ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Bjp Meeting: ದೆಹಲಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ಆರಂಭ: ಚರ್ಚೆಗೆ ಬರಲಿರುವ ಸಂಗತಿಗಳೇನು?

BJP Meeting: ದೆಹಲಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ಆರಂಭ: ಚರ್ಚೆಗೆ ಬರಲಿರುವ ಸಂಗತಿಗಳೇನು?

  • ನವದೆಹಲಿ: ಗುಜರಾತ್‌ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಕ್ರಿಯೆ ಇನ್ನೂ ಮುಗಿದಿಲ್ಲ. ಅದಾಗಲೇ ಬಿಜೆಪಿ 2023ರಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತ್ತು 2024ರ ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು(ಡಿ.05-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ..

ರಾಷ್ಟ್ರ ರಾಜಧಾನಿ ನವದೆಹಲಿಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ, ಎರಡು ದಿನಗಳ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪ್ರಧಾನಿ ಮೋದಿ ಅವರು ಈ ಸಭೆಯ ನೇತೃತ್ವವಹಿಸಿದ್ದಾರೆ.
icon

(1 / 5)

ರಾಷ್ಟ್ರ ರಾಜಧಾನಿ ನವದೆಹಲಿಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ, ಎರಡು ದಿನಗಳ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪ್ರಧಾನಿ ಮೋದಿ ಅವರು ಈ ಸಭೆಯ ನೇತೃತ್ವವಹಿಸಿದ್ದಾರೆ.(ANI)

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಉನ್ನತ ಬಿಜೆಪಿ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದು, ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
icon

(2 / 5)

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಉನ್ನತ ಬಿಜೆಪಿ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದು, ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.(ANI)

ಒಟ್ಟು ಎರಡು ದಿನಗಳವರೆಗೆ ನಡೆಯಲಿರುವ ಈ ಸಭೆಯಲ್ಲಿ. 2023ರಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತ್ತು 2024ರ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಸಿದ್ಧತೆ ಕುರಿತು ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.
icon

(3 / 5)

ಒಟ್ಟು ಎರಡು ದಿನಗಳವರೆಗೆ ನಡೆಯಲಿರುವ ಈ ಸಭೆಯಲ್ಲಿ. 2023ರಲ್ಲಿ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತ್ತು 2024ರ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಸಿದ್ಧತೆ ಕುರಿತು ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.(ANI)

ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ಬಳಿಕ ದೆಹಲಿಯತ್ತ ಮುಖ ಮಾಡಿದ ಪ್ರಧಾನಿ ಮೋದಿ, ನೇರವಾಗಿ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿದರು.
icon

(4 / 5)

ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ಬಳಿಕ ದೆಹಲಿಯತ್ತ ಮುಖ ಮಾಡಿದ ಪ್ರಧಾನಿ ಮೋದಿ, ನೇರವಾಗಿ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿದರು.(ANI)

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಎರಡು ದಿನಗಳ ಕಾಲ ನಡೆಯುವ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.
icon

(5 / 5)

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಎರಡು ದಿನಗಳ ಕಾಲ ನಡೆಯುವ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.(AFP)


IPL_Entry_Point

ಇತರ ಗ್ಯಾಲರಿಗಳು