Lok Sabha Election2024: ಸಿಎಂ, ಮಾಜಿ ಸಿಎಂ ಸಹಿತ ಪ್ರಮುಖರ ಪ್ರಚಾರ ಜೋರು, ಮೈದುನ ಪರ ಅಖಾಡಕ್ಕಿಳಿದ ಡಿಕೆಶಿ ಪತ್ನಿ photos
- Karnataka Politics ಲೋಕಸಭೆ ಚುನಾವಣೆಗೆ ಪ್ರಚಾರದ ಭರಾಟೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸಹಿತ ಹಲವರು ಪ್ರಚಾರ ಕೈಗೊಂಡರು. ಪತ್ನಿ ಗೀತಾ ಪರ ಶಿವರಾಜಕುಮಾರ್, ಮೈದುನ ಡಿಕೆ ಸುರೇಶ್ ಪರ ಅತ್ತಿಗೆ ಉಷಾ ಶಿವಕುಮಾರ್ ಪ್ರಚಾರಕ್ಕೆ ಇಳಿದಿದ್ದಾರೆ. ಇದರ ಚಿತ್ರ ನೋಟ ಇಲ್ಲಿದೆ.
- Karnataka Politics ಲೋಕಸಭೆ ಚುನಾವಣೆಗೆ ಪ್ರಚಾರದ ಭರಾಟೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸಹಿತ ಹಲವರು ಪ್ರಚಾರ ಕೈಗೊಂಡರು. ಪತ್ನಿ ಗೀತಾ ಪರ ಶಿವರಾಜಕುಮಾರ್, ಮೈದುನ ಡಿಕೆ ಸುರೇಶ್ ಪರ ಅತ್ತಿಗೆ ಉಷಾ ಶಿವಕುಮಾರ್ ಪ್ರಚಾರಕ್ಕೆ ಇಳಿದಿದ್ದಾರೆ. ಇದರ ಚಿತ್ರ ನೋಟ ಇಲ್ಲಿದೆ.
(1 / 9)
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ. ರಾಜೀವ್‌ಗೌಡ ಅವರ ಪರ ಮಲ್ಲೇಶ್ವರಂನ ರಾಮೇಶ್ವರo ಕೆಫೆಯಿಂದ ಬೃಹತ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
(2 / 9)
ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಬಿಜೆಪಿ ಅಭ್ಯರ್ಥಿ , ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರು ಜಿಲ್ಲೆ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಮತ ಯಾಚಿಸಿದರು,
(3 / 9)
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭಾನುವಾರ ಹಿರೇಕೆರೂರು / ರಟ್ಟಿಹಳ್ಳಿ ವಿಧಾನಸಭಾ ಮತಕ್ಷೇತ್ರದ ಮೇದೂರು ಗ್ರಾಮದಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಪಕ್ಷದ ಹಲವಾರು ಪ್ರಮುಖರು ಹಾಜರಿದ್ದರು.
(4 / 9)
ಬೆಂಗಳೂರಿನ ಯಶವಂತಪುರದ ಆರ್‌ಎನ್ಎಸ್ ಶಾಂತಿ ನಿವಾಸ್ ಅಪಾರ್ಟ್‌ಮೆಂಟ್'ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತದಾರರನ್ನು ಭೇಟಿ ಮಾಡಿ ಮಾತನಾಡಿದರು.. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ. ನೀವು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಪ್ರತೀ ಮತವು ರಾಜ್ಯದ ಉಜ್ವಲ ಭವಿಷ್ಯದ ಒಂದೊಂದು ಮೆಟ್ಟಿಲುಗಳಾಗಿವೆ. ಯೋಚಿಸಿ ಮತದಾನ ಮಾಡಿ ಎಂದು ಮನವಿ ಮಾಡಿದರು.
(5 / 9)
ರಾಜವಂಶಸ್ಥ ಹಾಗೂ ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿ ಯದುವೀರ್ ಒಡೆಯರ್ ಕೊಡಗಿನ ಬಾಳೆಲೆಯಲ್ಲಿ ಮತ ಯಾಚನೆ ಮಾಡಿದರು.
(6 / 9)
ಶಿವಮೊಗ್ಗದ ಹೊಸನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಬಿರುಸಿನ ಪ್ರಚಾರ ಕೈಗೊಂಡರು. ಗೀತಕ್ಕಗೆ ಪತಿ ನಟ ಶಿವರಾಜಕುಮಾರ್ ಹಾಗೂ ಸ್ಥಳೀಯ ಮುಖಂಡರ ಸಾಥ್ ನೀಡಿದರು.
(7 / 9)
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೊಸಕೋಟೆ ಪ್ರವಾಸದ ಸಂದರ್ಭದಲ್ಲಿ ಭಾನಿವಾರ ಪಟ್ಟಣದ ಆರಾಧ್ಯ ದೈವ, ಇತಿಹಾಸ ಪ್ರಸಿದ್ದ ಶ್ರೀ ಅವಿಮುಕ್ತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಅವರೊಂದಿಗೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಮತ್ತಿತರರು ಹಾಜರಿದ್ದರು.
(8 / 9)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಮತಯಾಚಿಸಿದರು.
(9 / 9)
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಕಲೇಶಪುರ ವಿಧಾನಸಭಾ ವ್ಯಾಪ್ತಿಯ ಜೆಡಿಎಸ್-ಬಿಜೆಪಿ ಪಕ್ಷಗಳ ಸಮನ್ವಯ ಸಭೆ ನಡೆಸಲಾಯಿತು. ಮೈತ್ರಿ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ಮುಖಂಡರು, ಪ್ರಮುಖರು ಹಾಗೂ ಕಾರ್ಯಕರ್ತರು ಒಟ್ಟಾಗಿ ಎನ್‌ಡಿಎ ಮೈತ್ರಿಕೂಟವನ್ನು ಗೆಲ್ಲಿಸುವ ಸಂಕಲ್ಪ ಮಾಡಲಾಯಿತು. ಮಾಜಿ ಸಚಿವ ಎಚ್ ಡಿ ರೇವಣ್ಣ, ಎಂಎಲ್‌ಸಿ ಪ್ರಾಣೇಶ್ , ಜೆಡಿಎಸ್ ಜಿಲ್ಲಾಧ್ಯಕ್ಷ ಲಿಂಗೇಶ್ , ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಸಚಿವ ಎಚ್ ಕೆ ಕುಮಾರಸ್ವಾಮಿ, ಮಾಜಿ ಶಾಸಕ ಬಿ ಆರ್ ಗುರುದೇವ್ ಹಾಜರಿದ್ದರು.
ಇತರ ಗ್ಯಾಲರಿಗಳು