ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ ಗಾಯಕ ಸೋನು ನಿಗಮ್‌; ಕನ್ನಡ ಕೋರಿಕೆ ಗೀತೆಗೆ ಪೆಹಲ್ಗಾಮ್‌ ದಾಳಿ ಹೋಲಿಕೆ ಪ್ರಕರಣ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ ಗಾಯಕ ಸೋನು ನಿಗಮ್‌; ಕನ್ನಡ ಕೋರಿಕೆ ಗೀತೆಗೆ ಪೆಹಲ್ಗಾಮ್‌ ದಾಳಿ ಹೋಲಿಕೆ ಪ್ರಕರಣ

ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ ಗಾಯಕ ಸೋನು ನಿಗಮ್‌; ಕನ್ನಡ ಕೋರಿಕೆ ಗೀತೆಗೆ ಪೆಹಲ್ಗಾಮ್‌ ದಾಳಿ ಹೋಲಿಕೆ ಪ್ರಕರಣ

ಕನ್ನಡ ಹಾಡು ಹಾಡುವಂತೆ ಕೇಳಿದ ಪ್ರೇಕ್ಷಕರ ವರ್ತನೆಯನ್ನು ಪೆಹಲ್ಗಾಮ್‌ ಉಗ್ರರ ದಾಳಿಗೆ ಹೋಲಿಸಿದ ಖ್ಯಾತ ಗಾಯಕ ಸೋನು ನಿಗಮ್‌ ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನ ಮೆಟ್ಟಿಲೇರಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದೆ.

ಖ್ಯಾತ ಗಾಯಕ ಸೋನು ನಿಗಮ್‌ ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನ ಮೆಟ್ಟಿಲೇರಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದೆ.
icon

(1 / 10)

ಏಪ್ರಿಲ್ 22 ರಂದು ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸೋನು  ನಿಗಮ್ ನೀಡಿದ ಹೇಳಿಕೆಯು ಅನೇಕ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿತ್ತು. ಇದಾದ ಬಳಿಕ ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ವಿವಾದ ಭುಗಿಲೆದ್ದಿತು.
icon

(2 / 10)

ಸೋನು ನಿಗಮ್‌ ವಿರುದ್ಧೆ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಕೈಬಿಡುವಂತೆ ಕೋರಿ ಕರ್ನಾಟಕದ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
icon

(3 / 10)

ಬೆಂಗಳೂರು ಪೊಲೀಸರು ನಿಗಮ್‌ಗೆ ನೋಟಿಸ್ ಜಾರಿ ಮಾಡಿ, ಏಳು ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಿದ್ದರು. ಸೋನು ನಿಗಮ್ ಪ್ರತಿಕ್ರಿಯೆ ನೀಡಲು ವಿಫಲವಾದ ಕಾರಣ, ಪೊಲೀಸರು ಎರಡನೇ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಿದ್ದರು.
icon

(4 / 10)

ಮೇ 3 ರಂದು ಗಾಯಕ ಸೋನು ನಿಗಮ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ), ಸೆಕ್ಷನ್ 352(1) (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), ಮತ್ತು ಸೆಕ್ಷನ್ 353 (ಸಾರ್ವಜನಿಕ ಕಿಡಿಗೇಡಿತನಕ್ಕೆ ಪ್ರಚೋದನೆ) ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
icon

(5 / 10)

ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ್ ಎ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು.
icon

(6 / 10)

ಸೋನು ನಿಗಮ್ ಅವರು ಕನ್ನಡಿಗ ಸಮುದಾಯದ "ಭಾವನೆಗಳನ್ನು ಕೆರಳಿಸುವ" ಮತ್ತು "ಭಾವನೆಗಳನ್ನು ನೋಯಿಸುವ" ಹೇಳಿಕೆಗಳನ್ನು ನೀಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.
icon

(7 / 10)

ಆರಂಭದಲ್ಲಿ ಇವರು ತನ್ನದೇನು ತಪ್ಪಿಲ್ಲ. ನನ್ನನ್ನು ಬೆದರಿಸಿದ ಗೂಂಡಾನಿಗೆ ಪಾಠ ಕಲಿಸುವ ಉದ್ದೇಶದಿಂದ ಹಾಗೇ ಹೇಳಿದೆ ಎಂದು ತನ್ನ ನಿಲುವಿಗೆ ಅಂಟಿಕೊಂಡಿದ್ದರು.
icon

(8 / 10)

ಎಫ್‌ಐಆರ್ ದಾಖಲಾದ ಬಳಿಕ  ಸೋನು ನಿಗಮ್ ಮೇ 5 ರಂದು ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು. ತಮ್ಮ ಹೇಳಿಕೆಗಳಿಂದ ಕನ್ನಡಿಗರಿಗೆ ಉಂಟಾದ ನೋವನ್ನು ಒಪ್ಪಿಕೊಂಡರು. "ಕ್ಷಮಿಸಿ ಕರ್ನಾಟಕ. ನಿಮ್ಮ ಮೇಲಿನ ನನ್ನ ಪ್ರೀತಿ ನನ್ನ ಅಹಂಕಾರಕ್ಕಿಂತ ದೊಡ್ಡದು. ಯಾವಾಗಲೂ ನಿಮ್ಮನ್ನು ಪ್ರೀತಿಸುತ್ತೇನೆ." ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದಿದ್ದರು.
icon

(9 / 10)

ಕರ್ನಾಟಕ ಹೈಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋನು ನಿಗಮ್‌ ಸಲ್ಲಿಸಿದ ಅರ್ಜಿಯನ್ನು ನಾಳೆ ಅಂದರೆ ಮೇ 15ರಂದು ನಡೆಸಲಿದೆ.
icon

(10 / 10)

ಕರ್ನಾಟಕ ಹೈಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋನು ನಿಗಮ್‌ ಸಲ್ಲಿಸಿದ ಅರ್ಜಿಯನ್ನು ನಾಳೆ ಅಂದರೆ ಮೇ 15ರಂದು ನಡೆಸಲಿದೆ.

ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in

ಇತರ ಗ್ಯಾಲರಿಗಳು