ಐಪಿಎಲ್-2025ಕ್ಕೂ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್ ಸೇರಿದ ಆರ್ ಅಶ್ವಿನ್; ಸಿಕ್ತು ಹೊಸ ಜವಾಬ್ದಾರಿ!
- Ravichandran Ashwin: 2025 ಐಪಿಎಲ್ ಆರಂಭಕ್ಕೂ ಮೊದಲೇ ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿದ್ದಾರೆ.
- Ravichandran Ashwin: 2025 ಐಪಿಎಲ್ ಆರಂಭಕ್ಕೂ ಮೊದಲೇ ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿದ್ದಾರೆ.
(1 / 5)
ಐಪಿಎಲ್-2025 ಮೆಗಾ ಹರಾಜಿಗೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ಆಫ್ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಚೆನ್ನೈಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಮ್ಮೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಅವರಿಗೆ ಹೊಸ ಜವಾಬ್ದಾರಿ ಕೂಡ ನೀಡಲಾಗಿದೆ.
(2 / 5)
ಆದರೆ, ಅಶ್ವಿನ್ ಸಿಎಸ್ಕೆ ಸೇರಿರುವುದು ಆಟಗಾರನಾಗಲ್ಲ. ಚೆನ್ನೈ ಸೂಪರ್ ಕಿಂಗ್ಸ್ ಹೈ-ಪರ್ಫಾರ್ಮೆನ್ಸ್ ಸೆಂಟರ್ನಲ್ಲಿ ಆಟಗಾರರ ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಸುಧಾರಣೆ ಜವಾಬ್ದಾರಿ ನೀಡಲಾಗಿದೆ.
(3 / 5)
2008 ರಿಂದ 2015ರ ತನಕ ಸಿಎಸ್ಕೆ ತಂಡದ ಪರ ಆಡಿದ್ದ ಅಶ್ವಿನ್, ನನ್ನ ಕ್ರಿಕೆಟ್ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಸಂಸ್ಥೆಗೆ ಮತ್ತೊಮ್ಮೆ ಸೇವೆ ಸಲ್ಲಿಸಲು ಮರಳಿರುವುದು ಖುಷಿ ನೀಡಿದೆ ಎಂದು ಹೇಳಿದ್ದಾರೆ.
(4 / 5)
ಕ್ರಿಕೆಟ್ ಬೆಳೆಸುವುದೇ ನನ್ನ ಮುಖ್ಯಗುರಿ ಎಂದು ಅಶ್ವಿನ್ ಹೇಳಿದ್ದಾರೆ. ಇದೇ ವೇಳೆ ಸಿಎಸ್ಕೆ ಸಿಇಒ ಮಾತನಾಡಿ, ಅಶ್ವಿನ್ ತಂಡಕ್ಕೆ ಮತ್ತೆ ಮರಳುತ್ತಿರುವುದು ಅತ್ಯಂತ ಖುಷಿ ನೀಡಿದೆ. ಅಲ್ಲದೆ, ಅವರೇ ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಇತರ ಗ್ಯಾಲರಿಗಳು