Mandya News: ಮಂಡ್ಯ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊರುಚರಿಗೆ ಆತ್ಮೀಯ ಆಹ್ವಾನ; ಮನೆಗೆ ತೆರಳಿ ಸ್ವಾಗತಿಸಿದ ಕಸಾಪ, ಜಿಲ್ಲಾಡಳಿತ
- ಮಂಡ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊರುಚ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಆತ್ಮೀಯವಾಗಿ ಆಹ್ವಾನಿಸಲಾಯಿತು.
- ಮಂಡ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊರುಚ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಆತ್ಮೀಯವಾಗಿ ಆಹ್ವಾನಿಸಲಾಯಿತು.
(1 / 6)
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರನ್ನು ಬೆಂಗಳೂರಿನಲ್ಲಿ ಮಂಡ್ಯ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ, ಜಿಲ್ಲಾಧಿಕಾರಿ ಡಾ. ಕುಮಾರ ಅವರು ಆತ್ಮೀಯವಾಗಿ ಗೌರವಿಸಿದರು.
(2 / 6)
ಮಂಡ್ಯದಲ್ಲಿ ಮುಂದಿನ ತಿಂಗಳು ಆಯೋಜನೆಗೊಂಡಿರುವ ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಯಶಸ್ವಿಯಾಗಿ ನಡೆಸಿಕೊಡುವಂತೆ ಮನವಿ ಪತ್ರವನ್ನೂ ನೀಡಲಾಯಿತು.
(3 / 6)
ಬೆಂಗಳೂರಿನಲ್ಲಿ ನೆಲೆಸಿರುವ ಗೊರುಚ ನಿವಾಸಕ್ಕೆ ತೆರಳಿದ ಮಂಡ್ಯ ಜಿಲ್ಲಾಡಳಿತ, ಕಸಾಪದ ತಂಡವು ಆತ್ಮೀಯವಾಗಿ ಸನ್ಮಾನಿಸಿತು.
(4 / 6)
ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೂರು ದಶಕದ ಹಿಂದೆ ನೀವೇ ಸಂಘಟಿಸಿದ್ದಿರಿ. ಈಗ ನೀವೇ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದಾಯಕ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನೆನಪಿಸಿದರು,
(5 / 6)
ಮಂಡ್ಯ ಸಮ್ಮೇಳನವನ್ನು ಅದ್ದೂರಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ದತೆಗಳು ನಡೆದಿವೆ. ಸ್ಮರಣೀಯವಾಗಿ ಸಮ್ಮೇಳನ ನಡೆಸಲು ಸರ್ಕಾರವೂ ಸಹಕಾರ ನೀಡುತ್ತಿದೆ ಎಂದು ಗೊರುಚ ಅವರಿಗೆ ಮಾಹಿತಿ ನೀಡಲಾಯಿತು.
ಇತರ ಗ್ಯಾಲರಿಗಳು