ಸೌತ್ ಆಫ್ರಿಕಾ ಟೆಸ್ಟ್ ಸರಣಿಯಿಂದ ದಿಢೀರ್ ಹಿಂದೆ ಸರಿದ ಇಶಾನ್; ಆಂಧ್ರದ ಆಟಗಾರನಿಗೆ ಸಿಕ್ತು ಮತ್ತೆ ಚಾನ್ಸ್
- Ishan Kishan: ಇಶಾನ್ ಕಿಶನ್ ವೈಯಕ್ತಿಕ ಕಾರಣಗಳಿಂದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ತವರಿಗೆ ಮರಳಿದ್ದಾರೆ. ಅವರು ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಅಧಿಕೃತಗೊಳಿಸಿದೆ. ಇಶಾನ್ ಬದಲಿ ಕ್ರಿಕೆಟಿಗನ ಹೆಸರನ್ನೂ ಮಂಡಳಿ ಪ್ರಕಟಿಸಿದೆ.
- Ishan Kishan: ಇಶಾನ್ ಕಿಶನ್ ವೈಯಕ್ತಿಕ ಕಾರಣಗಳಿಂದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ತವರಿಗೆ ಮರಳಿದ್ದಾರೆ. ಅವರು ಟೆಸ್ಟ್ ಸರಣಿಯಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಅಧಿಕೃತಗೊಳಿಸಿದೆ. ಇಶಾನ್ ಬದಲಿ ಕ್ರಿಕೆಟಿಗನ ಹೆಸರನ್ನೂ ಮಂಡಳಿ ಪ್ರಕಟಿಸಿದೆ.
(1 / 8)
ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ವಿಕೆಟ್ ಕೀಪರ್ ಇಶಾನ್ ಕಿಶಾನ್ ದಿಢೀರ್ ಹಿಂದೆ ಸರಿದಿದ್ದಾರೆ. ಅವರ ಬದಲಿ ಆಟಗಾರನಾಗಿ ಶೀಕರ್ ಭರತ್ ತಂಡವನ್ನು ಕೂಡಿಕೊಂಡಿದ್ದಾರೆ. ಭರತ್ ಎರಡನೇ ವಿಕೆಟ್ ಕೀಪರ್ ಆಗಿ ತಂಡವನ್ನು ಸೇರಿದ್ದಾರೆ.
(2 / 8)
ಇಶಾನ್ ಬದಲಿಗೆ ಭರತ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಈಗಾಗಲೇ ಭರತ್ ತಂಡವನ್ನು ಸೇರ್ಪಡೆಗೊಂಡಿದ್ದಾರೆ. ಕೆಎಲ್ ರಾಹುಲ್ಗೆ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಇಶಾನ್ ತಂಡದಲ್ಲಿ ಸ್ಥಾನ ಪಡೆದಿದ್ದರು.
(3 / 8)
ಇಶಾನ್ ಕಿಶನ್ ತಮ್ಮ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ದಕ್ಷಿಣ ಆಫ್ರಿಕಾದಲ್ಲಿ ಮುಂಬರುವ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದಾರೆ. ಆದರೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
(4 / 8)
ರಿಷಭ್ ಪಂತ್ ಗಾಯಗೊಂಡ ನಂತರ ಕೆಎಲ್ ರಾಹುಲ್, ಭಾರತ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲು ಪ್ರಾರಂಭಿಸಿದರು. ಅದಕ್ಕೂ ಮೊದಲು ಬ್ಯಾಟಿಂಗ್ ಮಾತ್ರ ನಡೆಸುತ್ತಿದ್ದರು. ಆದರೀಗ ವಿಕೆಟ್ ಹಿಂದೆಯೂ ಗಮನ ಸೆಳೆಯುತ್ತಿದ್ದಾರೆ. ಹಾಗಾಗಿ ಏಕದಿನ ಮತ್ತು ಟೆಸ್ಟ್‌ನಲ್ಲಿ ಭಾರತದ ಮೊದಲ ಆಯ್ಕೆಯ ವಿಕೆಟ್ ಕೀಪರ್ ರಾಹುಲ್.
(5 / 8)
ಇಶಾನ್‌ಗೆ ಟಿ20 ಮತ್ತು ಏಕದಿನ ತಂಡಗಳಲ್ಲಿ ಹೆಚ್ಚೆಚ್ಚು ಅವಕಾಶಗಳು ಸಿಗುತ್ತಿವೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಸಿಕ್ಕ ಅವಕಾಶದಲ್ಲಿ ಅರ್ಧಶತಕ ಸಿಡಿಸಿದ್ದ ಇಶಾನ್, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೂ ಅವಕಾಶ ಪಡೆದರು. ಆದರೆ ವೈಯಕ್ತಿಕ ಕಾರಣಗಳಿಂದ ತಂಡದಿಂದ ಹಿಂದೆ ಸರಿದಿದ್ದಾರೆ.
(6 / 8)
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅವಕಾಶ ಪಡೆದಿದ್ದ ಕೆಎಲ್ ಭರತ್, 4 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಆದರೆ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಆದರೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲೂ ಆಡಿಸಲಾಗಿತ್ತು. ಆ ಪಂದ್ಯದಲ್ಲೂ ನಿರಾಸೆ ಮೂಡಿಸಿದ್ದರು. ಒಟ್ಟು 5 ಟೆಸ್ಟ್ ಆಡಿದ್ದು, ಕೇವಲ 129 ರನ್ ಕಲೆ ಹಾಕಿದ್ದಾರೆ.
(7 / 8)
ಡಿಸೆಂಬರ್ 26 ರಿಂದ ಸೆಂಚುರಿಯನ್‌ನಲ್ಲಿ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮೊಹಮ್ಮದ್ ಶಮಿ ಲಭ್ಯವಿರುವುದಿಲ್ಲ. ಗಾಯದಿಂದ ದೂರ ಉಳಿದಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ವಿಶ್ವಕಪ್ ಬಳಿಕ ಮೊದಲ ಬಾರಿಗೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
(8 / 8)
ಟೆಸ್ಟ್ ಸರಣಿಗೆ ಭಾರತದ ಪರಿಷ್ಕೃತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬೂಮ್ರಾ, ಋತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಮುಕೇಶ್ ಕುಮಾರ್ ಮತ್ತು ಶ್ರೀಕರ್ ಭರತ್ (ವಿಕೆಟ್ ಕೀಪರ್).
ಇತರ ಗ್ಯಾಲರಿಗಳು