ಒಂದೇ ವರ್ಷ ಅತಿ ಹೆಚ್ಚು ಸಿಕ್ಸರ್; ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್
- ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಪಂದ್ಯದಲ್ಲಿ ಜೈಸ್ವಾಲ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಬರೆದಿದ್ದಾರೆ. ವರ್ಷವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಐದು ಆಟಗಾರರ ಪಟ್ಟಿ ಇಲ್ಲಿದೆ.

(1 / 5)
ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಭಾರತದ ಯುವ ಆರಂಭಿಕ ಆಟಗಾರ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ. ಪರ್ತ್ ಟೆಸ್ಟ್‌ನಲ್ಲಿ ನಾಥನ್ ಲಿಯಾನ್ 51.4 ಓವರ್‌ನಲ್ಲಿ ದೈತ್ಯ ಸಿಕ್ಸರ್ ಬಾರಿಸಿದ ಎಡಗೈ ಆರಂಭಿಕ ಬ್ಯಾಟರ್, ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ವಿಶ್ವದಾಖಲೆ ನಿರ್ಮಿಸಿದರು.
(2 / 5)
ಜೈಸ್ವಾಲ್ 2024ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು 34 ಸಿಕ್ಸರ್ ಬಾರಿಸಿದ್ದಾರೆ. ಪರ್ತ್‌ನಲ್ಲಿ ನಡೆದ ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಎರಡು ಸಿಕ್ಸರ್ ಬಾರಿಸಿದರು. ಇದರೊಂದಿಗೆ ನ್ಯೂಜಿಲೆಂಡ್ ಮಾಜಿ ಆಟಗಾರ ಬ್ರೆಂಡನ್ ಮೆಕಲಮ್ ಅವರನ್ನು ಅತಿ ಹೆಚ್ಚು ಸಿಕ್ಸರ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಇಳಿಸಿದ್ದಾರೆ. ಮೆಕಲಮ್ 2014ರಲ್ಲಿ 33 ಟೆಸ್ಟ್ ಸಿಕ್ಸರ್ ಬಾರಿಸಿದ್ದರು. (ಚಿತ್ರ: ಎಎಫ್‌ಪಿ)
(3 / 5)
ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು 2022ರಲ್ಲಿ 26 ಸಿಕ್ಸರ್ ಬಾರಿಸಿದ್ದರು. ಆಡಮ್ ಗಿಲ್ಕ್ರಿಸ್ಟ್ ಮತ್ತು ವೀರೇಂದ್ರ ಸೆಹ್ವಾಗ್ ಜಂಟಿಯಾಗಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಸ್ಟಾರ್ ಆಟಗಾರ 2005ರಲ್ಲಿ 22 ಸಿಕ್ಸರ್ ಬಾರಿಸಿದ್ದರು. 2008ರಲ್ಲಿ ಭಾರತದ ಮಾಜಿ ತಾರೆ ಸೆಹ್ವಾಗ್ 22 ಸಿಕ್ಸರ್ ಬಾರಿಸಿದ್ದರು.
(4 / 5)
ಇದೀಗ ಎಲ್ಲಾ ದಿಗ್ಗಜರ ದಾಖಲೆಯನ್ನು ಜೈಸ್ವಾಲ್ ಮುರಿದಿದ್ದಾರೆ. ಆಸೀಸ್ ವಿರುದ್ಧ ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಕ್ರೀಶ್‌ಕಚ್ಚಿ ಆಡುತ್ತಿದ್ದಾರೆ. ಎರಡನೇ ದಿನದ ಅಂತ್ಯಕ್ಕೆ 90 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ. (ಚಿತ್ರ: ಎಎಫ್‌ಪಿ)
ಇತರ ಗ್ಯಾಲರಿಗಳು