Hondisi Bareyiri Movie Team: ಹೊಂದಿಸಿ ಬರೆದಾಗ ಫೋಟೋ ಕಣ್ಣಿಗೆ ಕಾಣಿಸಿದ್ದು ಇಷ್ಟು..
- ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ 'ಹೊಂದಿಸಿ ಬರೆಯಿರಿ' ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಬಹು ದೊಡ್ಡ ಹಾಗೂ ಕಲರ್ ಫುಲ್ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

(1 / 6)
ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ 'ಹೊಂದಿಸಿ ಬರೆಯಿರಿ' ಸಿನಿಮಾ.(Instagram/ Bhavana Rao)
(2 / 6)
ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ. ಈಗಾಗಲೇ ಚಿತ್ರದ ಸ್ಯಾಂಪಲ್ ಗಳ ಮೂಲಕ ಗಮನ ಸೆಳೆದಿರುವ ಈ ಚಿತ್ರ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.(Instagram/ Bhavana Rao)
(3 / 6)
ಚಿತ್ರದಲ್ಲಿ ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್ ನಲ್ಲಿ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.(Instagram/ Bhavana Rao)
(4 / 6)
ನಿರ್ದೇಶಕ ಜಗನ್ನಾಥ್ ಗಿದು ಮೊದಲ ಸಿನಿಮಾ. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ತಾವೇ ಮಾಡಿದ್ದಾರೆ.(Instagram/ Bhavana Rao)
(5 / 6)
ಸಂಡೇ ಸಿನಿಮಾಸ್ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದಾರೆ.(Instagram/ Bhavana Rao)
ಇತರ ಗ್ಯಾಲರಿಗಳು