ನಾಳೆಯಿಂದ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ 2025, ನೋಡ ಬನ್ನಿ ಹೂವುಗಳಲ್ಲಿ ಮೇಲುಕೋಟೆ, ಮಹದೇಶ್ವರ ಬೆಟ್ಟದ ದೇಗುಲ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ನಾಳೆಯಿಂದ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ 2025, ನೋಡ ಬನ್ನಿ ಹೂವುಗಳಲ್ಲಿ ಮೇಲುಕೋಟೆ, ಮಹದೇಶ್ವರ ಬೆಟ್ಟದ ದೇಗುಲ

ನಾಳೆಯಿಂದ ಮಂಡ್ಯದಲ್ಲಿ ಫಲಪುಷ್ಪ ಪ್ರದರ್ಶನ 2025, ನೋಡ ಬನ್ನಿ ಹೂವುಗಳಲ್ಲಿ ಮೇಲುಕೋಟೆ, ಮಹದೇಶ್ವರ ಬೆಟ್ಟದ ದೇಗುಲ

  • ಮಂಡ್ಯದಲ್ಲಿ ಈ ಬಾರಿಯ ಫಲಪುಷ್ಪಪ್ರದರ್ಶನವು ಜನವರಿ 24ರಿಂದ ಐದು ದಿನಗಳ ಕಾಲ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ಪುಷ್ಪಗಳಲ್ಲಿ ದೇಗುಲಗಳನ್ನು ನೋಡುವ ಅವಕಾಶವಿದೆ. 

ಜಿಲ್ಲಾ ಪಂಚಾಯತ್, ತೋಟಗಾರಿಕಾ ಸಂಘ, ತೋಟಗಾರಿಕೆ ಇಲಾಖೆ ಇವರ ಸಹಯೋಗದಲ್ಲಿ "ಪ್ರತಿ ತುತ್ತಿಗೂ ರೈತರನ್ನು ಸ್ಮರಿಸೋಣ" ಶೀರ್ಷಿಕೆಯಡಿ ಜನವರಿ 24 ರಿಂದ 28 ರವರೆಗೆ ಮಂಡ್ಯ ತೋಟಗಾರಿಕೆ ಇಲಾಖೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ-2025 ನಡೆಯಲಿದೆ. 
icon

(1 / 6)

ತೋಟಗಾರಿಕೆ ಕಚೇರಿ ಆವರಣ ಹಾಗೂ ಕಾವೇರಿ ಉದ್ಯಾನವನದಲ್ಲಿ ಮನಸೂರೆಗೊಳ್ಳುವ ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಹಾಗೂ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳ ಸಮಗ್ರ ಮಾಹಿತಿಯನ್ನು ಫಲಪುಷ್ಪ ಪ್ರದರ್ಶನದಲ್ಲಿ ನೀಡಲಾಗುವುದು 
icon

(2 / 6)

ಮಂಡ್ಯ ಜಿಲ್ಲೆಯ ಪ್ರಸಿದ್ದ ದೇವಾಲಯವಾದ ಮೇಲುಕೋಟೆಯ ಯೋಗನರಸಿಂಹ ಸ್ವಾಮಿ ದೇವಾಲಯ. ಕರ್ನಾಟಕ ಪ್ರಸಿದ್ಧ ಪ್ರವಾಸಿ ತಾಣವಾದ ರಂಗನತಿಟ್ಟು. ಹಳ್ಳಿ ಸೊಗಡಿನ ರೈತನ ಮನೆ, ಏಳು ಬೆಟ್ಟದ ಒಡೆಯ ಮಲೆ ಮಹದೇಶ್ವರ ದೇವಾಲಯಗಳು ಫಲಪುಷ್ಪ ಪ್ರದರ್ಶನದ ಆಕರ್ಷಣೆಗಳಾಗಲಿವೆ 
icon

(3 / 6)

ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯಿAದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30,  6-12 ವರ್ಷದ ಮಕ್ಕಳಿಗೆ 20 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳ ಗುಂಪುಗಳಿಗೆ  ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತ 
icon

(4 / 6)

ಪ್ರಸ್ತುತ ಸಾಲಿನ ಫಲಪುಷ್ಪ ಪ್ರದರ್ಶನದಲ್ಲಿ 9ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ವಿವಿಧ ಬಣ್ಣದ ಗುಲಾಬಿ ಹೂವುಗಳನ್ನು ಬಳಸಿ ಪ್ರಸಿದ್ದ ದೇವಾಲಯ ಹಾಗೂ ಪ್ರಸಿದ್ದ ಪ್ರವಾಸಿ ತಾಣಗಳನ್ನು ನಿರ್ಮಿಸಲಾಗುತ್ತಿದೆ. 
icon

(5 / 6)

ಯುವ ಜನತೆಯನ್ನು ಸೆಳೆಯಲು ಹತ್ತು ವಿವಿಧ ಕಡೆಗಳಲ್ಲಿ ಸೆಲ್ಫಿ ಪಾಯಿಂಟ್, ಹೂವಿನ ಆಕೃತಿಯ ಕ್ಷಯ ರೋಗ ಕುರಿತು ಜಾಗೃತಿ, ನರೇಗಾ ಯೋಜನೆಯ ಮಾಹಿತಿಯೊನ್ನೊಳಗೊಂಡ ಸ್ಥಬ್ಥ ಚಿತ್ರ, ವಿವಿಧ ಆಕರ್ಷಕ ಬಗೆಯ ಅಡಿನಿಯಂ ಗಿಡಗಳ ಪ್ರದರ್ಶಿಕೆ, ಬೋನ್ಸಾಯ್ ಗಿಡಗಳ ಪ್ರದರ್ಶಿಕೆ, ವಿವಿಧ ತರಕಾರಿ ಹಣ್ಣುಗಳನ್ನು ಬಳಸಿ ಕಲಾಕೃತಿಗಳ ಕೆತ್ತನೆ ಹಾಗೂ ಇಕೆಬನಾ ಜೋಡಣೆ ಆಕರ್ಷಿಸಲಿವೆ 
icon

(6 / 6)

ಇತರ ಗ್ಯಾಲರಿಗಳು