ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Results: ಕರ್ನಾಟಕದಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ, ಹೀಗಿತ್ತು ಕೊನೆಯ ಕ್ಷಣದ ತಯಾರಿ Photos

Karnataka Results: ಕರ್ನಾಟಕದಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ, ಹೀಗಿತ್ತು ಕೊನೆಯ ಕ್ಷಣದ ತಯಾರಿ photos

  • ಲೋಕಸಭೆ ಚುನಾವಣೆಯ ಅಂತಿಮ ಘಟ್ಟ ಮತ ಎಣಿಕೆ. ಇದಕ್ಕೆ ಕರ್ನಾಟಕದಲ್ಲಿ ಅಂತಿಮ ಸಿದ್ದತೆ ಪೂರ್ಣಗೊಂಡಿದೆ. ಈ ಕುರಿತ ಚಿತ್ರಣ ಇಲ್ಲಿದೆ

ಚಿತ್ರದುರ್ಗ ಲೋಕಸಭಾ ಚುನಾವಣೆಯ ಮತ ಎಣಿಕೆ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದಲ್ಲಿ ನಡೆಯಲಿದ್ದು, ಮತ ಎಣಿಕೆಯ ಸಿದ್ಧತಾ ಕಾರ್ಯವನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರ ಸಾಮಾನ್ಯ ವೀಕ್ಷಕ ಮನೋಹರ್ ಮರಂಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ  ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ವೀಕ್ಷಿಸಿದರು. 
icon

(1 / 9)

ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರವಾದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಆವರಣದಲ್ಲಿ ಭಾರೀ ಭದ್ರತೆಯನ್ನು ಹಾಕಲಾಗಿದೆ.,
icon

(2 / 9)

ಬೀದರ್‌ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಇತರೆ ಅಧಿಕಾರಿಗಳು ಮಾಹಿತಿಯನ್ನು ನೀಡಿದರು.
icon

(3 / 9)

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ಮೊಹಮ್ಮದ್ ಇಜಾಜ್ ಅವರು ಇಂದು ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳಾದ ಡಾ:ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ .ಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
icon

(4 / 9)

ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ನೀರಾಜ್ ಕುಮಾರ್ ಅವರು ಇಂದು ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
icon

(5 / 9)

ವಿಜಯಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಅಂತಿಮ ಹಂತದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 
icon

(6 / 9)

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಸಹ್ಯಾದ್ರಿ ಕಾಲೇಜಿನಲ್ಲಿ ಅಂತಿಮ ಸಿದ್ದತೆಗಳು ಆಗಿವೆ. 
icon

(7 / 9)

ಚುನಾವಣಾ ಮತ ಎಣಿಕೆಯ ಸಂಬಂಧ ಮತ ಎಣಿಕೆ ಕೇಂದ್ರಗಳಾದ ತುಮಕೂರು ವಿಶ್ವ ವಿದ್ಯಾಲಯದ ವಿಜ್ಞಾನ ಕಾಲೇಜ್ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ  ಆವರಣ, ಭದ್ರತಾ ಕೊಠಡಿ ಮತ್ತು ಮತ ಎಣಿಕೆಯ ಸ್ಥಳಗಳನ್ನು ಜಿಲ್ಲಾಧಿಕಾರಿ ಸುಭಾ ಕಲ್ಯಾಣ್‌ ಹಾಗೂ ಇತರ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.  
icon

(8 / 9)

ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಾಗುವ ಕೇಂದ್ರಕ್ಕೆ ಕ್ಯಾಮರಾ ಕಣ್ಗಾವಲು ಒದಗಿಸಲಾಗಿದೆ. 
icon

(9 / 9)

ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಾಗುವ ಕೇಂದ್ರಕ್ಕೆ ಕ್ಯಾಮರಾ ಕಣ್ಗಾವಲು ಒದಗಿಸಲಾಗಿದೆ. 

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು