Lok Sabha Election 2024: ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತದಲ್ಲಿ ಲೋಕಸಭೆ ಚುನಾವಣೆ; ಪೂರ್ಣ ವಿವರ ಇಲ್ಲಿದೆ
- Lok Sabha Election 2024: ಲೋಕಸಭೆಯ 543 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದರ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಯಿರಿ.
- Lok Sabha Election 2024: ಲೋಕಸಭೆಯ 543 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದರ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಯಿರಿ.
(1 / 8)
ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ವಿಧಾನಸಭೆಗಳು ಉಪ ಚುನಾವಣೆ, 4 ರಾಜ್ಯಗಳು ವಿಧಾನಸಭೆ ಚುನಾವಣ ಹಾಗೂ ಲೋಕಸಭಾ ಚುನಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ.(Election Commission of India)
(2 / 8)
ಮೊದಲ ಹಂತದ ಮತದಾನ ಏಪ್ರಿಲ್ 19 ರಿಂದ ನಡೆಯಲಿದ್ದು, ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ. ಮಾರ್ಚ್ 27 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 30 ಕೊನೆಯ ದಿನವಾಗಿದೆ.(ECI)
(3 / 8)
ಏಪ್ರಿಲ್ 26 ರಂದು 2ನೇ ಹಂತದ ಚುನಾವಣೆ ನಡೆಯಲಿದ್ದು, 28ಕ್ಕೆ ನೋಟಿಫಿಕೇಷನ್, ಏಪ್ರಿಲ್ 4 ರಿಂದ ನಾಮಪತ್ರ ಸಲ್ಲಿಕೆ, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲುಕೊನೆಯ ದಿನವಾಗಿದೆ.(ECI)
(4 / 8)
ಮೂರನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ. ಏಪ್ರಿಲ್ 12 ರಂದು ನೋಟಿಫಿಕೇಷನ್ ಹೊರಡಸಿದ್ದು, ಏಪ್ರಿಲ್ 19 ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನ ಹಾಗೂ ಏಪ್ರಿಲ್ 22 ನಾಮಪತ್ರ ಪಾವಸ್‌ಗೆ ಕೊನೆಯ ದಿನವಾಗಿದೆ.(ECI)
(5 / 8)
4ನೇ ಹಂತದ ಲೋಕಸಭೆ ಚುನಾವಣೆಗೆ ಏಪ್ರಿಲ್ 18 ರಂದು ನೋಟಿಫಿಕೇಷನ್ ಹೊರಡಿಸಲಾಗುತ್ತದೆ. ಏಪ್ರಿಲ್ 25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಉಮೇದುವಾರಿಕೆ ವಾಪಸ್‌ಗೆ ಏಪ್ರಿಲ್ 29 ಕೊನೆಯ ದಿನವಾಗಿದೆ. ಮೇ 13ಕ್ಕೆ ಮತದಾನ ನಡೆಯುತ್ತದೆ.(ECI)
(6 / 8)
5ನೇ ಹಂತದ ಚುನಾವಣೆಗೆ ಏಪ್ರಿಲ್ 26 ರಂದು ನೋಟಿಫಿಕೇಷನ್ ಹೊರಡಿಸಲಿದ್ದು, ಮೇ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಹಾಗೂ ಮೇ 6 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮೇ 20ಕ್ಕೆ ಮತದಾನ ನಡೆಯಲಿದೆ.(ECI)
(7 / 8)
6ನೇ ಹಂತದ ಮತದಾನ ಮೇ 25 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 6 ಕೊನೆಯ ದಿನವಾಗಿದ್ದರೆ, ಉಮೇದುವಾರಿಕೆ ವಾಪಸ್ ಪಡೆಯಲು ಮೇ 9 ಕೊನೆಯ ದಿನವಾಗಿದೆ.
ಇತರ ಗ್ಯಾಲರಿಗಳು