ಲೋಕಸಭಾ ಚುನಾವಣೆ; ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ, ಬೃಹತ್ ರೋಡ್ ಷೋ ಫೋಟೋಸ್
ಲೋಕಸಭಾ ಚುನಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ (ಏಪ್ರಿಲ್ 3) ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ವಯನಾಡ್ ಕ್ಷೇತ್ರದ ಹಾಲಿ ಸಂಸದರೂ ಆಗಿರುವ ರಾಹುಲ್ ಗಾಂಧಿ ಬೃತಹ್ ರೋಡ್ ಷೋ ಮೂಲಕ ಗಮನಸೆಳೆದರು. ಇಲ್ಲಿದೆ ಫೋಟೋಸ್.
(1 / 6)
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸೇರಿ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಭಾರಿ ರೋಡ್ ಷೋ ಮೂಲಕ ಆಗಮಿಸಿ ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
(2 / 6)
ವಯನಾಡ್‌ನ ಹಾಲಿ ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ (ಏಪ್ರಿಲ್ 3) ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಕ್ಷೇತ್ರದಲ್ಲಿ ಭಾರಿ ರೋಡ್ ಷೋ ನಡೆಸಿದರು. ಪಕ್ಷದ ಜನರಲ್ ಸೆಕ್ರಟರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಜೊತೆಗಿದ್ದರು.(AICC / ANI Photo)
(3 / 6)
ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುವ ಮುನ್ನ ಇಲ್ಲಿನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್ ವರೆಗೆ ರೋಡ್ ಶೋ ನಡೆಸಿದರು. ಆ ಸಂದರ್ಭದಲ್ಲಿ ರಾಹುಲ್ ಅವರ ವಾಹನದ ಹಿಂದೆ ಇದ್ದ ಕಾರ್ಯಕರ್ತರು(AICC/ ANI Photo)
(4 / 6)
ಕಲ್ಪೇಟ್ಟಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಅವರ ಪ್ಲಕಾರ್ಡ್ ಹಿಡಿದು ಬೆಂಬಲ ವ್ಯಕ್ತಪಡಿಸಿದ್ದು ಹೀಗೆ.(REUTERS/CK Thanseer)
(5 / 6)
ವಯನಾಡ್ ಜಿಲ್ಲಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸಲು ಹೊರಟ ಹಾಲಿ ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. ಅವರ ಜೊತೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್ ಹೆಜ್ಜೆಹಾಕಿದರು.(PTI / @priyankagandhi)
ಇತರ ಗ್ಯಾಲರಿಗಳು