Ambareesh Memorial: ರೇಸ್ ಕೋರ್ಸ್ ರಸ್ತೆಗೆ ರೆಬಲ್ ಸ್ಟಾರ್ ಹೆಸರು.. ಅಂಬರೀಶ್ ಸ್ಮಾರಕವೂ ಲೋಕಾರ್ಪಣೆ
ಬಿಬಿಎಂಪಿ ವ್ಯಾಪ್ತಿಯ ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರೇಸ್ ಕೋರ್ಸ್ ರಸ್ತೆಗೆ "ರೆಬಲ್ ಸ್ಟಾರ್ ಡಾ. ಎಂ.ಹೆಚ್. ಅಂಬರೀಶ್ ರಸ್ತೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಕರಣ ಮಾಡಿ, ನಾಮಫಲಕ ಅನಾವರಣಗೊಳಿಸಿದರು. ಬಳಿಕ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಾಣವಾದ ಅಂಬರೀಶ್ ಸ್ಮಾರಕವನ್ನು ಕೂಡ ಸಿಎಂ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.
(1 / 6)
ಕಂಠೀರವ ಸ್ಟುಡಿಯೋ ಆವರಣದಲ್ಲಿ ವಿಶೇಷ ವಿನ್ಯಾಸದಲ್ಲಿ ನಿರ್ಮಾಣವಾದ ಅಂಬರೀಶ್ ಸ್ಮಾರಕವನ್ನು ಕೂಡ ಸಿಎಂ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಕರ್ನಾಟಕ ಸರ್ಕಾರದ ಅನುದಾನದ ಅಡಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಾಣ ಮಾಡಲಾಗಿದೆ.
(2 / 6)
ಇದಕ್ಕೂ ಮುನ್ನ, ಮೌರ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ ರೇಸ್ ಕೋರ್ಸ್ ರಸ್ತೆಗೆ "ರೆಬಲ್ ಸ್ಟಾರ್ ಡಾ. ಎಂ.ಹೆಚ್. ಅಂಬರೀಶ್ ರಸ್ತೆ" ಎಂದು ನಾಮಕರಣ ಮಾಡಿ ನಾಮಫಲಕ ಅನಾವರಣಗೊಳಿಸಿದ್ದರು ಸಿಎಂ ಬೊಮ್ಮಾಯಿ.
(3 / 6)
ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೇಸ್ ಕೋರ್ಸ್ ರಸ್ತೆಯನ್ನು ಅಂಬರೀಶ್ ಅವರ ಹೆಸರಿನಲ್ಲಿ ಅತ್ಯಂತ ಸಂತೋಷದಿಂದ ನಾಮಕರಣ ಮಾಡಿದ್ದೇವೆ. ಇದು ಅವರು ಹೆಚ್ಚು ಓಡಾಡಿದ ಸ್ಥಳ. ಎಲ್ಲ ಅಭಿಮಾನಿಗಳ ಒತ್ತಾಸೆ ಮೇರೆಗೆ ಈ ರಸ್ತೆಗೆ ಇವರ ಹೆಸರನ್ನು ಇಟ್ಟಿದ್ದೇವೆ. ಹಲವು ಪ್ರತಿಭೆಯಿರುವ ಮೇರು ವ್ಯಕ್ತಿತ್ವ ಅವರದ್ದು. ಸಿನಿಮಾದಲ್ಲಿ ಸಹಜವಾಗಿ ನಟನೆ ಮಾಡುತ್ತಿದ್ದರು. ಜನರನ್ನು ಹಿಡಿದಿಟ್ಟುಕೊಳ್ಳುವ ವ್ಯಕ್ತಿತ್ವ ಅವರಿಗಿತ್ತು. ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಂತಹ ಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು ಹೇಳಿದರು.
(5 / 6)
ಈ ಸಂದರ್ಭದಲ್ಲಿ ದಿವಂಗತ ನಟ ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ನಟ ರಾಘವೇಂದ್ರ ರಾಜ್ ಕುಮಾರ್, ಫಿಲಂ ಚೇಂಬರ್ ಅಧ್ಯಕ್ಷ ಭಾ.ಮ ಹರೀಶ್ , ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ, ವಿನೋದ ಆಳ್ವಾ, ಸುಂದರ ರಾಜ್, ಚಿನ್ನೆಗೌಡರು, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ಎಂ.ಎಲ್.ಸಿ ಅ. ದೇವೇಗೌಡ, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
(6 / 6)
ಅಂಬರೀಶ್ ಅವರ ಅಂತ್ಯಕ್ರಿಯೆ ನಡೆಸಿದ್ದ ಕಂಠೀರವ ಸ್ಟುಡಿಯೋದಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡಬೇಕು ಎನ್ನುವುದು ಅಭಿಮಾನಿಗಳ ಆಸೆ ಆಗಿತ್ತು. ಇಂದು ಸ್ಮಾರಕ ಲೋಕಾರ್ಪಣೆಗೊಳ್ಳುವ ಮೂಲಕ ಅಂಬಿ ಅಭಿಮಾನಿಗಳ ಬಹಳ ದಿನಗಳ ಕನಸು ನೆರವೇರಿದೆ.
ಇತರ ಗ್ಯಾಲರಿಗಳು