ಕನ್ನಡ ರಾಜ್ಯೋತ್ಸವ 2024: ಕರ್ನಾಟಕದ ಪ್ರಮುಖ 10 ಜಲಾಶಯಗಳು, ಹೆಚ್ಚು ನೀರು ಸಂಗ್ರಹಿಸಬಲ್ಲದ್ದು ಎಲ್ಲಿ
- ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಜಲಾಶಯಗಳಿವೆ. ಇದರಲ್ಲಿ 10 ಜಲಾಶಯಗಳು ಹೆಚ್ಚು ನೀರು ಸಂಗ್ರಹ ಸಾಮರ್ಥ್ಯ ಹೊಂದಿವೆ. ಜಲಾಶಯಗಳ ವಿವರ ಇಲ್ಲಿದೆ.
- ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಜಲಾಶಯಗಳಿವೆ. ಇದರಲ್ಲಿ 10 ಜಲಾಶಯಗಳು ಹೆಚ್ಚು ನೀರು ಸಂಗ್ರಹ ಸಾಮರ್ಥ್ಯ ಹೊಂದಿವೆ. ಜಲಾಶಯಗಳ ವಿವರ ಇಲ್ಲಿದೆ.
(1 / 10)
ಕರ್ನಾಟಕದಲ್ಲಿಯೇ ಅತಿ ದೊಡ್ಡದಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ 151.75 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದೆ.
(2 / 10)
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಸೂಪಾ ಜಲಾಶಯದಲ್ಲಿ 145.33 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದೆ.
(3 / 10)
ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಲಾಲ್ ಬಹದ್ದೂರು ಶಾಸ್ತ್ರಿ ಜಲಾಶಯದಲ್ಲಿ 123.08 ಟಿಎಂಸಿ ನೀರು ಸಂಗ್ರಹಿಸಬಹುದು.
(4 / 10)
ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ತುಂಗಭದ್ರಾ ಜಲಾಶಯದಲ್ಲಿ 105.79 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದೆ.
(5 / 10)
ಮಂಡ್ಯ ಜಿಲ್ಲೆ ಶ್ರೀರಂಗ ಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ 49.45 ಟಿಎಂಸಿ ನೀರು ಸಂಗ್ರಹಿಸಬಹುದು.
(6 / 10)
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಭದ್ರಾ ಜಲಾಶಯದಲ್ಲಿ 71.54 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದೆ.
(7 / 10)
ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಮಲಪ್ರಭಾ ನವಿಲುತೀರ್ಥ ಜಲಾಶಯದಲ್ಲಿ 37.73 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯವಿದೆ.
(9 / 10)
ತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯದಲ್ಲಿ 30.42 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದೆ.(ಚಿತ್ರ: ಪರಿಮಳ )
ಇತರ ಗ್ಯಾಲರಿಗಳು