Birsa Munda birth anniversary: ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಮನ
ಮುಂಡಾ ಬುಡಕಟ್ಟಿಗೆ ಸೇರಿದ ಒಬ್ಬ ಅಪ್ರತಿಮ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನ ಇಂದು. ಅವರಿಗೆ ಗೌರವ ಸಲ್ಲಿಸಲು ಈ ದಿನವನ್ನು 'ಜಂಜಾಟಿಯ ಗೌರವ್ ದಿವಸ್' ಎಂದು ಆಚರಿಸಲಾಗುತ್ತದೆ. ಇವರು 1875 ರ ನವೆಂಬರ್ 15 ರಂದು ಜನಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಬಿರ್ಸಾ ಮುಂಡಾ ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
(1 / 7)
ರಾಷ್ಟ್ರಪತಿ ದ್ರೌಪದಿ ಮುರ್ಮು ಜಾರ್ಖಂಡ್‌ನ ರಾಂಚಿಗೆ ಆಗಮಿಸಿದ್ದು, ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಸ್ಥಳವಾದ ಉಲಿಹತು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. (PTI)
(2 / 7)
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 9 ಗಂಟೆ ಸುಮಾರಿಗೆ ಆಗಮಿಸಿದರು. ಅವರನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಮತ್ತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಸ್ವಾಗತಿಸಿದರು.(HT_PRINT)
(3 / 7)
ಅಲ್ಲಿಂದ ದ್ರೌಪದಿ ಮುರ್ಮು ನೇರವಾಗಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಿರ್ಸಾ ಮುಂಡಾ ಅವರ ಗ್ರಾಮ ಉಲಿಹತುವಿಗೆ ತೆರಳೀದರು. ಅಲ್ಲಿ ಅವರು ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಅನ್ನಪೂರ್ಣ ದೇವಿ ಅವರೊಂದಿಗೆ ಸೇರಿಕೊಂಡರು.(PTI)
(4 / 7)
ರಾಷ್ಟ್ರಪತಿಯಾದ ನಂತರ ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದಾರೆ.(PTI)
(5 / 7)
ದ್ರೌಪದಿ ಮುರ್ಮು ಅವರನ್ನು ರಾಜ್ಯದ ರಾಜಧಾನಿ ರಾಂಚಿಯಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಉಲಿಹತು ಗ್ರಾಮದಲ್ಲಿ ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. (PTI)
(7 / 7)
ಬಿರ್ಸಾ ಮುಂಡಾ ಅನುಯಾಯಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ನಿಂತು ರಾಷ್ಟ್ರಪತಿಗೆ ಸ್ವಾಗತ ಕೋರಿದರು. (PTI)
ಇತರ ಗ್ಯಾಲರಿಗಳು