World Cup Live: ಕರ್ನಾಟಕದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ಅವಕಾಶ
- ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2023ರ ಏಕದಿನ ವಿಶ್ವಕಪ್ (ICC ODI World Cup 2023) ಫೈನಲ್ ಪಂದ್ಯದ ನೇರ ಪ್ರಸಾರವನ್ನು ಕರ್ನಾಟಕದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ವೀಕ್ಷಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
- ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2023ರ ಏಕದಿನ ವಿಶ್ವಕಪ್ (ICC ODI World Cup 2023) ಫೈನಲ್ ಪಂದ್ಯದ ನೇರ ಪ್ರಸಾರವನ್ನು ಕರ್ನಾಟಕದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ವೀಕ್ಷಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
(1 / 5)
ಭಾನುವಾರ (ನವೆಂಬರ್ 19) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಫೈನಲ್ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ (India vs Australia) ನಡುವಿನ ಬಿಗ್ ಫೈಟ್ ನೋಡಲು ಭಾರತೀಯರು ಕಾಯುತ್ತಿದ್ದಾರೆ.
(2 / 5)
ಇದೀಗ ಕರ್ನಾಟಕದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ವಿಶ್ವಕಪ್ ಫೈನಲ್ ಪಂದ್ಯ ಪ್ರಸಾರ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
(3 / 5)
ದಿನಾಂಕ 19-11-2023 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ, ಸಾರ್ವಜನಿಕರಿಗೆ ಹಾಗೂ ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಾಹಿತಿ ನೀಡಿದೆ.
(4 / 5)
ಈ ಕುರಿತು ಪ್ರಕಟಣೆ ಹೊರಡಿಸಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು, ಪಂದ್ಯ ವೀಕ್ಷಣೆ ವೇಳೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರಿಗೆ ಸೂಚಿಸಿದೆ..
ಇತರ ಗ್ಯಾಲರಿಗಳು