MOM Awards: 2024ರಲ್ಲಿ ಅಧಿಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಜಯಿಸಿದ ಆಟಗಾರರ ಪಟ್ಟಿ ಇಲ್ಲಿದೆ; ಭಾರತದ ಆಟಗಾರನಿಗೂ ಸ್ಥಾನ!
- Most MOM Awards: 2024ರ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಫಾರ್ಮೆಟ್ಗಳೂ ಸೇರಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರು ಯಾರು ಎಂಬುದನ್ನು ಈ ಮುಂದೆ ತಿಳಿಯೋಣ.
- Most MOM Awards: 2024ರ ಕ್ಯಾಲೆಂಡರ್ ವರ್ಷದಲ್ಲಿ ಎಲ್ಲಾ ಫಾರ್ಮೆಟ್ಗಳೂ ಸೇರಿ ಅತಿ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರು ಯಾರು ಎಂಬುದನ್ನು ಈ ಮುಂದೆ ತಿಳಿಯೋಣ.
(1 / 5)
ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಟ್ರಾವಿಡ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಭಾರತ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಶತಕ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಅದ್ಭುತ ಪ್ರದರ್ಶನಕ್ಕಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ. ಇದು ಅವರಿಗೆ ಸಿಕ್ಕ ಆರನೇ ಪ್ರಶಸ್ತಿಯಾಗಿದೆ. ಹಾಗಾಗಿ ಈ ವರ್ಷ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
(AFP)(2 / 5)
ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್ ಎರಡನೇ ಸ್ಥಾನದಲ್ಲಿದ್ದಾರೆ. ಈ ವರ್ಷ ಆಡಿದ 26 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇಂದು (ಡಿಸೆಂಬರ್ 8) ನ್ಯೂಜಿಲೆಂಡ್ ವಿರುದ್ಧ ಶತಕ ಸಿಡಿಸಿದ ಬ್ರೂಕ್, ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದರು. ಇದರೊಂದಿಗೆ ಈ ವರ್ಷದ ಐದನೇ ಮ್ಯಾನ್ ಆಫ್ ದ ಪ್ರಶಸ್ತಿ ಗೆದ್ದರು.
(AP)(3 / 5)
ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ಚರಿತ್ ಅಸಲಂಕಾ ಮತ್ತು ಪಾತುಮ್ ನಿಸ್ಸಾಂಕಾ ಪಟ್ಟಿಯಲ್ಲಿ 3 ಮತ್ತು 4ನೇ ಸ್ಥಾನದಲ್ಲಿದ್ದಾರೆ. 36 ಪಂದ್ಯಗಳನ್ನು ಆಡಿರುವ ಚರಿತ್ ಮತ್ತು 35 ಪಂದ್ಯಗಳನ್ನು ಆಡಿರುವ ಪಾಥುಮ್ ತಲಾ ಐದು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.
(AP)(4 / 5)
ಈ ಪಟ್ಟಿಯಲ್ಲಿ ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಸೇರಿದ್ದಾರೆ. ಬುಮ್ರಾ 19 ಪಂದ್ಯಗಳಲ್ಲಿ ನಾಲ್ಕು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ. ಭಾರತ ಟಿ20 ವಿಶ್ವಕಪ್ ಗೆಲುವಿನಲ್ಲಿ ಬುಮ್ರಾ ಪ್ರಮುಖ ಪಾತ್ರ ವಹಿಸಿದ್ದರು.
(AP)ಇತರ ಗ್ಯಾಲರಿಗಳು