PM Modi's Bandipur Safari: ಬಂಡೀಪುರ ಸಫಾರಿಯ ಫೋಟೋಗಳನ್ನು ಹಂಚಿಕೊಂಡ ಪಿಎಂ ಮೋದಿ..
- ಶನಿವಾರ ರಾತ್ರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಬಂಡೀಪುರಕ್ಕೆ ತೆರಳಿದ್ದು, ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದ್ದಾರೆ. ಸಫಾರಿಯ ಫೋಟೋಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
- ಶನಿವಾರ ರಾತ್ರಿ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಬಂಡೀಪುರಕ್ಕೆ ತೆರಳಿದ್ದು, ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದ್ದಾರೆ. ಸಫಾರಿಯ ಫೋಟೋಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
(1 / 6)
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಅನುಭವ ಹಾಗೂ ಸಫಾರಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಎರಡು ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಫಾರಿ ನಡೆಸಿದ್ದಾರೆ.
(2 / 6)
ಸುಂದರವಾದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮುಂಜಾನೆಯನ್ನು ಕಳೆದೆನು. ಭಾರತದ ವನ್ಯಜೀವಿಗಳು, ನೈಸರ್ಗಿಕ ಸೌಂದರ್ಯ ಮತ್ತು ವೈವಿಧ್ಯತೆಯ ಒಂದು ನೋಟ ದೊರೆಯಿತು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
(3 / 6)
ಸಫಾರಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಾಜೆಕ್ಟ್ ಟೈಗರ್’ (Project Tiger) 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
(4 / 6)
ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನಲೆಯಲ್ಲಿ ಮೋದಿ ಭೇಟಿ ನೀಡಿದ್ದಾರೆ.
ಇತರ ಗ್ಯಾಲರಿಗಳು