PM Modi Visits US: ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿ ಬಿಡುವಿಲ್ಲದ ಕಾರ್ಯಕ್ರಮ; ಬೈಡನ್ ಭೇಟಿ, ಜಿಲ್ ಬೈಡನ್‌ಗೆ ವಜ್ರದ ಗಿಫ್ಟ್; ಫೋಟೋಸ್
ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನ್ಯೂಯಾರ್ಕ್‌ನಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಿದ್ದಾರೆ. ಉಕ್ರೇನ್ ಯುದ್ಧ, ಹವಾಮಾನ ಬದಲಾವಣೆ ಹಾಗೂ ಇಂಡೋ ಪೆಸಿಫಿಕ್ ಪ್ರದೇಶ ಸೇರಿದಂತೆ ಹಲವು ವಿಷಯಗಳ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ.
(1 / 7)
ಪ್ರಧಾನಿ ನರೇಂದ್ರ ಮೋದಿ ಅವರನ್ನು ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದ ದಕ್ಷಿಣ ಪೋರ್ಟಿಕೋಗೆ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಸ್ವಾಗತಿಸಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡನ್ ಆಯೋಜಿಸಿದ್ದ ಖಾಸಗಿ ಔತಣಕೂಟದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು (AFP) (AFP)
(2 / 7)
ಯುಎಸ್ ಅಧ್ಯಕ್ಷ ಜೋ ಬೈಡನ್ ಅವರು ಶ್ವೇತಭವನದಲ್ಲಿ ಆಯೋಜಿಸಿದ್ದ ಖಾಸಗಿ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು.(PTI)
(3 / 7)
ಜೂನ್ 21 ರಂದು ವೈಟ್‌ಹೌಸ್‌ನಲ್ಲಿ ಆಯೋಜಿಸಿದ್ದ ಖಾಸಗಿ ಔತಣಕೂಟಕ್ಕೆ ಪ್ರಧಾನಿ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಪ್ರಥಮ ಮಹಿಳೆ ಜಿಲ್ ಬೈಡನ್ ಸ್ವಾಗತಿಸಿದ್ದಾರೆ.(PTI)
(4 / 7)
ಅಪ್ಪುಗೆಯ ಮೂಲಕ ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಸ್ವಾಗತಿಸಿದ್ದಾರೆ.(PTI)
(5 / 7)
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರಿಗೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುವ ವಿಶಿಷ್ಟ ಉಡುಗೊರೆಯನ್ನು ನೀಡಿದ್ದಾರೆ. ‘ಕೃಷ್ಣ ಯಜುರ್ವೇದ ವೈಖಾನ ಗೃಹಸೂತ್ರ’ ಪುಸ್ತಕ ಹಾಗೂ ಜೈಪುರದಲ್ಲಿ ವಿಶೇಷವಾಗಿ ತಯಾರಿಸಿದ ಶ್ರೀಗಂಧದ ಪೆಟ್ಟಿಗೆಯನ್ನು ಬೈಡನ್ ಅವರಿಗೆ ನೀಡಿದ್ದಾರೆ. ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ಹಸಿರು ಬಣ್ಣದ ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ.(PTI)
(6 / 7)
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಪ್ರಥಮ ಮಹಿಳೆ ಜಿಲ್ ಬೈಡನ್ ಕೆಲ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. (AFP)
ಇತರ ಗ್ಯಾಲರಿಗಳು