Siddaramaiah & Kolar: ಕೋಲಾರದಿಂದಲೇ ಸ್ಫರ್ಧಿಸಿ.. ಸಿದ್ದರಾಮಯ್ಯ ನಿವಾಸದ ಮುಂದೆ ಬೆಂಬಲಿಗರಿಂದ ಪ್ರತಿಭಟನೆ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Siddaramaiah & Kolar: ಕೋಲಾರದಿಂದಲೇ ಸ್ಫರ್ಧಿಸಿ.. ಸಿದ್ದರಾಮಯ್ಯ ನಿವಾಸದ ಮುಂದೆ ಬೆಂಬಲಿಗರಿಂದ ಪ್ರತಿಭಟನೆ

Siddaramaiah & Kolar: ಕೋಲಾರದಿಂದಲೇ ಸ್ಫರ್ಧಿಸಿ.. ಸಿದ್ದರಾಮಯ್ಯ ನಿವಾಸದ ಮುಂದೆ ಬೆಂಬಲಿಗರಿಂದ ಪ್ರತಿಭಟನೆ

ಕೋಲಾರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಬಲಿಗರು ಬೆಂಗಳೂರಿನ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸದಂತೆ ಕಾಂಗ್ರೆಸ್​ ಈ ಹಿಂದೆ ಹೈಕಮಾಂಡ್​ ಸೂಚಿಸಿತ್ತು.

ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಮುಂದೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.
icon

(1 / 5)

ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಕಠಿಣ ಸ್ಪರ್ಧೆ ಎದುರಾಗಲಿದೆ ಎಂದು ಕಾಂಗ್ರೆಸ್ ಆಂತರಿಕ ಸಮೀಕ್ಷಾ ವರದಿಗಳು ಹೇಳಿದೆ. ಹೀಗಾಗಿ ಕೋಲಾರದಿಂದ ಸ್ಫರ್ಧಿಸಲು ಕಾಂಗ್ರೆಸ್​ ಹೈಕಮಾಂಡ್​ ಇನ್ನೂ ಒಪ್ಪಿಗೆ ನೀಡಿಲ್ಲ.  
icon

(2 / 5)

ಕಳೆದ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ, ಈ ಬಾರಿ ಕೋಲಾರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದರು. ಕೋಲಾರದಲ್ಲಿ ತಮ್ಮ ಗೆಲುವು ಸುಲಭವಾಗಲಿದೆ ಎಂಬುದು ಸಿದ್ದರಾಮಯ್ಯ ಅವರ ಲೆಕ್ಕಾಚಾರವಾತ್ತು. ಆದರೆ ಆಂತರಿಕ ಸಮೀಕ್ಷಾ ವರದಿಗಳು, ಸ್ಥಳೀಯ ನಾಯಕರ ನಡುವಿನ ಭಿನ್ನಾಭಿಪ್ರಾಯ ಹಾಗೂ ಬಿಜೆಪಿ-ಜೆಡಿಎಸ್‌ ಒಳಒಪ್ಪಂದದ ಸಾಧ್ಯತೆಯ ಸುಳಿವು ನೀಡಿವೆ.
icon

(3 / 5)

ಈ ಕಾರಣಕ್ಕೆ ಹೈಕಮಾಂಡ್‌ ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರ ಬೇಡ ಎಂಬ ಸೂಚನೆ ನೀಡಿದೆ. ಇದರಿಂದಾಗಿ ತಮ್ಮ ಬೆಂಬಲಿಗರೊಂದಿಗೆ ನಡೆಸಿದ ಸಭೆಯಲ್ಲಿ, ವರುಣ ಕ್ಷೇತ್ರ ಆಯ್ಕೆಯನ್ನು ಮುಕ್ತವಾಗಿ ಇರಿಸಿಕೊಳ್ಳುವ ಬಗ್ಗೆ ಸಿದ್ದರಾಮಯ್ಯ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
icon

(4 / 5)

ಇನ್ನು ಕಾಂಗ್ರೆಸ್​ ನಾಯಕಿ ಭವ್ಯ ನರಸಿಂಹಮೂರ್ತಿ ಅವರಿಗೆ ರಾಜಾಜಿನಗರದಿಂದ ಟಿಕೆಟ್​ ನೀಡಲು ಆಗ್ರಹಿಸಿ ಅವರ ಬೆಂಬಲಿಗರು ಧರಣಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿರುವ ಪುಟ್ಟಣ್ಣಗೆ ಟಿಕೆಟ್​ ನೀಡಬೇಡಿ ಎಂದು ಒತ್ತಾಯಿಸಿದ್ಧಾರೆ. 
icon

(5 / 5)

ಇತರ ಗ್ಯಾಲರಿಗಳು