ಕನ್ನಡ ಸುದ್ದಿ  /  Photo Gallery  /  Lok Sabha Election Dakshina Kannada Congress Candidate R Padmaraj Filed Nomination Check Pics Mangaluru News Hsm

ಲೋಕ ಸಭಾ ಚುನಾವಣೆ; ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ನಾಮಪತ್ರ ಸಲ್ಲಿಕೆ; ಮೆರವಣಿಗೆಯಲ್ಲಿ ಗಮನಸೆಳೆದ ತುಳುನಾಡ ಧ್ವಜ

ಲೋಕಸಭಾ ಚುನಾವಣೆ 2024; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಆರ್ ಪದ್ಮರಾಜ್ ಇಂದು (ಏಪ್ರಿಲ್ 3) ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ತುಳುನಾಡ ಧ್ವಜ ಗಮನಸೆಳೆಯಿತು. ಇದಲ್ಲದೆ ಇನ್ನೂ ಕೆಲವು ಆಕರ್ಷಣೆಗಳಿದ್ದವು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ  ಆರ್.ಪದ್ಮರಾಜ್ ಅವರು ಅಬ್ಬರದ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದರು. ಮೆರವಣಿಗೆ ಗಮನ ಸೆಳೆಯಿತು.
icon

(1 / 6)

ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ರಾಜ್ಯ ಚುನಾವಣಾ ಉಸ್ತುವಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಜಿಲ್ಲಾ ಚುನಾವಣಾ ಉಸ್ತುವಾರಿ ಬಿ. ರಮಾನಾಥ ರೈ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿದ್ದರು.
icon

(2 / 6)

ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು.
icon

(3 / 6)

 ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಹಿರಿಯ ರಾಜಕಾರಣಿ ಮಂಗಳೂರನ್ನು 14 ವರ್ಷಗಳ ಕಾಲ ಪ್ರತಿನಿಧಿಸಿದ್ದ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಆಶೀರ್ವಾದ ಪಡೆದುಕೊಂಡು ಬಳಿಕ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.
icon

(4 / 6)

ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರೆ ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್. ಮತ್ತು ನಾಯಕರು ಇದ್ದರು, 
icon

(5 / 6)

ಮೆರವಣಿಗೆಯಲ್ಲಿ ತುಳುನಾಡ ಧ್ವಜ ರಾರಾಜಿಸುತ್ತಿತ್ತು. ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ, ನಡಿಗೆಗೆ ವೇಗ ತುಂಬುವಂತಿತ್ತು
icon

(6 / 6)

IPL_Entry_Point

ಇತರ ಗ್ಯಾಲರಿಗಳು