ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ರಿಂದ ಆದಿಚುಂಚನಗಿರಿ ಪೀಠಾಧಿಪತಿ ಭೇಟಿ, ಕಾಲಭೈರವೇಶ್ವರನ ದರ್ಶನ; ಫೋಟೊಸ್
- Lok Sabha Election 2024: ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಅದಿಚುಂಚನಗಿರಿಯ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅದರ ಫೋಟೊಸ್ ಇಲ್ಲಿದೆ.
- Lok Sabha Election 2024: ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಅದಿಚುಂಚನಗಿರಿಯ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಅದರ ಫೋಟೊಸ್ ಇಲ್ಲಿದೆ.
(1 / 8)
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡರಯರ್ ಭೇಟಿ ನೀಡಿದ್ದರು. ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಯವರೇ ಬಂದು ಯದುವೀರ್ ಒಡೆಯರ್ ಅವರನ್ನು ಬರಮಾಡಿಕೊಂಡರು.
(2 / 8)
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಮಠದ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಿ ಬರ ಮಾಡಿಕೊಳ್ಳಲಾಯಿತು.
(4 / 8)
ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಅವರಿಗೆ ಶಾಲು ಹೊದಿಸಿ, ಹೂವಿನ ಮಾಲೆ ಹಾಕಿ ನಿರ್ಮಲಾನಂದನಾಥ ಸ್ವಾಮೀಜಿ ಸನ್ಮಾನಿಸಿದರು.
(5 / 8)
ಆದಿಚುಂಚನಗಿರಿ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡ ಯದುವೀರ್ ಅವರು ಕೆಲ ಸಮಯ ಶ್ರೀಗಳ ಜೊತೆ ಮಾತುಕತೆ ನಡೆಸಿದರು.
(6 / 8)
ಆದಿಚುಂಚಗಿರಿಯ ಕ್ಷೇತ್ರಾಧಿಪತಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಠದ ಪೀಠಾಧಿಪತಿಗಳು, ಕಿರಿಯ ಶ್ರೀಗಳು ಉಪಸ್ಥಿತರಿದ್ದರು.
(7 / 8)
ರಾಜವಂಶಸ್ಥ, ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಆದಿಚುಂಚಗಿರಿಯ ಕ್ಷೇತ್ರಾಧಿಪತಿ ಕಾಲಭೈರವೇಶ್ವರ ಸ್ವಾಮಿಯ ದರ್ಶನವನ್ನು ಪಡೆದರು.
ಇತರ ಗ್ಯಾಲರಿಗಳು