ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಟ್ರೇಲರ್ ಬಿಡುಗಡೆ; ಅನೀಶ್ ತೇಜೇಶ್ವರ್- ಮಿಲನಾ ನಾಗರಾಜ್ ಫನ್ ರೈಡ್
- Aaram Aravinda Swamy: ಅನೀಶ್ ತೇಜೇಶ್ವರ್- ಮಿಲನಾ ನಾಗರಾಜ್ ನಟನೆಯ ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಈ ಸಿನಿಮಾ ಇದೇ ತಿಂಗಳ 22ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ.
- Aaram Aravinda Swamy: ಅನೀಶ್ ತೇಜೇಶ್ವರ್- ಮಿಲನಾ ನಾಗರಾಜ್ ನಟನೆಯ ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಈ ಸಿನಿಮಾ ಇದೇ ತಿಂಗಳ 22ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ.
(1 / 5)
ಭಾರೀ ನಿರೀಕ್ಷೆ ಹೆಚ್ಚಿಸಿದ್ದ ಅನೀಶ್ ತೇಜೇಶ್ವರ್ ನಟನೆಯ ಆರಾಮ್ ಅರವಿಂದ್ ಸ್ವಾಮಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.
(2 / 5)
2 ನಿಮಿಷ 14 ಸೆಕೆಂಡ್ ಇರುವ ಆರಾಮ್ ಅರವಿಂದ್ ಸ್ವಾಮಿ ಟ್ರೇಲರ್ ಫುಲ್ ಫನ್ ಆಗಿ ಕೂಡಿದೆ. ನೋಡೋಕ್ಕೆ ಫುಲ್ ಆರಾಮ್ ಆಗಿ ಇರುವ ಅರವಿಂದ್ ಸ್ವಾಮಿ ಲೈಫ್ ನಲ್ಲಿ ಬರೀ ಟೆನ್ಷನ್‌ಗಳೇ ತುಂಬಿವೆ.
(3 / 5)
ಪ್ರೀತಿ, ಮದುವೆ, ದುಡ್ಡ, ಫ್ಯಾಮಿಲಿ ಸುತ್ತ ಕಥೆ ಸಾಗುತ್ತಿದೆ. ಒಂದೇ ಮಾತಿನಲ್ಲಿ ಹೇಳುವುದಾದರೆ ಆರಾಮ್ ಅರವಿಂದ್ ಸ್ವಾಮಿ ಪಕ್ಕ ಫ್ಯಾಮಿಲಿ ಎಂಟರ್ಟೈನರ್ ಸಿನಿಮಾ ಎಂಬುದು ಚಿತ್ರತಂಡ ಮಾತು.
(4 / 5)
ಆರಾಮ್ ಅರವಿಂದ್ ಸ್ವಾಮಿ ಚಿತ್ರದಲ್ಲಿ ಅನೀಶ್ ಜತೆಗೆ ಮಿಲನಾ ನಾಗರಾಜ್, ಹೃತಿಕಾ ಶ್ರೀನಿವಾಸ್ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ವೈವಿಬಿ ಶಿವಸಾಗರ್ ಕ್ಯಾಮರಾವರ್ಕ್, ಉಮೇಶ್ ಆರ್.ಬಿ ಸಂಕಲನ ಮಾಡಿದ್ದಾರೆ.
ಇತರ ಗ್ಯಾಲರಿಗಳು