Kannada Sahitya Sammelana: ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಯಾರಿ ಜೋರು, ವೇದಿಕೆ ನಿರ್ಮಾಣಕ್ಕೂ ಭೂಮಿ ಪೂಜೆ
- ಮಂಡ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬೃಹತ್ ವೇದಿಕೆ ಹಾಗೂ ಇತರೆ ಚಟುವಟಕೆಗಳಿಗೆ ತಯಾರಿ ಶುರುವಾಗಿದೆ.
- ಮಂಡ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬೃಹತ್ ವೇದಿಕೆ ಹಾಗೂ ಇತರೆ ಚಟುವಟಕೆಗಳಿಗೆ ತಯಾರಿ ಶುರುವಾಗಿದೆ.
(1 / 6)
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024 ರ ಸಂಬಂಧ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಮಂಡ್ಯದ ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇಂದು ಭೂಮಿ ಪೂಜೆಯನ್ನು ನೆರವೇರಿಸಿದರು.
(2 / 6)
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21 ಹಾಗೂ 22 ರಂದು 3 ದಿನಗಳ ಕಾಲ 87ನೇ ಮಂಡ್ಯದಲ್ಲಿ ನಡೆಯಲಿದೆ ಎಂದು ಈಗಾಗಲೇ ತೀರ್ಮಾನವಾಗಿದೆ. ಸಮ್ಮೇಳನಕ್ಕೆ ಕೇವಲ ಒಂದು ತಿಂಗಳು ಬಾಕಿ ಇದೆ. ವೇದಿಕೆ ನಿರ್ಮಾಣಕ್ಕೆ ಇಂದು ಭೂಮಿ ಪೂಜೆಯು ಯಾವುದೇ ವಿಘ್ನಗಳಿಲ್ಲದೆ ನೆರವೇರಿದ್ದು, ಇಂದಿನಿಂದ ವೇದಿಕೆ ನಿರ್ಮಾಣದ ಚಟುವಟಿಕೆಗಳು ಪ್ರಾರಂಭವಾಗಲಿದೆ
(3 / 6)
ರಾಜ್ಯದ ವಿವಿಧ ಭಾಗಗಳಿಂದ ಎಲ್ಲಾ ಸಾಹಿತಿಗಳು, ಕನ್ನಡಾಭಿಮಾನಿಗಳು, ಕನ್ನಡ ಪರ ಹೋರಾಟಗಾರರು, ಕನ್ನಡ ಸಂಘಟನೆಗಳು ಹಾಗೂ ಅನೇಕ ಗಣ್ಯರು ಸಮ್ಮೇಳನಕ್ಕೆ ಆಗಮಿಸಲಿದ್ದಾರೆ. ಇದಕ್ಕಾಗಿ ವಿಶಾಲ ವೇದಿಕೆ ಅಣಿಯಾಗುತ್ತಿದೆ.
(4 / 6)
ಮ್ಮೇಳನದ ಜವಾಬ್ದಾರಿಯು ಕೇಂದ್ರ ಸಾಹಿತ್ಯ ಪರಿಷತ್ತು, ಜಿಲ್ಲಾ ಸಾಹಿತ್ಯ ಪರಿಷತ್ತು, ಸರ್ಕಾರ, ಜಿಲ್ಲಾಡಳಿತ, ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಮೇಲಿದ್ದು, ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎನ್ನುವುದು ಸಚಿವ ಚಲುವರಾಯಸ್ವಾಮಿ ವಿವರಣೆ.
(5 / 6)
ಸಾಹಿತ್ಯ ಸಮ್ಮೇಳನಕ್ಕೆ ಸುಮಾರು 3 ಲಕ್ಷದಿಂದ 4 ಲಕ್ಷದವರೆಗೆ ಜನರು ಬರುತ್ತಾರೆ ಎಂದು ಅಂದಾಜಿಸಲಾಗಿದ್ದು, ಅವರಿಗೆ ಬರುವವರಿಗೆ ಊಟ, ಪಾರ್ಕಿಂಗ್ ವ್ಯವಸ್ಥೆ, ಘೋಷ್ಠಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು
ಇತರ ಗ್ಯಾಲರಿಗಳು