Bangalore News: ಬೆಂಗಳೂರು ಆದಿಚುಂಚನಗಿರಿ ಮಠದಲ್ಲಿ ಬಿಜೆಪಿ ಅಭ್ಯರ್ಥಿಗಳ ಸಾಮೂಹಿಕ ಪರೇಡ್, ಸ್ವಾಮೀಜಿ ಆಶಿರ್ವಾದ ಪಡೆದ ನಾಯಕರು photos
- LoK Sabha Elections ಚುನಾವಣೆ ವೇಳೆ ಅಭ್ಯರ್ಥಿಗಳು ಮಠ ಮಾನ್ಯಗಳಿಗೆ ಭೇಟಿ ನೀಡುವುದು ಸಹಜ. ಕರ್ನಾಟಕದ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಕಣದಲ್ಲಿರುವ ಬಿಜೆಪಿ ಜೆಡಿಎಸ್‌ನ 14 ಅಭ್ಯರ್ಥಗಳು ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಡಾ.ನಿರ್ಮಲಾನಂದನಾಥಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಮಾಜಿ ಸಿಎಂ ಎಚ್‌ಡಿಕುಮಾರಸ್ವಾಮಿ ನೇತೃತ್ವ ವಹಿಸಿದ್ದರು.

(1 / 6)
ಆದಿಚುಂಚನಗಿರಿ ಮಠಕ್ಕೆ ಬಂದ ಬಿಜೆಪಿ ಜೆಡಿಎಸ್ ನ ಅಭ್ಯರ್ಥಿ ಯದುವೀರ್ ಒಡೆಯರ್, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.,ಅಶೋಕ್ ಅವರನ್ನು ಸ್ವಾಮೀಜಿ ಆಶೀರ್ವದಿಸಿದರು.
(2 / 6)
ಬೆಂಗಳೂರಿನ ಆದಿಚುಂಚನಗಿರಿ ಮಠಕ್ಕೆ ಬಂದ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವಾಮೀಜಿ ಗೌರವಿಸಿದರು,
(3 / 6)
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ, ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರನ್ನು ಸ್ವಾಮೀಜಿ ಆಶಿರ್ವದಿಸಿದರು.
(4 / 6)
ತುಮಕೂರು ಬಿಜೆಪಿ ಅಭ್ಯರ್ಥಿಯಾಗಿರುವ ಹಿರಿಯ ನಾಯಕ ವಿ.ಸೋಮಣ್ಣ ಅವರು ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶಿರ್ವಾದ ಪಡೆದುಕೊಂಡರು.
(5 / 6)
ಚುನಾವಣೆ ಮುನ್ನ ಬೆಂಗಳೂರಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸ್ವಾಮೀಜಿ ಅವರನ್ನು ಗೌರವಿಸಿದರು.
ಇತರ ಗ್ಯಾಲರಿಗಳು