ಕನ್ನಡ ಸುದ್ದಿ  /  Photo Gallery  /  Sandalwood News Hitler Kalyana Serial Actress Malaika Vasupal Was Chosen As The Heroine For Vidyapati Movie Mnk

ಹಿಟ್ಲರ್‌ ಕಲ್ಯಾಣ ಸೀರಿಯಲ್‌ ನಟಿಗೆ ಕುದುರಿತು ಲಕ್;‌ ಉಪಾಧ್ಯಕ್ಷ ಬಳಿಕ ವಿದ್ಯಾಪತಿಗೂ ನಾಯಕಿಯಾದ ಮಲೈಕಾ ವಸುಪಾಲ್ PHOTOS

  • Malaika Vasupal: ಹಿಟ್ಲರ್‌ ಕಲ್ಯಾಣ ಸೀರಿಯಲ್‌ ಮೂಲಕ ಗುರುತಿಸಿಕೊಂಡ ನಟಿ ಮಲೈಕಾ ವಸುಪಾಲ್‌ ನಟನೆಯ ಚೊಚ್ಚಲ ಸಿನಿಮಾ ಉಪಾಧ್ಯಕ್ಷ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಇದೀಗ ಇದೇ ನಟಿಗೆ ಮತ್ತೊಂದು ಸಿನಿಮಾ ಅವಕಾಶ ಒಲಿದು ಬಂದಿದೆ. ಡಾಲಿ ಧನಂಜಯ್‌ ನಿರ್ಮಾಣ ಮಾಡುತ್ತಿರುವ, ನಾಗಭೂಷಣ್‌ ನಾಯಕನಾಗಿ ನಟಿಸಲಿರುವ ವಿದ್ಯಾಪತಿ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ವಿದ್ಯಾಪತಿಯಾಗಿರುವ ನಾಗಭೂಷಣ್ ಗೆ ಜೋಡಿ ಸಿಕ್ಕಾಗಿದೆ. ಉಪಾಧ್ಯಕ್ಷ ಸುಂದರಿ ಈಗ ಡಾಲಿ ಬಳಗ ಸೇರ್ಪಡೆಯಾಗಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್ ಟಗರು ಪಲ್ಯ ಸಕ್ಸಸ್ ಬಳಿಕ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿರುವುದು ಗೊತ್ತೇ ಇದೆ.  
icon

(1 / 9)

ಧನಂಜಯ್ ಹಾಗೂ ನಾಗಭೂಷಣ್ ‌ವಿದ್ಯಾಪತಿ ಎಂಬ ಚಿತ್ರದ ಮೂಲಕ ಮತ್ತೆ ಆಗಮಿಸುತ್ತಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.
icon

(2 / 9)

ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಚಿಕ್ಕಣ್ಣನಿಗೆ ಉಪಾಧ್ಯಕ್ಷ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಿದ್ದ ಮಲೈಕಾ ವಸೂಪಾಲ್ ಈಗ ವಿದ್ಯಾಪತಿಗೆ ಜೋಡಿಯಾಗಿದ್ದಾರೆ. 
icon

(3 / 9)

ಹಿಟ್ಲರ್ ಕಲ್ಯಾಣ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಮಲೈಕಾ ಉಪಾಧ್ಯಕ್ಷ ಚಿತ್ರದ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದರು. 
icon

(4 / 9)

ಈ ನಡುವೆ ಉಪಾಧ್ಯಕ್ಷ ಮೂಲಕ ಮೊದಲ ಸಿನಿಮಾವೇ ಅವರಿಗೆ ದೊಡ್ಡ ಸಕ್ಸಸ್ ತಂದುಕೊಟ್ಟಿತ್ತು. ಉಪಾಧ್ಯಕ್ಷ ಸಿನಿಮಾದಲ್ಲಿ ಇವ್ರ ನಟನೆ ನೋಡಿ ಮೆಚ್ಚಿಕೊಂಡಿರುವ ವಿದ್ಯಾಪತಿ ಟೀಂ ತಮ್ಮ ತಂಡಕ್ಕೆ ಅವರನ್ನು ಸ್ವಾಗತಿಸಿದೆ.
icon

(5 / 9)

ವಿದ್ಯಾಪತಿ ಸಿನಿಮಾದಲ್ಲಿ ಮಲೈಕಾ ವಿದ್ಯಾ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು, ಸಿಂಪಲ್ ಆಗಿರುವ ಹೋಮ್ಲಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. 
icon

(6 / 9)

ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.
icon

(7 / 9)

ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ವಿದ್ಯಾಪತಿ ಚಿತ್ರದಲ್ಲಿ ನಾಗಭೂಷಣ್ ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ, ಮುರುಳಿ ನೃತ್ಯ ನಿರ್ದೇಶನ, ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಮಾರ್ಚ್ ತಿಂಗಳಿನಿಂದ ವಿದ್ಯಾಪತಿ ನಾಯಕಿ ಮಲೈಕಾ ವಸೂಪಾಲ್ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.
icon

(8 / 9)

ಸಿನಿಮಾ, ಸೀರಿಯಲ್‌, ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ HT ಕನ್ನಡ ವೆಬ್‌ ತಾಣಕ್ಕೆ ಭೇಟಿ ನೀಡಿ
icon

(9 / 9)

ಸಿನಿಮಾ, ಸೀರಿಯಲ್‌, ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ HT ಕನ್ನಡ ವೆಬ್‌ ತಾಣಕ್ಕೆ ಭೇಟಿ ನೀಡಿ

IPL_Entry_Point

ಇತರ ಗ್ಯಾಲರಿಗಳು