ಕನ್ನಡ ಸುದ್ದಿ  /  Photo Gallery  /  Prime Minister Narendra Modi Inspects The Model Of Karnataka S Shivamogga Airport

PM Modi in Shivamogga airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ; ಏರ್ಪೋರ್ಟ್ ವೀಕ್ಷಣೆ

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಸುಸಜ್ಜಿತ ವಿಮಾನ ನಿಲ್ದಾಣವನ್ನು ವೀಕ್ಷಿಸಿದ್ದಾರೆ. ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿಎಸ್ ವೈ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ. (ಫೋಟೋ - ANI)
icon

(1 / 5)

ಶಿವಮೊಗ್ಗದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದ ಮಾದರಿಯನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದರು. (ಫೋಟೋ - ANI)
icon

(2 / 5)

ವಿಮಾನ ನಿಲ್ದಾಣದಲ್ಲಿ ಇರುವ ಮಳಿಗೆಗಳನ್ನು ಪ್ರಧಾನಿ ಮೋದಿ ವೀಕ್ಷಿಸಿದರು. ಈ ವೇಳೆ ಸಿಎಂ ಬೊಮ್ಮಾಯಿ ಜೊತೆಗಿದ್ದರು. ಸುಸಜ್ಜಿತ ವಿಮಾನ ನಿಲ್ದಾಣವನ್ನು 662.38 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿದೆ. (ಫೋಟೋ - ANI)
icon

(3 / 5)

ಈ ವಿಮಾನ ನಿಲ್ದಾಣ ರನ್‌ವೇ, ಟರ್ಮಿನಲ್ ಕಟ್ಟಡ, ಎಟಿಸಿ ಟವರ್ ಮತ್ತು ಅಗ್ನಿಶಾಮಕ ಠಾಣೆ ಕಟ್ಟಡವನ್ನು ಹೊಂದಿದೆ. ಇನ್ನೂ ಹಲವು ಅಭಿವೃದ್ಧಿ ಕಾಮಗಾರಿಗಳು ಇಲ್ಲಿ ನಡೆಯಬೇಕಿದೆ. (ಫೋಟೋ - ANI)
icon

(4 / 5)

ಶಿವಮೊಗ್ಗ ಜಿಲ್ಲೆಯ ಸೊಗಾನೆಯಲ್ಲಿರುವ ಗ್ರೀನ್‌ಫೀಲ್ಡ್ ದೇಶೀಯ ವಿಮಾನ ನಿಲ್ದಾಣವನ್ನು ಕೇಂದ್ರದ ಉಡಾನ್ ಯೋಜನೆಯಡಿ ವಿಮಾನ ಪ್ರಯಾಣ ಎಲ್ಲರಿಗೂ ಕೈಗೆಟುವ ಉದ್ದೇಶದಿಂದ ನಿರ್ಮಿಸಲಾಗಿದೆ. (Twitter\MLASudhakar)
icon

(5 / 5)

IPL_Entry_Point

ಇತರ ಗ್ಯಾಲರಿಗಳು