ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಏಪ್ರಿಲ್ 19ಕ್ಕೆ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ; ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ; ಫೋಟೊಸ್

ಏಪ್ರಿಲ್ 19ಕ್ಕೆ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ; ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ; ಫೋಟೊಸ್

ಲೋಕಸಭಾ ಚುನಾವಣೆ 2024 ಕ್ಕೆ ದೇಶಾದ್ಯಂತ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನ ಏಪ್ರಿಲ್ 19ಕ್ಕೆ ನಡೆಯಲಿದೆ. ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಫೋಟೊಸ್ ನೋಡಿ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಿ.ಚಿದಂಬರಂ ಅವರು 2024 ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಶುಕ್ರವಾರ (ಏಪ್ರಿಲ್ 5) ಬಿಡುಗಡೆ ಮಾಡಿದ್ದಾರೆ.
icon

(1 / 10)

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಿ.ಚಿದಂಬರಂ ಅವರು 2024 ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಶುಕ್ರವಾರ (ಏಪ್ರಿಲ್ 5) ಬಿಡುಗಡೆ ಮಾಡಿದ್ದಾರೆ.(ANI)

ಮಾಜಿ ಕ್ರಿಕೆಟಿಗ ಮತ್ತು ಬೆರ್ಹಾಮ್‌ಪುರ್ ಕ್ಷೇತ್ರದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದ್ದಾರೆ.
icon

(2 / 10)

ಮಾಜಿ ಕ್ರಿಕೆಟಿಗ ಮತ್ತು ಬೆರ್ಹಾಮ್‌ಪುರ್ ಕ್ಷೇತ್ರದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಪ್ರಚಾರ ನಡೆಸಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದ್ದಾರೆ.(PTI)

ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಬರಾಕ್ಪೋರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮತದಾರರ ಆಶೀರ್ವಾದ ಪಡೆದಿದ್ದಾರೆ.
icon

(3 / 10)

ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಬರಾಕ್ಪೋರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮತದಾರರ ಆಶೀರ್ವಾದ ಪಡೆದಿದ್ದಾರೆ.(ANI)

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ರಣಘಾಟ್ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ಮುಕುತ್ ಮಣಿ ಅಧಿಕಾರಿ ಮನೆ ಮನೆ ಪ್ರಚಾರ ನಡೆಸಿದ್ದಾರೆ.
icon

(4 / 10)

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ರಣಘಾಟ್ ಕ್ಷೇತ್ರದ ಟಿಎಂಸಿ ಅಭ್ಯರ್ಥಿ ಮುಕುತ್ ಮಣಿ ಅಧಿಕಾರಿ ಮನೆ ಮನೆ ಪ್ರಚಾರ ನಡೆಸಿದ್ದಾರೆ.(PTI)

ಜೋರ್ಹತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌರವ್ ಗೊಗೊಯ್ ಅವರು ಅಸ್ಸಾಂನ ಮಜುಲಿಯಲ್ಲಿ ಪ್ರಚಾರದ ವೇಳೆ ಬೆಂಬಲಿಗರೊಂದಿಗೆ ನೃತ್ಯ ಮಾಡಿದ್ದಾರೆ.
icon

(5 / 10)

ಜೋರ್ಹತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌರವ್ ಗೊಗೊಯ್ ಅವರು ಅಸ್ಸಾಂನ ಮಜುಲಿಯಲ್ಲಿ ಪ್ರಚಾರದ ವೇಳೆ ಬೆಂಬಲಿಗರೊಂದಿಗೆ ನೃತ್ಯ ಮಾಡಿದ್ದಾರೆ.(PTI)

ತ್ರಿಶೂರ್: ತ್ರಿಶೂರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಸುರೇಶ್ ಗೋಪಿ ಅವರು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.
icon

(6 / 10)

ತ್ರಿಶೂರ್: ತ್ರಿಶೂರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಸುರೇಶ್ ಗೋಪಿ ಅವರು ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.(PTI)

ರಾಜಸ್ಥಾನದ ಚುರುವಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.
icon

(7 / 10)

ರಾಜಸ್ಥಾನದ ಚುರುವಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.(PTI)

ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಬುಂಡುವಿನಲ್ಲಿ ಚುನಾವಣಾ ಪ್ರಚಾರದ ವೇಳೆ ಕೇಂದ್ರ ಸಚಿವ ಮತ್ತು ಖುಂಟಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಮುಂಡಾ ಪ್ರಚಾರ ನಡೆಸಿದ್ದಾರೆ.
icon

(8 / 10)

ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಬುಂಡುವಿನಲ್ಲಿ ಚುನಾವಣಾ ಪ್ರಚಾರದ ವೇಳೆ ಕೇಂದ್ರ ಸಚಿವ ಮತ್ತು ಖುಂಟಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಮುಂಡಾ ಪ್ರಚಾರ ನಡೆಸಿದ್ದಾರೆ.(PTI)

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಬಾಗ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಸಿಪಿಎಂ ಅಭ್ಯರ್ಥಿ ಮೊಹಮ್ಮದ್ ಸಲೀಂ ಭಾಗವಹಿಸಿದ್ದರು.
icon

(9 / 10)

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಲಾಲ್ಬಾಗ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಸಿಪಿಎಂ ಅಭ್ಯರ್ಥಿ ಮೊಹಮ್ಮದ್ ಸಲೀಂ ಭಾಗವಹಿಸಿದ್ದರು.(PTI)

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಜಮ್ಮು ಮತ್ತು ಕಾಶ್ಮೀರ ಉಸ್ತುವಾರಿ ಭರತ್ ಸೋಲಂಕಿ ಮತ್ತು ಜಮ್ಮು ಕ್ಷೇತ್ರದ ಪಕ್ಷದ ಅಭ್ಯರ್ಥಿ ರಮಣ್ ಭಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾದ ಜಮ್ಮುವಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಕರಪತ್ರಗಳನ್ನು ಹಂಚಿದ್ದಾರೆ.
icon

(10 / 10)

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಜಮ್ಮು ಮತ್ತು ಕಾಶ್ಮೀರ ಉಸ್ತುವಾರಿ ಭರತ್ ಸೋಲಂಕಿ ಮತ್ತು ಜಮ್ಮು ಕ್ಷೇತ್ರದ ಪಕ್ಷದ ಅಭ್ಯರ್ಥಿ ರಮಣ್ ಭಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾದ ಜಮ್ಮುವಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಕರಪತ್ರಗಳನ್ನು ಹಂಚಿದ್ದಾರೆ.(ANI)


IPL_Entry_Point

ಇತರ ಗ್ಯಾಲರಿಗಳು