ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆ; ಚಿನ್ನಸ್ವಾಮಿಯಲ್ಲಿ ನಡೆಯಬೇಕಿದ್ದ ಆರ್‌ಸಿಬಿ ಪಂದ್ಯ ಈ ಮೈದಾನಕ್ಕೆ ಶಿಫ್ಟ್
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದು ನಗರದಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೂ ಅಡ್ಡಿಪಡಿಸುತ್ತಿದೆ. ಹೀಗಾಗಿ ನಗರದಲ್ಲಿ ನಡೆಬೇಕಿದ್ದ ಪಂದ್ಯವನ್ನು ಬೇರೆಡೆ ಸ್ಥಳಾಂತರಿಸಲಾಗುತ್ತಿದೆ. ಇದೇ ವೇಳೆ ಐಪಿಎಲ್ 2025ರ ಪ್ಲೇಆಫ್ ಪಂದ್ಯಗಳಿಗೆ ಆತಿಥ್ಯ ಸ್ಥಳವನ್ನು ಬಿಸಿಸಿಐ ಅಂತಿಮಗೊಳಿಸಿದೆ.
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
(1 / 9)
ಮೇ 23ರ ಶುಕ್ರವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‌ಸಿಬಿ ಹಾಗೂ ಎಸ್ಆರ್‌ಎಚ್ ನಡುವಿನ ಪಂದ್ಯವನ್ನು ಲಕ್ನೋದ ಏಕನಾ ಸ್ಟೇಡಿಯಂಗೆ ಸ್ಥಳಾಂತರಿಸಲಾಗಿದೆ. ಇದನ್ನು ಬಿಸಿಸಿಐ ಹಾಗೂ ಆರ್‌ಸಿಬಿ ಫ್ರಾಂಚೈಸ್ ಖಚಿತಪಡಿಸಿದೆ.
(AP)(2 / 9)
ಉದ್ಯಾನ ನಗರಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮೇ 17ರಂದು ನಗರದಲ್ಲಿ ನಡೆಯಬೇಕಿದ್ದ ಆರ್‌ಸಿಬಿ ಹಾಗೂ ಕೆಕೆಆರ್ ತಂಡಗಳ ನಡುವಿನ ಪಂದ್ಯ ಕೂಡಾ ಮಳೆಯಿಂದಾಗಿ ರದ್ದಾಗಿತ್ತು. ಮೇ 23ರ ಶುಕ್ರವಾರ ನಗರದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ನಡೆಯಬೇಕಿತ್ತು. ಆದರೆ, ಇದಕ್ಕೂ ಮಳೆಯ ಆತಂಕವಿದೆ.
(HT_PRINT)(3 / 9)
ಬೆಂಗಳೂರಿನಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿದ ಕಾರಣದಿಂದ ಪಂದ್ಯದ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ವರದಿ ಹೇಳಿದೆ. ಗುರುವಾರದವರೆಗೆ ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
(AFP)(4 / 9)
ಹೀಗಾಗಿ ಆರ್‌ಸಿಬಿ ತಂಡವು ಟೂರ್ನಿಯ ಲೀಗ್ ಹಂತದಲ್ಲಿ ತನ್ನ ಉಳಿದ ಎರಡು ಪಂದ್ಯಗಳನ್ನು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಆಡಲಿದೆ. ಇದರೊಂದಿಗೆ ಪ್ರಸಕ್ತ ಆವೃತ್ತಿಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಗಳು ಮುಕ್ತಾಯವಾದಂತಾಗಿದೆ. ಈ ಕುರಿತು ಬಿಸಿಸಿಐ ಕಡೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.
(Surjeet Yadav/ANI)(5 / 9)
ಅತ್ತ, ಐಪಿಎಲ್ ಪ್ಲೇಆಫ್ ಹಂತದ ಪಂದ್ಯಗಳಿಗೂ ಆತಿಥ್ಯ ಸ್ಥಳ ಬಹುತೇಕ ಅಂತಿಮವಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಜೂನ್ 3ರಂದು ಐಪಿಎಲ್ 2025ರ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಈ ಸ್ಥಳವು ಜೂನ್ 1ರಂದು ನಡೆಯುವ ಕ್ವಾಲಿಫೈಯರ್ 2 ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.
(PTI)(6 / 9)
ಅತ್ತ ಮುಲ್ಲಾನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೇ 29 ಮತ್ತು 30ರಂದು ಕ್ರಮವಾಗಿ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ನಡೆಯಲಿವೆ.
(PTI)(7 / 9)
ಈ ಮೊದಲು ನಿರ್ಧಾರವಾದಂತೆ ಐಪಿಎಲ್ 2025ರ ಫೈನಲ್ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿತ್ತು. ಕ್ವಾಲಿಫೈಯರ್ 2 ಮತ್ತು ಎಲಿಮಿನೇಟರ್ ಪಂದ್ಯಗಳು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು.
(PTI)(8 / 9)
ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದೆ. ಇನ್ನೊಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಪೈಪೋಟಿ ಇದೆ.
(PTI)ಇತರ ಗ್ಯಾಲರಿಗಳು