ಅಮೆರಿಕದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ; ವಿಶ್ವದ ಶ್ರೀಮಂತ ಎಲಾನ್ ಮಸ್ಕ್ ಭೇಟಿ -Photos
- ಫ್ರಾನ್ಸ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ, ನೇರವಾಗಿ ಅಮೆರಿಕದ ರಜಧಾನಿ ವಾಷಿಂಗ್ಟನ್ ಡಿಸಿಗೆ ಬಂದಿಳಿದಿದ್ದಾರೆ. ಇದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಯುಎಸ್‌ಎನಲ್ಲಿ ಪ್ರಮುಖ ನಾಯಕರನ್ನು ಮೋದಿ ಭೇಟಿಯಾಗಿದ್ದಾರೆ. ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರೊಂದಿಗಿನ ಸಭೆಯಲ್ಲಿ ಮೋದಿ ಭಾಗವಹಿಸಿದ್ದಾರೆ.

(1 / 7)
ವಾಷಿಂಗ್ಟನ್‌ನ ಬ್ಲೇರ್ ಹೌಸ್‌ನಲ್ಲಿ ಟೆಸ್ಲಾ ಮೋಟಾರ್ಸ್ ಸಿಇಒ ಎಲೋನ್ ಮಸ್ಕ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದರು. ಈ ವೇಳೆ ಮೋದಿಗೆ ಮಸ್ಕ್ ನೆನಪಿನ ಕಾಣಿಕೆ ನೀಡಿದರು.
(@NarendraModi)(2 / 7)
ಫೆಬ್ರುವರಿ 13ರಂದು ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಬ್ಲೇರ್ ಹೌಸ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ದಿನದಂದು ಎಲೋನ್ ಮಸ್ಕ್ ಮಗ ಎಕ್ಸ್ ಎ 12ನೊಂದಿಗೆ ನಡೆದುಕೊಂಡು ಹೋಗುತ್ತಿರುವ ದೃಶ್ಯ.
(REUTERS)(3 / 7)
ಟೆಸ್ಲಾ ಮೋಟಾರ್ಸ್ ಸಿಇಒ ಎಲೋನ್ ಮಸ್ಕ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆಗಾಗಿ ಬ್ಲೇರ್ ಹೌಸ್‌ಗೆ ಆಗಮಿಸುತ್ತಿರುವ ದೃಶ್ಯ.
(PTI)(4 / 7)
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಾಷಿಂಗ್ಟನ್ ಡಿಸಿಯ ಬ್ಲೇರ್ ಹೌಸ್‌ನಲ್ಲಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. (ಎಎನ್ಐ ಫೋಟೋ)
(DPR PMO)(5 / 7)
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.
(PTI)(6 / 7)
ಎರಡು ದಿನಗಳ ಫ್ರಾನ್ಸ್ ಪ್ರವಾಸದ ನಂತರ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದಾರೆ. ಫ್ರಾನ್ಸ್‌ನಲ್ಲಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.
(PTI)ಇತರ ಗ್ಯಾಲರಿಗಳು