ಉತ್ತರಕರ್ನಾಟಕದ ಬಿಸಿಲನ್ನೂ ಲೆಕ್ಕಿಸದೇ ಮತ ಪ್ರಚಾರದಲ್ಲಿ ನಿರತ ಅಭ್ಯರ್ಥಿಗಳು, ನಾಯಕರು photos
- ಕರ್ನಾಟಕದ ಎರಡನೇ ಹಂತದ ಚುನಾವಣೆ ಪ್ರಚಾರದ ಅಬ್ಬರ ಜೋರಾಗಿದೆ. ಬಿರು ಬಿಸಿಲ ನಡುವೆಯೂ ಅಭ್ಯರ್ಥಿಗಳು, ನಾಯಕರು, ಮುಖಂಡರು, ಕಾರ್ಯಕರ್ತರು ಮತಕ್ಕಾಗಿ ಮನೆ ಮನೆ ಸುತ್ತುವುದು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗುವುದು ಕಂಡು ಬಂದಿದೆ.ಇದರ ಚಿತ್ರ ನೋಟ ಇಲ್ಲಿದೆ.
- ಕರ್ನಾಟಕದ ಎರಡನೇ ಹಂತದ ಚುನಾವಣೆ ಪ್ರಚಾರದ ಅಬ್ಬರ ಜೋರಾಗಿದೆ. ಬಿರು ಬಿಸಿಲ ನಡುವೆಯೂ ಅಭ್ಯರ್ಥಿಗಳು, ನಾಯಕರು, ಮುಖಂಡರು, ಕಾರ್ಯಕರ್ತರು ಮತಕ್ಕಾಗಿ ಮನೆ ಮನೆ ಸುತ್ತುವುದು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗುವುದು ಕಂಡು ಬಂದಿದೆ.ಇದರ ಚಿತ್ರ ನೋಟ ಇಲ್ಲಿದೆ.
(1 / 10)
ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ಬುಧವಾರ ಮಧ್ಯಾಹ್ನ ಬಿಜೆಪ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದರು.
(2 / 10)
ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ನಡೆಸಿದ ರೋಡ್ ಶೋನಲ್ಲಿ ಕಂಡು ಬಂದ ದೃಶ್ಯ.
(3 / 10)
ಕಲಬುರಗಿ ಜಿಲ್ಲೆಯ ದೇವತ್ಕಲ್ ನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಭಾಗಿಯಾದರು,
(5 / 10)
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ ಯಾಚಿಸಿದರು.
(6 / 10)
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹುಕ್ಕೇರಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ರೋಡ್ ಶೋ ನಡೆಸಿ ಮತ ಯಾಚಿಸಿದರು.
(7 / 10)
ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಬಿಸಿಲನ್ನೂ ಲೆಕ್ಕಿಸದೇ ಮತ ಯಾಚನೆ ಮಾಡಿದರು.
(8 / 10)
ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದರು.
(9 / 10)
ಬೀದರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ರಹೀ ಖಾನ್ ಅವರೊಂದಿಗೆ ಪ್ರಚಾರ ಸಭೆಯಲ್ಲಿ ಭಾಗಿಯಾದರು.
ಇತರ ಗ್ಯಾಲರಿಗಳು