ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಯಾರ ನಡುವೆ ಸ್ಪರ್ಧೆ photos
- ಲೋಕಸಭೆಗೆ ನಡೆಲಿರುವ ಚುನಾವಣೆಯಲ್ಲಿ ಕರ್ನಾಟಕದ ಮೊದಲ14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ. ಹೇಗಿದೆ ಕಣ ಚಿತ್ರಣ. ಇಲ್ಲಿದೆ ವಿವರ.
- ಲೋಕಸಭೆಗೆ ನಡೆಲಿರುವ ಚುನಾವಣೆಯಲ್ಲಿ ಕರ್ನಾಟಕದ ಮೊದಲ14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ. ಹೇಗಿದೆ ಕಣ ಚಿತ್ರಣ. ಇಲ್ಲಿದೆ ವಿವರ.
(1 / 14)
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿಯ ತೇಜಸ್ವಿ ಸೂರ್ಯ ಹಾಗೂ ಮಾಜಿ ಶಾಸಕಿ, ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರ ನಡುವೆಯೇ ತುರುಸಿನ ಸ್ಪರ್ಧೆ.
(2 / 14)
ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ, ಚಿಕ್ಕಮಗಳೂರು-ಉಡುಪಿ ಸಂಸದೆ, ಬಿಜೆಪಿಯ ಶೋಭಾ ಕರಂದ್ಲಾಜೆ ವಿರುದ್ದ ರಾಜ್ಯಸಭಾ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ನ ಎಂ.ವಿ.ರಾಜೀವ್‌ಗೌಡ ನಡುವೆ ಸ್ಪರ್ಧೆಯಿದೆ.
(3 / 14)
ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಮೂರು ಬಾರಿ ಗೆದ್ದಿರುವ ಬಿಜೆಪಿಯ ಪಿ.ಸಿ.ಮೋಹನ್ ಹಾಗೂ ಕಾಂಗ್ರೆಸ್‌ನಿಂದ ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಅವರ ಪುತ್ರ ಮನ್ಸೂರ್ ಆಲಿ ಖಾನ್ ಅವರ ನಡುವೆ ಜಿದ್ದಾಜಿದ್ದಿನ ಕಣ ಜೋರಾಗಿದೆ.
(4 / 14)
ಸಾಕಷ್ಟು ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೂರು ಬಾರಿ ಸಂಸದ ಹಾಗೂ ಕಾಂಗ್ರೆಸ್ ನ ಡಿ.ಕೆ.ಸುರೇಶ್ ಹಾಗೂ ಹೃದ್ರೋಗ ತಜ್ಞ, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ನಡುವೆಯೇ ಸ್ಪರ್ಧೆಯಿದೆ.
(5 / 14)
ಮೈಸೂರು- ಕೊಡಗು ಕ್ಷೇತ್ರದಲ್ಲಿ ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹಾಗೂ ಕಾಂಗ್ರೆಸ್ ವಕ್ತಾರ, ಅಭ್ಯರ್ಥಿ ಎಂ.ಲಕ್ಷ್ಮಣ ಅವರ ನಡುವೆಯೇ ಸ್ಪರ್ಧೆಯಿದೆ.
(6 / 14)
ಮಂಡ್ಯದಲ್ಲಿ ಮಾಜಿ ಸಿಎಂ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ವೆಂಕಟರಮಣೇಗೌಡ ಅವರ ಮಧ್ಯೆ ಕದನ ಕುತೂಹಲವಿದೆ.
(7 / 14)
ಚಾಮರಾಜನಗರದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ಮಧ್ಯೆ ನೇರ ಹಣಾಹಣಿಯೇ ಇದೆ.
(8 / 14)
ಹಾಸನ ಕ್ಷೇತ್ರದಲ್ಲಿ ಹಾಲಿ ಸಂಸದ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಕಾಂಗ್ರೆಸ್‌ನಿಂದ ಮಾಜಿ ಸಚಿವ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.
(9 / 14)
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಿವೃತ್ತ ಸೇನಾಧಿಕಾರಿ ಹಾಗೂ ಬಿಜೆಪಿಯ ಬ್ರಿಜೇಶ್ ಚೌಟಾ ಹಾಗೂ ಕಾಂಗ್ರೆಸ್‌ನಿಂದ ಪದ್ಮರಾಜ್ ಅವರ ನಡುವೆಯೂ ಕದನ ಕುತೂಹಲ ಜೋರಾಗಿದೆ.
(10 / 14)
ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸಪೂಜಾರಿ, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಡುವೆಯೇ ಸ್ಪರ್ಧೆ ಕಂಡು ಬಂದಿದೆ.
(11 / 14)
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಅಭ್ಯರ್ಥಿ ಮಲ್ಲೇಶ್ ಬಾಬು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಡುವೆ ಸ್ಪರ್ಧೆ ಏರ್ಪಟ್ಟಿದೆ,
(12 / 14)
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮತ್ತು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ನಡುವೆಯೇ ಹಣಾಹಣಿಯಿದೆ.
(13 / 14)
ತುಮಕೂರಿನಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮತ್ತು ಮಾಜಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರ ನಡುವೆಯೇ ಸ್ಪರ್ಧೆ ಇದೆ.
ಇತರ ಗ್ಯಾಲರಿಗಳು