Odisha train accident: ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ತಂಡವನ್ನು ವಿಮಾನದಲ್ಲಿ ಕರೆತಂದ ರಾಜ್ಯ ಸರ್ಕಾರ PHOTOS
- Karnataka Volleyball team: ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ (ಜೂನ್ 2) ನಡೆದ ಭೀಕರ ರೈಲು ಅಪಘಾತದಿಂದಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ಆಟಗಾರರನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿತಂದಿದೆ.

(1 / 5)
ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಕ್ರೀಡಾಕೂಟಕ್ಕಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಚಾಂದ್ ನಗರಕ್ಕೆ ಕರ್ನಾಟಕದ ವಾಲಿಬಾಲ್ ಆಟಗಾರರು ಮತ್ತು ತರಬೇತುದಾರರು ಸೇರಿದಂತೆ 32 ಮಂದಿ ತೆರಳಿದ್ದರು.
(2 / 5)
ಆದರೆ ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿದ್ದರಿಂದ ಇದೇ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಕ್ರೀಡಾಪಟುಗಳು ಕೋಲ್ಕತ್ತಾದಲ್ಲಿಯೇ ಉಳಿದುಕೊಂಡಿದ್ದರು.
(3 / 5)
ಇವರಿಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿತ್ತು. ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೂಡ ಟ್ವೀಟ್ ಮಾಡಿ ಕೋಲ್ಕತ್ತಾದಲ್ಲಿ ಸಿಲುಕಿರುವ ರಾಜ್ಯದ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಸೇರಿದಂತೆ ಒಟ್ಟು 32 ಜನರಿಗೆ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದರು.
(4 / 5)
ಇಂದು (ಜೂನ್ 4, ಭಾನುವಾರ) ಕೋಲ್ಕತ್ತಾದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕ್ರೀಡಾಪಟುಗಳು ಬಂದಿಳಿದಿದ್ದು, ಅವರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಬರಮಾಡಿಕೊಂಡರು.
ಇತರ ಗ್ಯಾಲರಿಗಳು