ಟಾಕ್ಸಿಕ್ ಚಿತ್ರಕ್ಕಾಗಿ ಬಾಲಿವುಡ್ ನಟಿ ಕಿಯಾರಾ ಅಡ್ವಾನಿ ಪಡೆದ ಸಂಭಾವನೆ ಇಷ್ಟೊಂದಾ? ಹಿಂದಿನ ಚಿತ್ರಕ್ಕಿಂತಲೂ ಡಬಲ್
ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. 2026ರ ಮಾರ್ಚ್ 19ರಂದು ಈ ಸಿನಿಮಾ ತೆರೆಗೆ ಬರಲಿದೆ. ಈ ನಡುವೆ ಇದೇ ಚಿತ್ರದಲ್ಲಿ ನಾಯಕಿ ಪಾತ್ರ ಮಾಡಿರುವ ಕಿಯಾರಾ ಅಡ್ವಾಣಿ, ಟಾಕ್ಸಿಕ್ ಸಲುವಾಗಿ ಪಡೆದ ಸಂಭಾವನೆ ಎಷ್ಟಿರಬಹುದು? ಇಲ್ಲಿದೆ ಉತ್ತರ.
(1 / 6)
ಟಾಕ್ಸಿಕ್ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶಿಸಿರುವ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ಈ ಚಿತ್ರಕ್ಕಾಗಿ ದಾಖಲೆಯ ಸಂಭಾವನೆಯನ್ನೇ ಪಡೆದಿದ್ದಾರೆ ಎನ್ನಲಾಗುತ್ತಿದೆ.
(2 / 6)
ಯಶ್ ನಟನೆಯ ಪ್ಯಾನ್ ವರ್ಲ್ಡ್ ಟಾಕ್ಸಿಕ್ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಜೊತೆಗೆ ನಯನತಾರಾ, ತಾರಾ ಸುತಾರಿಯಾ ಮತ್ತು ಹುಮಾ ಖುರೇಷಿ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
(3 / 6)
ಟಾಕ್ಸಿಕ್ ಚಿತ್ರದಲ್ಲಿ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದು, ದೊಡ್ಡ ಮೊತ್ತದ ಸಂಭಾವನೆಯನ್ನೇ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
(4 / 6)
ಕನ್ನಡದ ಈ ಚಿತ್ರಕ್ಕಾಗಿ ಗೇಮ್ ಚೇಂಜರ್ ಸಿನಿಮಾಕ್ಕಿಂತಲೂ ಡಬಲ್ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಗೇಮ್ ಚೇಂಜರ್ ಚಿತ್ರಕ್ಕೆ 7ಕೋಟಿ ರೂ.ಗಳವರೆಗೆ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ.
(5 / 6)
ಇದೀಗ ಟಾಕ್ಸಿಕ್ ಚಿತ್ರದ ಸಲುವಾಗಿ ಕಿಯಾರಾ. 15 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಜತೆಗೆ ಎನ್‌ಟಿಆರ್ ಮತ್ತು ಹೃತಿಕ್ ರೋಷನ್ ನಟನೆಯ 'ವಾರ್ 2' ಚಿತ್ರದಲ್ಲಿಯೂ ಕಿಯಾರಾ ನಾಯಕಿಯಾಗಿ ನಟಿಸುತ್ತಿದ್ದಾರೆ.
ಇತರ ಗ್ಯಾಲರಿಗಳು