ನಿರ್ದೇಶಕ ಮಂಸೋರೆ ಸಿನಿ ಬತ್ತಳಿಕೆಯಿಂದ ಹೊರಬಂತು ʻದೂರ ತೀರ ಯಾನʼ ಚಿತ್ರದ ಮೊದಲ ಪ್ರೇಮಗೀತೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ನಿರ್ದೇಶಕ ಮಂಸೋರೆ ಸಿನಿ ಬತ್ತಳಿಕೆಯಿಂದ ಹೊರಬಂತು ʻದೂರ ತೀರ ಯಾನʼ ಚಿತ್ರದ ಮೊದಲ ಪ್ರೇಮಗೀತೆ

ನಿರ್ದೇಶಕ ಮಂಸೋರೆ ಸಿನಿ ಬತ್ತಳಿಕೆಯಿಂದ ಹೊರಬಂತು ʻದೂರ ತೀರ ಯಾನʼ ಚಿತ್ರದ ಮೊದಲ ಪ್ರೇಮಗೀತೆ

  • ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ, ʻದೂರ ತೀರ ಯಾನʼ ಸಿನಿಮಾದ ಮೊದಲ ಪ್ರೇಮಗೀತೆ ಎಂ ಆರ್ ಟಿ ಮ್ಯೂಸಿಕ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಮಂಸೋರೆ ನಿರ್ದೇಶನದ ಈ ಸಿನಿಮಾವನ್ನು ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಆರ್. ದೇವರಾಜ್ ನಿರ್ಮಿಸಿದ್ದಾರೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಇದೀಗ ದೂರ ತೀರ ಯಾನ ಸಿನಿಮಾ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ಇನ್ನೇನು ಬಿಡುಗಡೆಗೆ ಅಣಿಯಾಗಿರುವ ಈ ಸಿನಿಮಾದಿಂದ ಮೊದಲ ಹಾಡು ಬಿಡುಗಡೆ ಆಗಿದೆ. ಕವಿರಾಜ್ ಬರೆದಿರುವ ಸಾಹಿತ್ಯಕ್ಕೆ, ಬಕ್ಕೇಶ್- ಕಾರ್ತಿಕ್ ಸ್ವರ ಸಂಯೋಜನೆ ಮಾಡಿದ್ದು, ಖ್ಯಾತ ಗಾಯಕರಾದ ಅರ್ಮಾನ್ ಮಲಿಕ್ ಹಾಡಿದ್ದಾರೆ.
icon

(1 / 5)

ಮಂಸೋರೆ ಬರೆದಿರುವ ಕಥೆಗೆ ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ. ಈ ಸಿನೆಮಾದಲ್ಲಿ ಒಟ್ಟು ಆರು ಹಾಡುಗಳಿದ್ದು, ಬಕ್ಕೇಶ್ ಹಾಗೂ ಕಾರ್ತೀಕ್ ಹಾಡುಗಳನ್ನು ಸಂಯೋಜಿಸಿದ್ದಾರೆ. ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಹಾಡುಗಳನ್ನು ಬರೆದಿದ್ದಾರೆ.
icon

(2 / 5)

ಸಿನೆಮಾದ ಶೀರ್ಷಿಕೆ ಗೀತೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ತಿಳಿಸಿರುವ ನಿರ್ದೇಶಕ ಮಂಸೋರೆಯವರು, ಆ ಹಾಡನ್ನು ವಿಶೇಷವಾಗಿ ಪ್ರೇಕ್ಷಕರಿಂದಲೇ ಬಿಡುಗಡೆ ಮಾಡಿಸುವ ಆಲೋಚನೆ ಇದ್ದು, ರಾಜ್ಯದ ಪ್ರಮುಖ ನಗರವೊಂದರಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿರುವುದಾಗಿ ತಿಳಿಸಿದ್ದಾರೆ.
icon

(3 / 5)

ಮಂಸೋರೆ ನಿರ್ದೇಶನ ಮಾಡಿರುವ ಈ ಸಿನೆಮಾ ಬೆಂಗಳೂರು, ಉಡುಪಿ, ಕುಂದಾಪುರ, ಗೋಕರ್ಣ, ಮುರುಡೇಶ್ವರ, ಕಾರವಾರ, ಯಲ್ಲಾಪುರ, ದಾಂಡೇಲಿ, ಗೋವಾದಲ್ಲಿ 40 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಸಿನೆಮಾ ಡಬ್ಬಿಂಗ್ ಕೆಲಸಗಳು ಭರದಿಂದ ಸಾಗಿದೆ. ಜುಲೈ ತಿಂಗಳಿನಲ್ಲಿ ತೆರೆಗೆ ತರುವುದಾಗಿ, ನಿರ್ಮಾಪಕರಾದ ದೇವರಾಜ್ ಆರ್. ರವರು ತಿಳಿಸಿದ್ದಾರೆ.
icon

(4 / 5)

ಇದೊಂದು ಪ್ರೇಮಕಥೆ ಆಧರಿಸಿದ ಸಿನೆಮಾ ಆಗಿದ್ದು, ಹರೆಯದ ಇಬ್ಬರು ಪ್ರೇಮಿಗಳು ಬೆಂಗಳೂರಿನಿಂದ ಗೋವಾಗೆ ಪಯಣ ಆರಂಭಿಸಿ, ಆ ಪ್ರಯಾಣದಲ್ಲಿ ತಮ್ಮ ಪ್ರೀತಿಯ ಅರ್ಥ ಹುಡುಕಿಕೊಳ್ಳುವುದು ಮೂಲಕಥೆಯಾಗಿದೆ. ಈ ಸಿನೆಮಾಗೆ ಸರವಣ ಕುಮಾರ್ ಅವರ ಕಲಾನಿರ್ದೇಶನವಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತರಾದ ನಾಗೇಂದ್ರ ಕೆ ಉಜ್ಜನಿ ಅವರು ಸಿನೆಮಾದ ಸಂಕಲನ ಮಾಡುತ್ತಿದ್ದಾರೆ.
icon

(5 / 5)

Manjunath B Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.

ಇತರ ಗ್ಯಾಲರಿಗಳು