಾರ್ಯಪಡೆಯೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದರ ಚಿತ್ರ ನೋಟ ಹೀಗಿದೆ.
- ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಂಗಳವಾರ ಚಿರತೆ ಕಾಣಿಸಿಕೊಂಡ ನಂತರ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಚಿರತೆ ಕಾರ್ಯಪಡೆಯೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದರ ಚಿತ್ರ ನೋಟ ಹೀಗಿದೆ.
(1 / 9)
ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೇರಾಗಳಲ್ಲಿ ಮಂಗಳವಾರ ಬೆಳಗಿನ ವೇಳೆ ಚಿರತೆ ಚಲನ ವಲನ ಕಂಡು ಬಂದಿದೆ.
(2 / 9)
ಮೈಸೂರು ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆ ಸಿಬ್ಬಂದಿ ಹಾಗೂ ಮೈಸೂರು ಪ್ರಾದೇಶಿಕ ವಲಯದ ಸಿಬ್ಬಂದಿಗಳು ತಂಡದೊಂದಿಗೆ ಹುಡುಕಾಟದ ಕಾರ್ಯಾಚರಣೆ ಆರಂಭಿಸಲಾಗಿದೆ. ಮೈಸೂರು ಡಿಸಿಎಫ್ ಡಾ.ಕೆ.ಎನ್.ಬಸವರಾಜ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಾರ್ಗದರ್ಶನ ಮಾಡಿದರು. ಇನ್ಫೋಸಿಸ್ ಅಧಿಕಾರಿಗಳಿಂದಲೂ ಮಾಹಿತಿ ಪಡೆದರು.
(3 / 9)
ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಹಾಗೂ ಚಿರತೆ ಕಾರ್ಯ ಪಡೆ ಮುಖ್ಯಸ್ಥ ಡಾ.ಐ.ಬಿ.ಪ್ರಭುಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
(4 / 9)
ಡ್ರೋನ್ ಕ್ಯಾಮೆರಾ ಹಾಗೂ ಫೂಟ್ ಪ್ಯಾಟ್ರೋಲಿಂಗ್ ಬಳಸಿ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಅರಣ್ಯ ಇಲಾಖೆ ತಂಡಗಳು ಕ್ಯಾಂಪಸ್‌ನಲ್ಲಿ ಸುತ್ತು ಹಾಕಿವೆ.
(5 / 9)
ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಸ್ಥಳದಲ್ಲಿಯೇ ಇದ್ದು ಪೊಲೀಸರ ಸಹಕಾರ ಪಡೆದುಕೊಂಡು ನಿರಂತರವಾಗಿ ಕಾರ್ಯಾಚರಾಣೆ ಮುಂದುವರಿಸಲಾಗಿದೆ.
(6 / 9)
350 ಎಕರೆಯಷ್ಟು ವಿಶಾಲವಾದ ಕ್ಯಾಂಪಸ್ ಆಗಿರುವುದರಿಂದ ಸೆರೆ ಹಿಡಿಯಲು ಆಯಕಟ್ಟಿನ ಜಾಗಗಳನ್ನು ಗುರುತಿಸಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಲಾಗುತ್ತಿದೆ.
(7 / 9)
ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಚಲನವಲನ ಇರುವುದು ಖಚಿತವಾದ ನಂತರ ಸೆರೆ ಹಿಡಿಯಲು ಕೇಜ್ ಗಳನ್ನು ಅಳವಡಿಸಲಾಗುತ್ತಿದೆ.
(8 / 9)
ಮೈಸೂರು ಇನ್ಫೋಸಿಸ್ ಕ್ಯಾಂಪಸ್ ನ ಎಲ್ಲಾ ಸಿಬ್ಬಂದಿಗಳು ಹಾಗೂ ತರಭೇತಾರ್ಥಿಗಳು ಎಚ್ಚರಿಕೆಯಿಂದ ಇರುವ ಬಗ್ಗೆ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ.
ಇತರ ಗ್ಯಾಲರಿಗಳು