ಐಸಿಸಿ ಬೌಲಿಂಗ್‌ ಶ್ರೇಯಾಂಕ: ಬುಮ್ರಾ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಅಶ್ವಿನ್‌; ರೋಹಿತ್, ಜೈಸ್ವಾಲ್‌ಗೂ ಬಡ್ತಿ-ravichandran ashwin becomes top ranked bowler in latest icc test bowling rankings replaces jasprit bumrah rohit jra ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಐಸಿಸಿ ಬೌಲಿಂಗ್‌ ಶ್ರೇಯಾಂಕ: ಬುಮ್ರಾ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಅಶ್ವಿನ್‌; ರೋಹಿತ್, ಜೈಸ್ವಾಲ್‌ಗೂ ಬಡ್ತಿ

ಐಸಿಸಿ ಬೌಲಿಂಗ್‌ ಶ್ರೇಯಾಂಕ: ಬುಮ್ರಾ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಅಶ್ವಿನ್‌; ರೋಹಿತ್, ಜೈಸ್ವಾಲ್‌ಗೂ ಬಡ್ತಿ

  • ICC Test Rankings: ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತೀಯ ಕ್ರಿಕೆಟ್‌ ತಂಡದ ಆಟಗಾರರು, ಐಸಿಸಿ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ. ಟೆಸ್ಟ್‌ ಬೌಲಿಂಗ್‌ ಶ್ರೇಯಾಂಕದಲ್ಲಿ ಜಸ್ಪ್ರೀತ್‌ ಬುಮ್ರಾ ಹಿಂದಿಕ್ಕಿರುವ ರವಿಚಂದ್ರನ್‌ ಅಶ್ವಿನ್‌, ನಂಬರ್‌ ವನ್‌ ಸ್ಥಾನಕ್ಕೇರಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಕಬಳಿಸಿದ ಸಾಧನೆ ಮಾಡಿದ ರವಿಚಂದ್ರ‌ನ್‌ ಅಶ್ವಿನ್, ಧರ್ಮಶಾಲಾ ಟೆಸ್ಟ್‌ ಮೂಲಕ 100ನೇ ಟೆಸ್ಟ್ ಪಂದ್ಯ ಆಡಿದ ವಿಶೇಷ ಮೈಲಿಗಲ್ಲು ತಲುಪಿದರು. ಧರ್ಮಶಾಲಾ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದ ರವಿ, ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿದರು. ಅದರ ಬೆನ್ನಲ್ಲೇ ಐಸಿಸಿ ಶ್ರೇಯಾಂಕದಲ್ಲಿಬಡ್ತಿ ಪಡೆದಿದ್ದಾರೆ. ಧರ್ಮಶಾಲಾ ಟೆಸ್ಟ್‌ನಲ್ಲಿ ಒಂಬತ್ತು ವಿಕೆಟ್‌ ಪಡೆದ ಅಶ್ವಿನ್, ಐಸಿಸಿಯ ನಂಬರ್ ವನ್ ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ.
icon

(1 / 6)

ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಕಬಳಿಸಿದ ಸಾಧನೆ ಮಾಡಿದ ರವಿಚಂದ್ರ‌ನ್‌ ಅಶ್ವಿನ್, ಧರ್ಮಶಾಲಾ ಟೆಸ್ಟ್‌ ಮೂಲಕ 100ನೇ ಟೆಸ್ಟ್ ಪಂದ್ಯ ಆಡಿದ ವಿಶೇಷ ಮೈಲಿಗಲ್ಲು ತಲುಪಿದರು. ಧರ್ಮಶಾಲಾ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದ ರವಿ, ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿದರು. ಅದರ ಬೆನ್ನಲ್ಲೇ ಐಸಿಸಿ ಶ್ರೇಯಾಂಕದಲ್ಲಿಬಡ್ತಿ ಪಡೆದಿದ್ದಾರೆ. ಧರ್ಮಶಾಲಾ ಟೆಸ್ಟ್‌ನಲ್ಲಿ ಒಂಬತ್ತು ವಿಕೆಟ್‌ ಪಡೆದ ಅಶ್ವಿನ್, ಐಸಿಸಿಯ ನಂಬರ್ ವನ್ ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಬೌಲಿಂಗ್‌ ಶ್ರೇಯಾಂಕ ಪಟ್ಟಿಯಲ್ಲಿ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ. ರವಿಚಂದ್ರನ್ ವೈಯಕ್ತಿಕ ವಿಶ್ವ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲೇರಿದ್ದಾರೆ. 870 ರೇಟಿಂಗ್ ಪಾಯಿಂಟ್ ಗಳಿಸಿರುವ ಅವರು, ಸಹ ಆಟಗಾರ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ. ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.‌ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ.
icon

(2 / 6)

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಬೌಲಿಂಗ್‌ ಶ್ರೇಯಾಂಕ ಪಟ್ಟಿಯಲ್ಲಿ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ. ರವಿಚಂದ್ರನ್ ವೈಯಕ್ತಿಕ ವಿಶ್ವ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲೇರಿದ್ದಾರೆ. 870 ರೇಟಿಂಗ್ ಪಾಯಿಂಟ್ ಗಳಿಸಿರುವ ಅವರು, ಸಹ ಆಟಗಾರ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ. ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ.‌ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ.(Reuters)

ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನಕ್ಕೇರುತ್ತಿದ್ದಂತೆಯೇ, ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ. ಆಸ್ಟ್ರೇಲಿಯಾ ವೇಗಿ ಜೋಶ್ ಹೇಜಲ್‌ವುಡ್‌ ಅವರೊಂದಿಗೆ ಬುಮ್ರಾ ಜಂಟಿಯಾಗಿ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಕ್ರೈಸ್ಟ್‌ಚರ್ಚ್ ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಬಳಿಕ ಹೇಜಲ್‌ವುಡ್ ಎರಡು ಸ್ಥಾನ ಮೇಲೇರಿದ್ದಾರೆ. ಬುಮ್ರಾ ಮತ್ತು ಹೇಜಲ್‌ವುಡ್ ಇಬ್ಬರೂ 847 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಏಳನೇ ಸ್ಥಾನದಲ್ಲಿದ್ದಾರೆ.
icon

(3 / 6)

ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನಕ್ಕೇರುತ್ತಿದ್ದಂತೆಯೇ, ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ. ಆಸ್ಟ್ರೇಲಿಯಾ ವೇಗಿ ಜೋಶ್ ಹೇಜಲ್‌ವುಡ್‌ ಅವರೊಂದಿಗೆ ಬುಮ್ರಾ ಜಂಟಿಯಾಗಿ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಕ್ರೈಸ್ಟ್‌ಚರ್ಚ್ ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಬಳಿಕ ಹೇಜಲ್‌ವುಡ್ ಎರಡು ಸ್ಥಾನ ಮೇಲೇರಿದ್ದಾರೆ. ಬುಮ್ರಾ ಮತ್ತು ಹೇಜಲ್‌ವುಡ್ ಇಬ್ಬರೂ 847 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಏಳನೇ ಸ್ಥಾನದಲ್ಲಿದ್ದಾರೆ.(Reuters)

ಧರ್ಮಶಾಲಾ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕುಲ್ದೀಪ್ ಯಾದವ್ ಐದು ವಿಕೆಟ್ ಕಬಳಿಸಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತೆ ಎರಡು ವಿಕೆಟ್ ಪಡೆದರು. ಹೀಗಾಗಿ ಬೌಲರ್‌ಗಳ ಪಟ್ಟಿಯಲ್ಲಿ ಅವರು 15 ಸ್ಥಾನ ಮೇಲಕ್ಕೇರಿ 16ನೇ ಸ್ಥಾನದಲ್ಲಿದ್ದಾರೆ. ಅಕ್ಷರ್ ಪಟೇಲ್ ಒಂದು ಸ್ಥಾನ ಮೇಲೇರಿ ಜಂಟಿ 36ನೇ ಸ್ಥಾನದಲ್ಲಿದ್ದಾರೆ. ಮೊಹಮ್ಮದ್ ಸಿರಾಜ್ ಐದು ಸ್ಥಾನ ಕುಸಿದು 25ನೇ ಸ್ಥಾನದಲ್ಲಿದ್ದಾರೆ.
icon

(4 / 6)

ಧರ್ಮಶಾಲಾ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕುಲ್ದೀಪ್ ಯಾದವ್ ಐದು ವಿಕೆಟ್ ಕಬಳಿಸಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತೆ ಎರಡು ವಿಕೆಟ್ ಪಡೆದರು. ಹೀಗಾಗಿ ಬೌಲರ್‌ಗಳ ಪಟ್ಟಿಯಲ್ಲಿ ಅವರು 15 ಸ್ಥಾನ ಮೇಲಕ್ಕೇರಿ 16ನೇ ಸ್ಥಾನದಲ್ಲಿದ್ದಾರೆ. ಅಕ್ಷರ್ ಪಟೇಲ್ ಒಂದು ಸ್ಥಾನ ಮೇಲೇರಿ ಜಂಟಿ 36ನೇ ಸ್ಥಾನದಲ್ಲಿದ್ದಾರೆ. ಮೊಹಮ್ಮದ್ ಸಿರಾಜ್ ಐದು ಸ್ಥಾನ ಕುಸಿದು 25ನೇ ಸ್ಥಾನದಲ್ಲಿದ್ದಾರೆ.(ANI)

ಧರ್ಮಶಾಲಾ ಟೆಸ್ಟ್‌ನಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ವೈಯಕ್ತಿಕ ಟೆಸ್ಟ್ ಶ್ರೇಯಾಂಕದಲ್ಲಿ ಭಾರಿ ಸುಧಾರಣೆ ಕಂಡಿದ್ದಾರೆ. ಬ್ಯಾಟರ್‌ಗಳ ಪಟ್ಟಿಯಲ್ಲಿ ರೋಹಿತ್ ಐದು ಸ್ಥಾನ ಮೇಲಕ್ಕೇರಿ ಆರನೇ ಸ್ಥಾನದಲ್ಲಿದ್ದಾರೆ. ಪಟ್ಟಿಯಲ್ಲಿ ಗಿಲ್ 11 ಸ್ಥಾನ ಮೇಲಕ್ಕೇರಿ ಜಂಟಿ 20ನೇ ಸ್ಥಾನದಲ್ಲಿದ್ದಾರೆ.
icon

(5 / 6)

ಧರ್ಮಶಾಲಾ ಟೆಸ್ಟ್‌ನಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ವೈಯಕ್ತಿಕ ಟೆಸ್ಟ್ ಶ್ರೇಯಾಂಕದಲ್ಲಿ ಭಾರಿ ಸುಧಾರಣೆ ಕಂಡಿದ್ದಾರೆ. ಬ್ಯಾಟರ್‌ಗಳ ಪಟ್ಟಿಯಲ್ಲಿ ರೋಹಿತ್ ಐದು ಸ್ಥಾನ ಮೇಲಕ್ಕೇರಿ ಆರನೇ ಸ್ಥಾನದಲ್ಲಿದ್ದಾರೆ. ಪಟ್ಟಿಯಲ್ಲಿ ಗಿಲ್ 11 ಸ್ಥಾನ ಮೇಲಕ್ಕೇರಿ ಜಂಟಿ 20ನೇ ಸ್ಥಾನದಲ್ಲಿದ್ದಾರೆ.(ANI)

ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್, ವೈಯಕ್ತಿಕ ಟೆಸ್ಟ್ ಶ್ರೇಯಾಂಕದಲ್ಲಿ ಎರಡು ಸ್ಥಾನ ಮೇಲೇರಿದ್ದಾರೆ. ಅವರು ಪ್ರಸ್ತುತ ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 1 ಸ್ಥಾನ ಕುಸಿದು 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ವರ್ಷಗಳಿಂದ ಒಂದೇ ಒಂದು ಪಂದ್ಯ ಆಡದಿದ್ದರೂ, ರಿಷಭ್ ಪಂತ್ 15ನೇ ಸ್ಥಾನದಲ್ಲಿದ್ದಾರೆ.
icon

(6 / 6)

ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್, ವೈಯಕ್ತಿಕ ಟೆಸ್ಟ್ ಶ್ರೇಯಾಂಕದಲ್ಲಿ ಎರಡು ಸ್ಥಾನ ಮೇಲೇರಿದ್ದಾರೆ. ಅವರು ಪ್ರಸ್ತುತ ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 1 ಸ್ಥಾನ ಕುಸಿದು 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ವರ್ಷಗಳಿಂದ ಒಂದೇ ಒಂದು ಪಂದ್ಯ ಆಡದಿದ್ದರೂ, ರಿಷಭ್ ಪಂತ್ 15ನೇ ಸ್ಥಾನದಲ್ಲಿದ್ದಾರೆ.(ANI)


ಇತರ ಗ್ಯಾಲರಿಗಳು