ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮೇಘಾ ಶೆಟ್ಟಿ- ಕವೀಶ್‌ ಶೆಟ್ಟಿ ಜೋಡಿಯ ಆಪರೇಷನ್ ಲಂಡನ್ ಕೆಫೆ ಸಿನಿಮಾ ಪ್ಯಾನ್‌ ಇಂಡಿಯಾ ಬಿಡುಗಡೆಗೆ ರೆಡಿ Photos

ಮೇಘಾ ಶೆಟ್ಟಿ- ಕವೀಶ್‌ ಶೆಟ್ಟಿ ಜೋಡಿಯ ಆಪರೇಷನ್ ಲಂಡನ್ ಕೆಫೆ ಸಿನಿಮಾ ಪ್ಯಾನ್‌ ಇಂಡಿಯಾ ಬಿಡುಗಡೆಗೆ ರೆಡಿ PHOTOS

  • Operation London Cafe: ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ ಬಹು ನಿರೀಕ್ಷಿತ ಆಪರೇಷನ್ ಲಂಡನ್ ಕೆಫೆ ಸಿನಿಮಾ ಬಿಡುಗಡೆಯ ಸನಿಹಕೆ ಬಂದು ನಿಂತಿದೆ. ಚಿತ್ರದ ನಾಯಕ ಕವೀಶ್‌ ಶೆಟ್ಟಿ ಬರ್ತ್‌ಡೇ (ಜೂನ್ 5)‌ ನಿಮಿತ್ತ ಹೊಸ ಪೋಸ್ಟರ್‌ ಮೂಲಕ ಚಿತ್ರದ ಬಿಡುಗಡೆಯ ಅಪ್‌ಡೇಟ್‌ ನೀಡಿದೆ ಚಿತ್ರತಂಡ.

ಕವೀಶ ಶೆಟ್ಟಿ ನಾಯಕನಾಗಿ ನಟಿಸಿರುವ, ಮೇಘಾ ಶೆಟ್ಟಿ ನಾಯಕಿಯಾಗಿರುವ ಆಪರೇಷನ್ ಲಂಡನ್ ಕೆಫೆ ಸಿನಿಮಾ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಸಿನಿಮಾವನ್ನು ಆದಷ್ಟು ಬೇಗ ಪ್ರೇಕ್ಷಕರ ಮುಂದೆ ತರುವುದಾಗಿ ನಿರ್ದೇಶಕ ಸಡಗರ ರಾಘವೇಂದ್ರ ಹೇಳಿಕೊಂಡಿದ್ದಾರೆ.
icon

(1 / 6)

ಕವೀಶ್ ಮತ್ತು ಮೇಘಾ ಶೆಟ್ಟಿ ಜೊತೆಯಲ್ಲಿ ಮರಾಠಿಯ ಶಿವಾನಿ ಸುರ್ವೆ, ವಿರಾಟ್ ಮಡಕೆ, ಪ್ರಸಾದ್ ಕಾಂಡೇಕರ್ ಹಾಗೂ ಕನ್ನಡದ ಅರ್ಜುನ್ ಕಾಪಿಕಾಡ್, ಬಿ ಸುರೇಶ್, ಕೃಷ್ಣ ಹೆಬ್ಬಾಳೆ, ಧರ್ಮೇಂದ್ರ ಅರಸ್, ನೀನಾಸಂ ಅಶ್ವತ್ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. 
icon

(2 / 6)

ಯುವ ಸಂಗೀತ ನಿರ್ದೇಶಕ ಪ್ರಾನ್ಶು ಝಾ ಸಂಗೀತವಿರುವ ಈ ಚಿತ್ರಕ್ಕೆ ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಜೊತೆಯಲ್ಲಿ ದೀರ್ಘ ಕಾಲ ಕೆಲಸ ಮಾಡಿದ ಅನುಭವವಿರುವ ಡಿ. ನಾಗಾರ್ಜುನ್ ಛಾಯಾಗ್ರಹಣವಿದೆ. 
icon

(3 / 6)

ಕಲಾ ನಿರ್ದೇಶಕ ವರದರಾಜ್ ಕಾಮತ್, ಕೆ. ಎಂ. ಪ್ರಕಾಶ್ ಸಂಕಲನದ ಜೊತೆಯಲ್ಲಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಸಡಗರ ರಾಘವೇಂದ್ರ ಸಾಹಿತ್ಯ ಮತ್ತು ವಿಕ್ರಂ ಮೊರ್, ಅರ್ಜುನ್ ಮತ್ತು ಮಾಸ್ ಮಾದ ವಿಶೇಷವಾಗಿ ಸಂಯೋಜಿಸಿದ ಸಾಹಸವಿದೆ.
icon

(4 / 6)

 ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದ ಅಡಿಯಲ್ಲಿ ಅದ್ಧೂರಿಯಾಗಿ ಆಪರೇಷನ್ ಲಂಡನ್ ಕೆಫೆ ಸಿನಿಮಾ ಚಿತ್ರ ನಿರ್ಮಾಣಗೊಳ್ಳುತ್ತಿದೆ. 
icon

(5 / 6)

ಈ ಚಿತ್ರವನ್ನು ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
icon

(6 / 6)

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು