Sun Transit: 2025ರಲ್ಲಿ ಮಕರ ರಾಶಿಗೆ ಸೂರ್ಯನ ಪ್ರವೇಶ; ಈ 3 ರಾಶಿಯವರಿಗೆ ಹೊಸ ವರ್ಷ ತರಲಿದೆ ಅದೃಷ್ಟ, ಇಷ್ಟಗಳೆಲ್ಲವೂ ನೆರವೇರುವ ಕಾಲ
- ಜ್ಯೋತಿಷ್ಯಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವು ನಿರ್ದಿಷ್ಟ ಅಂತರದಲ್ಲಿ ತನ್ನ ರಾಶಿಯನ್ನು ಬದಲಿಸುತ್ತದೆ. ಇದು ಎಲ್ಲಾ 12 ರಾಶಿಯವರ ಮೇಲೂ ಪರಿಣಾಮ ಬೀರುತ್ತದೆ. ಸೂರ್ಯನನ್ನು ನವಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗಿದೆ. ಸೂರ್ಯನು ತಿಂಗಳಿಗೊಮ್ಮೆ ಚಿಹ್ನೆಯನ್ನು ಬದಲಿಸುತ್ತಾನೆ. ಜನವರಿಯಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶ ಪಡೆಯುತ್ತಾನೆ.
- ಜ್ಯೋತಿಷ್ಯಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವು ನಿರ್ದಿಷ್ಟ ಅಂತರದಲ್ಲಿ ತನ್ನ ರಾಶಿಯನ್ನು ಬದಲಿಸುತ್ತದೆ. ಇದು ಎಲ್ಲಾ 12 ರಾಶಿಯವರ ಮೇಲೂ ಪರಿಣಾಮ ಬೀರುತ್ತದೆ. ಸೂರ್ಯನನ್ನು ನವಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗಿದೆ. ಸೂರ್ಯನು ತಿಂಗಳಿಗೊಮ್ಮೆ ಚಿಹ್ನೆಯನ್ನು ಬದಲಿಸುತ್ತಾನೆ. ಜನವರಿಯಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶ ಪಡೆಯುತ್ತಾನೆ.
(1 / 8)
2025ರ ಸೂರ್ಯನ ಸ್ಥಾನಪಲ್ಲಟವು ಕೆಲವು ರಾಶಿಯವರಿಗೆ ಭಾರಿ ಅದೃಷ್ಟವನ್ನು ತರಲಿದೆ. ಹೊಸ ವರ್ಷ ಮೊದಲ ತಿಂಗಳಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಸುಮಾರು 1 ವರ್ಷದ ಬಳಿಕ ಸೂರ್ಯನು ಮಕರ ರಾಶಿಗೆ ಪ್ರವೇಶ ಮಾಡುತ್ತಿದ್ದು, ಇದರ ಪರಿಣಾಮ ದ್ವಾದಶ ರಾಶಿಗಳ ಮೇಲಾಗಲಿದೆ. ಸೂರ್ಯ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟವನ್ನು ತರುತ್ತದೆ. ಸೂರ್ಯ ಸಂಕ್ರಮಣದಿಂದ ಯಾವೆಲ್ಲಾ ರಾಶಿಯವರ ಅದೃಷ್ಟ ಬದಲಾಗಲಿದೆ ನೋಡಿ.
(2 / 8)
ಸೂರ್ಯನು ಧನು ರಾಶಿಯಲ್ಲಿ 2ನೇ ಮನೆಗೆ ಹೋಗುತ್ತಾನೆ. ಹೀಗಾಗಿ ಈ ರಾಶಿಯವರು ಅನಿರೀಕ್ಷಿತ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ನಿಮ್ಮ ಮಾತಿನ ಕಾರಣದಿಂದ ಅನೇಕ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ನಿಮ್ಮ ಮೌಲ್ಯ ಮತ್ತು ಗೌರವ ಹೆಚ್ಚಾಗುತ್ತದೆ. ಜೀವನ ಸುಖಮಯವಾಗಿರುತ್ತದೆ. ಆರ್ಥಿಕ ಸ್ಥಿತಿ ಅಭಿವೃದ್ಧಿಯಾಗಲಿದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಇದು ಅವರಿಗೆ ಉತ್ತಮ ಲಾಭವನ್ನು ನೀಡುತ್ತದೆ. ಇದು ನಿಮ್ಮ ವ್ಯಾಪಾರವನ್ನು ವಿಸ್ತರಿಸುತ್ತದೆ.
(3 / 8)
ಸೂರ್ಯನು ತುಲಾ ರಾಶಿಯ 4ನೇ ಮನೆಗೆ ಸಂಚರಿಸುತ್ತಾನೆ. ಇದು ಈ ರಾಶಿಯವರಿಗೆ ಸೌಕರ್ಯವನ್ನು ಹೆಚ್ಚಿಸುತ್ತದೆ. ಹೊಸ ವಾಹನ ಮತ್ತು ಆಸ್ತಿ ಖರೀದಿಸುವ ಅವಕಾಶ ಎದುರಾಗುತ್ತದೆ.
(4 / 8)
ವ್ಯಾಪಾರಸ್ಥರಿಗೆ ಸೂರ್ಯನ ಆಶೀರ್ವಾದವು ತುಂಬಾ ಪ್ರಯೋಜನಕಾರಿಯಾಗಿದೆ. ನೀವು ಈಗಾಗಲೇ ಹೂಡಿಕೆ ಮಾಡಿದ್ದರೆ ಆ ಹೂಡಿಕೆಗಳಿಂದ ಸಾಕಷ್ಟು ಲಾಭವನ್ನು ಪಡೆಯುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಉತ್ತಮ ಲಾಭ ದೊರೆಯಲಿದೆ.
(5 / 8)
ಸೂರ್ಯನು ವೃಷಭ ರಾಶಿಯ 9ನೇ ಮನೆಗೆ ಚಲಿಸುತ್ತಾನೆ. ಇದರಿಂದ ಈ ರಾಶಿಯ ಅದೃಷ್ಟ ಸೂರ್ಯನಂತೆ ಬೆಳಗಲಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ.
(6 / 8)
ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗುತ್ತಾರೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಕೆಲಸದ ನಿಮಿತ್ತ ಪ್ರಯಾಣ ಮಾಡಬೇಕಾಗುತ್ತದೆ. ಈ ಪ್ರವಾಸವು ಉತ್ತಮ ಆರ್ಥಿಕ ಲಾಭವನ್ನು ತರುತ್ತದೆ.
(7 / 8)
ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ
ಇತರ ಗ್ಯಾಲರಿಗಳು