Kannada News  /  Photo Gallery  /  Pm Modi Inaugurates Aiims Hospital In Bilaspur

PM Modi Inaugurates AIIMS in Bilaspur: ಬಿಲಾಸ್‌ಪುರ್‌ದಲ್ಲಿ ಏಮ್ಸ್‌ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ

05 October 2022, 12:21 IST HT Kannada Desk
05 October 2022, 12:21 , IST

ಬಿಲಾಸ್‌ಪುರ್:‌ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು(ಅ.5-ಬುಧವಾರ) ಹಿಮಾಚಲ ಪ್ರದೇಶದ ಬಿಲಾಸ್‌ಪುರ್‌ದಲ್ಲಿ ಅತ್ಯಾಧುನಿಕ ಏಮ್ಸ್‌ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ವೇಳೆ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್‌ ರಮೇಶ್‌, ಕೇಂದ್ರ ಸಚಿವ ಅನುರಾಗ್‌ ಠಾಕೂರ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಹಿಮಾಚಲ ಪ್ರದೇಶದ ಬಿಲಾಸ್‌ಪುರ್‌ದಲ್ಲಿ 1,470 ಕೋಟಿ ರೂ ವೆಚ್ಚದಲ್ಲಿ ಏಮ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಇದು ಈ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.

(1 / 5)

ಹಿಮಾಚಲ ಪ್ರದೇಶದ ಬಿಲಾಸ್‌ಪುರ್‌ದಲ್ಲಿ 1,470 ಕೋಟಿ ರೂ ವೆಚ್ಚದಲ್ಲಿ ಏಮ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಇದು ಈ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.(ANI)

ಬಿಲಾಸ್‌ಪುರ್‌ದಲ್ಲಿ ಏಮ್ಸ್‌ ಆಸ್ಪತ್ರೆ ಉದ್ಘಾಟನೆ ಮಾಡಿದ ಬಳಿಕ, ಪ್ರಧಾನಿ ಮೋದಿ ಅವರು ಆಸ್ಪತ್ರೆಯನ್ನು ವೀಕ್ಷಣೆ ಮಾಡಿದರು. ಈ ವೇಳೆ ಆಸ್ಪತ್ರೆಯ ಹಿರಿಯ ಸಿಬ್ಬಂದಿ ಪ್ರಧಾನಿ ಮೋದಿ ಅವರಿಗೆ ಸಾಥ್‌ ನೀಡಿದರು.

(2 / 5)

ಬಿಲಾಸ್‌ಪುರ್‌ದಲ್ಲಿ ಏಮ್ಸ್‌ ಆಸ್ಪತ್ರೆ ಉದ್ಘಾಟನೆ ಮಾಡಿದ ಬಳಿಕ, ಪ್ರಧಾನಿ ಮೋದಿ ಅವರು ಆಸ್ಪತ್ರೆಯನ್ನು ವೀಕ್ಷಣೆ ಮಾಡಿದರು. ಈ ವೇಳೆ ಆಸ್ಪತ್ರೆಯ ಹಿರಿಯ ಸಿಬ್ಬಂದಿ ಪ್ರಧಾನಿ ಮೋದಿ ಅವರಿಗೆ ಸಾಥ್‌ ನೀಡಿದರು.(ANI)

ಆಸ್ಪತ್ರೆ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಬಿಲಾಸ್‌ಪುರ್‌ದಲ್ಲಿ ಏಮ್ಸ್‌ ಆಸ್ಪತ್ರೆ ಉದ್ಘಾಟನೆಗೊಂಡಿರುವುದು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದರು.

(3 / 5)

ಆಸ್ಪತ್ರೆ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಬಿಲಾಸ್‌ಪುರ್‌ದಲ್ಲಿ ಏಮ್ಸ್‌ ಆಸ್ಪತ್ರೆ ಉದ್ಘಾಟನೆಗೊಂಡಿರುವುದು ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದರು.(ANI)

ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಸಂಕಲ್ಪ ಹೊತ್ತು ಕಾರ್ಯಪ್ರವೃತ್ತವಾಗಿದೆ ಎಂದು ಪ್ರಧಾನಿ ಮೋದಿ ಇದೇ ವೇಳೆ ನುಡಿದರು.

(4 / 5)

ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಸಂಕಲ್ಪ ಹೊತ್ತು ಕಾರ್ಯಪ್ರವೃತ್ತವಾಗಿದೆ ಎಂದು ಪ್ರಧಾನಿ ಮೋದಿ ಇದೇ ವೇಳೆ ನುಡಿದರು.(ANI)

ದಸರಾ ಹಬ್ಬದ ದಿನದಂದು ಬಿಲಾಸ್‌ಪುರ್‌ದಲ್ಲಿ ಏಮ್ಸ್‌ ಆಸ್ಪತ್ರೆ ಉದ್ಘಾಟನೆಯಾಗಿರುವುದು ಸಂತಸ ತಂದಿದೆ. ಈ ಆಸ್ಪತ್ರೆ ಹಿಮಾಚಲ ಪ್ರದೇಶದ ಜನರ ಆರೋಗ್ಯ ಸುಧಾರಣೆಗಾಗಿ ನಿರಂತರವಾಗಿ ಕೆಲಸ ಮಾಡಲಿ ಎಂದು ಪ್ರಧಾನಿ ಮೋದಿ ಇದೇ ವೇಳೆ ಹಾರೈಸಿದರು.

(5 / 5)

ದಸರಾ ಹಬ್ಬದ ದಿನದಂದು ಬಿಲಾಸ್‌ಪುರ್‌ದಲ್ಲಿ ಏಮ್ಸ್‌ ಆಸ್ಪತ್ರೆ ಉದ್ಘಾಟನೆಯಾಗಿರುವುದು ಸಂತಸ ತಂದಿದೆ. ಈ ಆಸ್ಪತ್ರೆ ಹಿಮಾಚಲ ಪ್ರದೇಶದ ಜನರ ಆರೋಗ್ಯ ಸುಧಾರಣೆಗಾಗಿ ನಿರಂತರವಾಗಿ ಕೆಲಸ ಮಾಡಲಿ ಎಂದು ಪ್ರಧಾನಿ ಮೋದಿ ಇದೇ ವೇಳೆ ಹಾರೈಸಿದರು.(ANI)

ಇತರ ಗ್ಯಾಲರಿಗಳು