ಅಪ್ಪನ ಸ್ಮಾರಕದಲ್ಲಿ ಆಶೀರ್ವಾದ, ಟೆಂಪಲ್ ರನ್, ಲೋಕಸಭಾ ಅಖಾಡಕ್ಕೆ ಪ್ರಮುಖ ಕಲಿಗಳು ಧುಮುಕಿದ್ದು ಹೀಗೆ
- Karnataka Politics ಕರ್ನಾಟಕದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಪ್ರಮುಖರು ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.
- Karnataka Politics ಕರ್ನಾಟಕದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಪ್ರಮುಖರು ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.
(1 / 9)
ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿ ಸಮೀಪ ಇರುವ ತಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರ ಸ್ಮಾರಕದಲ್ಲಿ ನಮಸ್ಕರಿಸಿದರು,
(2 / 9)
ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ರಘುನಂದನಮೂರ್ತಿ ಅವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರೊಂದಿಗೆ ನಾಮಪತ್ರ ಸಲ್ಲಿಸಿದರು.
(3 / 9)
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಗುರುದತ್ತ ಹೆಗಡೆ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದರು. ನಟ ಶಿವರಾಜಕುಮಾರ್, ಎಂಎಲ್ಸಿ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಜತೆಗಿದ್ದರು.
(4 / 9)
ಕೇಂದ್ರ ಸಚಿವ ಹಾಗೂ ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಬೀದರ್ ಡಿಸಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿದರು.
(5 / 9)
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರು ನಾಮಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ, ತಾಯಿ ಲಕ್ಷ್ಮಿ ಹೆಬ್ಬಾಳಕರ್, ಶಾಸಕರಾದ ಲಕ್ಷ್ಮಣ ಸವದಿ, ಮಹಾಂತೇಶ ಕೌಜಲಗಿ ಅವರೊಂದಿಗೆ ಆಗಮಿಸಿದರು.
(6 / 9)
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್‌ನ ಮೃಣಾಲ್ ಹೆಬ್ಬಾಳಕರ್ ಭಾರೀ ಸಂಖ್ಯೆಯ ಕಾರ್ಯಕರ್ತರ ಬೆಂಬಲದೊಂದಿಗೆ ಆಗಮಿಸಿದರು.
(7 / 9)
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಾಮಪತ್ರವನ್ನು ಡಿಸಿ ದಿವ್ಯಪ್ರಭು ಅವರಿಗೆ ಸಲ್ಲಿಸಿದರು. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪ್ರತಿ ಪಕ್ಷ ಉಪನಾಯಕ ಅರವಿಂದ ಬೆಲ್ಲದ, ಜ್ಯೋತಿ ಜೋಶಿ ಜತೆಗಿದ್ದರು.
ಇತರ ಗ್ಯಾಲರಿಗಳು