Maharashtra Elections 2024: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಹವಾ; ಹಲವು ಕಡೆಗಳಲ್ಲಿ ಭರ್ಜರಿ ಪ್ರಚಾರ
- ಕರ್ನಾಟಕದ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಮಹಾರಾಷ್ಟ್ರದಲ್ಲಿ ವಿಧಾನಸಭದ ಚುನಾವಣೆ ಪ್ರಚಾರ ನಡೆಸಿದರು. ಮಹಾರಾಷ್ಟ್ರದಲ್ಲಿ ಅವರ ದಿನಚರಿ ಹೀಗಿತ್ತು.
- ಕರ್ನಾಟಕದ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಮಹಾರಾಷ್ಟ್ರದಲ್ಲಿ ವಿಧಾನಸಭದ ಚುನಾವಣೆ ಪ್ರಚಾರ ನಡೆಸಿದರು. ಮಹಾರಾಷ್ಟ್ರದಲ್ಲಿ ಅವರ ದಿನಚರಿ ಹೀಗಿತ್ತು.
(1 / 9)
ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎರಡು ದಿನ ಪ್ರಚಾರ ಕೈಗೊಳ್ಳಲಿದ್ದು, ಇದಕ್ಕಾಗಿ ಮಹಾರಾಷ್ಟ್ರಕ್ಕೆ ಆಗಮಿಸಿದರು.
(2 / 9)
ಮಹಾರಾಷ್ಟ್ರದ ಶಿರಡಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಎಂ.ಬಿ.ಪಾಟೀಲ್. ಕಾಂಗ್ರೆಸ್‌ನ ಹಿರಿಯ ನಾಯಕರು ಬರ ಮಾಡಿಕೊಂಡರು,
(3 / 9)
ಶಿರಡಿ ವಿಮಾನ ನಿಲ್ದಾಣದಿಂದ ಶಾಸಕರಾದ ಕೆ.ಗೋವಿಂದರಾಜ್, ಬಸವನಗೌಡ ದದ್ದಲ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಹೊರ ಬಂದರು.
(5 / 9)
ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಜಮಖೇಡ್ ತಾಲೂಕಿನ ಚೋಂಡಿಯಲ್ಲಿರುವ ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರ ಪುಣ್ಯಲೋಕಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಗೌರವ ಸಲ್ಲಿಸಿದರು. ಸಚಿವರಾದ ಎಂ.ಬಿ.ಪಾಟೀಲ್, ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಾದ ಬಾಬಾ ಸಾಹೇಬ್ ತೋರಟ್ ಅವರು ಈ ವೇಳೆ ಇದ್ದರು.
(6 / 9)
ಮಹಾರಾಷ್ಟ್ರದ ಜತ್ ವಿಧಾನಸಭೆ ಕ್ಷೇತ್ರದ ಸಂಕ್ ಪಟ್ಟಣದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಮಹಾ ವಿಕಾಸ ಅಘಾಡಿ ಅಭ್ಯರ್ಥಿ ಕಾಂಗ್ರೆಸ್ ನ ವಿಕ್ರಂ ಸಾವಂತ್ ಅವರಿಗೆ ಮತನೀಡಿ ಆಶೀರ್ವದಿಸುವಂತೆ ಸಿದ್ದರಾಮಯ್ಯ ಮನವಿ ಮಾಡಿ ಪ್ರಣಾಳಿಕೆ ಬಿಡುಗಡೆಗೊಳಿದರು..
(7 / 9)
ಕಾಂಗ್ರೆಸ್ ಪಕ್ಷ ನುಡಿದಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ಕೊಟ್ಟು, ಜನರ ವಿಶ್ವಾಸ ಉಳಿಸಿಕೊಂಡಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಸರ್ಕಾರದ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಈ ವಿಚಾರವನ್ನು ಮತದಾರರಿಗೆ ಮನದಟ್ಟು ಮಾಡಿ, ಅಭಿವೃದ್ಧಿಗೆ ಮತ ನೀಡುವಂತೆ ಸಿದ್ದರಾಮಯ್ಯ ತಮ್ಮ ಪ್ರಚಾರ ಭಾಷಣದಲ್ಲಿ ಕೋರಿದರು.
(8 / 9)
ಮಹಾರಾಷ್ಟ್ರದ ಜತ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಜನತೆ.
ಇತರ ಗ್ಯಾಲರಿಗಳು