Sitharaman's Budget Saree: ಧಾರವಾಡ ಕಸೂತಿ ಕಲೆಯಿರುವ ಸೀರೆಯುಟ್ಟು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ..
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು ಬಣ್ಣದ (ಮರೂನ್ ಕಲರ್) ಇಳಕಲ್ ಸೀರೆಯುಟ್ಟು ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಬಂದು ಬಜೆಟ್ ಮಂಡಿಸಿದ್ದು ವಿಶೇಷವಾಗಿತ್ತು. ಈ ಮೂಲಕ ಮೊದಲು ಕರ್ನಾಟಕದ ಜನತೆಯನ್ನು ಆಕರ್ಷಿಸಿದ್ದಾರೆ.
(1 / 5)
ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು ಬಣ್ಣದ ಇಳಕಲ್ ಸೀರೆಯುಟ್ಟು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿಗೆ ಆಗಮಿಸಿ ಬಜೆಟ್ ಮಂಡಿಸಿದ್ದಾರೆ.
(2 / 5)
ಧಾರವಾಡದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳೆಯರು ಈ ಸೀರೆಗೆ ಕಸೂತಿ ಹಾಕಿ ತಯಾರಿಸಿದ್ದಾರೆ.
(3 / 5)
ಕೇಂದ್ರ ಸಚಿವರು ಹಾಗೂ ಧಾರವಾಡ ಜಿಲ್ಲೆಯ ಸಂಸದರೂ ಆಗಿರುವ ಪ್ರಲ್ಹಾದ್ ಜೋಶಿ ಅವರು ನವಲಗುಂದ ಕಸೂತಿ ಕಲೆ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ವಿವರಿಸಿ, ಈ ಸೀರೆಗಳನ್ನು ಜಿಲ್ಲೆಯಿಂದ ಉಡುಗೊರೆಯಾಗಿ ನೀಡಿದ್ದರು. ಇವುಗಳಲ್ಲಿ ಒಂದು ಸೀರೆಯನ್ನು ಉಟ್ಟು ಸೀತಾರಾಮನ್ ಇಂದು ಬಜೆಟ್ ಮಂಡಿಸಿದ್ದು ವಿಶೇಷವಾಗಿತ್ತು.
(4 / 5)
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, "ನಮ್ಮ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟು ಬಂದು ಅತ್ಯಂತ ಅಭಿವೃದ್ಧಿ ಪೂರಕ ಬಜೆಟ್ ಮಂಡಿಸಿದ್ದು ನಮಗೇಲ್ಲರಿಗೂ ಹೆಮ್ಮೆಯ ವಿಷಯ" ಎಂದು ಹೇಳಿದ್ದಾರೆ.
(5 / 5)
2020 ರಲ್ಲಿ, ಬಜೆಟ್ ದಿನ ನಿರ್ಮಲಾ ಸೀತಾರಾಮನ್ ನೀಲಿ ಬಣ್ಣದ ಅಂಚು ಹೊಂದಿರುವ ಹಳದಿ ರೇಷ್ಮೆ ಸೀರೆ ಉಟ್ಟಿದ್ದರು. 2021 ರಲ್ಲಿ ಕೆಂಪು ಮತ್ತು ಬಿಳಿ ಬಣ್ಣದ ರೇಷ್ಮೆ ಪೊಚಂಪಲ್ಲಿ ಸೀರೆಯನ್ನು ಧರಿಸಿದ್ದರು.
ಇತರ ಗ್ಯಾಲರಿಗಳು