ಕನ್ನಡ ಸುದ್ದಿ  /  Photo Gallery  /  Mysuru News Lok Sabha Election Mysore Kodagu Bjp Congress Candidates Nomination Yaduveer Wadiyar N Lakshman Rgs

ಲೋಕಸಭಾ ಚುನಾವಣೆ; ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ, ಮೆರವಣಿಗೆಯ ಚಿತ್ರನೋಟ

ಕರ್ನಾಟಕದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎನ್ ಲಕ್ಷ್ಮಣ್ ಇಂದು ನಾಮಪತ್ರ ಸಲ್ಲಿಸುವ ಚುನಾವಣೆ ಕಣ ಮತ್ತಷ್ಟು ರಂಗೇರಿತು. ಈ ಸನ್ನಿವೇಶದ ಚಿತ್ರನೋಟ ಇಲ್ಲಿದೆ. (ವರದಿ- ರಂಗಸ್ವಾಮಿ, ಮೈಸೂರು) 

ಲೋಕಸಭಾ ಚುನಾವಣೆ; ಮೈಸೂರು ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎನ್ ಲಕ್ಷ್ಮಣ್ ಇಂದು (ಏಪ್ರಿಲ್ 3) ನಾಮಪತ್ರ ಸಲ್ಲಿಸಿದರು.
icon

(1 / 9)

ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರು ಅರಮನೆಯ ಬಲರದ್ವಾರದ ಬಳಿಯಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲು ತೆರಳಿದರು.
icon

(2 / 9)

ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿಯಿಂದ ಬಿಜೆಪಿ-ಜೆಡಿಎಸ್ ನ ಪ್ರಮುಖ ನಾಯಕರು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಸಾಗಿದರು. ಉಭಯ ಪಕ್ಷಗಳ ಕಾರ್ಯರ್ತರಿಗೆ ಒಗ್ಗಟ್ಟಿನ ಸಂದೇಶ ರವಾನಿಸಿದರು. ಸಾವಿರಾರು ಮಂದಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಮೈತ್ರಿ ಅಭ್ಯರ್ಥಿ ಯದುವೀರ್ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು. 
icon

(3 / 9)

ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ, ಅಭ್ಯರ್ಥಿ ಯದುವೀರ್ ಒಡೆಯರ್, ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಸಂಸದ ಪ್ರತಾಪ ಸಿಂಹ, ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ಮತ್ತು ಇತರರು ತೆರೆದ ವಾಹನದಲ್ಲಿದ್ದರು.
icon

(4 / 9)

ಯದುವೀರ್ ನಾಮಪತ್ರ ಸಲ್ಲಿಸಿದ ವೇಳೆ  ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಜೆಡಿಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್‌‌ ಡಿ‌ ಕುಮಾರಸ್ವಾಮಿ ಜೊತೆಗಿದ್ದರು.
icon

(5 / 9)

ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ ಲಕ್ಷ್ಮಣ್ ನಾಮಪತ್ರ ಸಲ್ಲಿಸಲು ತೆರಳುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಮುಖ ನಾಯಕರು ಜೊತೆಗಿದ್ದರು.
icon

(6 / 9)

ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಕೂಡ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ತೆರಳಿದ್ದರು. ಭಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೊತೆಗಿದ್ದರು.
icon

(7 / 9)

ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಇತರರು ತೆರೆದ ವಾಹನದಲ್ಲಿ ಇದ್ದರು.
icon

(8 / 9)

ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಹಾಗು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಅವರಿಗೆ ಎಂ ಲಕ್ಷ್ಮಣ್ ನಾಮಪತ್ರ ಸಲ್ಲಿಸಿದ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವ ಕೆ ವೆಂಕಟೇಶ್, ಶಾಸಕ ತನ್ವೀರ್ ಸೇಠ್ ಉಪಸ್ಥಿತರಿದ್ದರು.
icon

(9 / 9)

IPL_Entry_Point

ಇತರ ಗ್ಯಾಲರಿಗಳು