ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ; ಹೂ, ತಳಿರು ತೋರಣದಿಂದ ಕಂಗೊಳಿಸಿದ ದೇವಸ್ಥಾನ Photo Gallery
ಇಂದು ಮೊದಲ ಆಷಾಢ ಶುಕ್ರವಾರವಾಗಿದ್ದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿದೆ. ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.
(1 / 7)
ಆಷಾಢ ಶುಕ್ರವಾರದ ಅಂಗವಾಗಿ ಮೈಸೂರಿನ ಎಲ್ಲಾ ದೇವಸ್ಥಾನಗಳು, ವಿಶೇಷವಾಗಿ ಚಾಮುಂಡಿ ಬೆಟ್ಟದ ದೇವಸ್ಥಾನವನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. (PC: Mahendra M Shiva)
(2 / 7)
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಮೈಸೂರು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತರೆಡ್ಡಿ ತಾಯಿಯ ದರ್ಶನ ಪಡೆದು, ಎಲ್ಲಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.
(3 / 7)
ಭಕ್ತರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತು, ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಿದ್ದಾರೆ. ಆದರೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ವಾಹನ ಪ್ರವೇಶ ನಿಷೇಧಿಸಲಾಗಿದ್ದು ಜಿಲ್ಲಾಡಳಿತ ಏರ್ಪಡಿಸಿರುವ ಬಸ್‌ಗಳಲ್ಲಿ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. .
(4 / 7)
ದೇವಿಯ ದರ್ಶನಕ್ಕಾಗಿ ಬರುವ ಭಕ್ತರಿಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಮಹಲ್ ಬಳಿಯಿರುವ ಮೈದಾನದಿಂದ 40 ಉಚಿತ ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
(5 / 7)
ಆಷಾಢ ಶ್ರುಕ್ರವಾರದ ಅಂಗವಾಗಿ ಚಾಮುಂಡಿ ಬೆಟ್ಟದಲ್ಲಿ ಜರುಗಿದ ವಿಶೇಷ ಪೂಜಾ ಕೈಂಕರ್ಯಗಳ ಕುರಿತು ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
(6 / 7)
ಭಕ್ತರು ಮಧ್ಯರಾತ್ರಿಯಿಂದಲೇ ಚಾಮುಂಡಿ ಬೆಟ್ಟದ ಬಳಿ ಬಂದು ದೇವಿಯ ದರ್ಶನ ಪಡೆಯಲು ಕಾಯುತ್ತಿದ್ದಾರೆ. ಹೊರ ರಾಜ್ಯಗಳಿಂದಲೂ ಭಕ್ತರು ಮೈಸೂರಿಗೆ ಆಗಮಿಸುತ್ತಿದ್ದಾರೆ.
ಇತರ ಗ್ಯಾಲರಿಗಳು