Rahul Gandhi: ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ನಾಳೆ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿರುವ ರಾಹುಲ್ ಗಾಂಧಿ
- ನವದೆಹಲಿ: 2019ರ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿದ್ದು, ನಾಳೆ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ಅಪರಾಧ ಮತ್ತು ಶಿಕ್ಷೆಯ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
- ನವದೆಹಲಿ: 2019ರ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿದ್ದು, ನಾಳೆ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ಅಪರಾಧ ಮತ್ತು ಶಿಕ್ಷೆಯ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
(1 / 5)
ಮಾನನಷ್ಟ ಮೊಕದ್ದಮೆಯಲ್ಲಿ ತಮಗೆ ಶಿಕ್ಷೆ ವಿಧಿಸಿದ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ, ರಾಹುಲ್ ಗಾಂಧಿ ಅವರು ಸೆಷೆನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಿದ್ದಾರೆ. ಅಲ್ಲದೇ ಪ್ರಕರಣ ಇತ್ಯರ್ಥವಾಗುವವರೆಗೆ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ರಾಹುಲ್ ಮನವಿ ಮಾಡಲಿದ್ದಾರೆ.(HT_PRINT)
(2 / 5)
ಒಂದು ವೇಳೆ ಸೆಷನ್ಸ್ ನ್ಯಾಯಾಲಯ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡದೇ ಹೋದರೆ, ಚುನಾವಣಾ ಆಯೋಗವು ವಯನಾಡ್ ಲೋಕಸಭಾ ಸ್ಥಾನಕ್ಕೆ ವಿಶೇಷ ಚುನಾವಣೆಯನ್ನು ಘೋಷಿಸಲುದೆ. ಅಲ್ಲದೇ ಮುಂದಿನ ಎಂಟು ವರ್ಷಗಳ ಕಾಲ ರಾಹುಲ್ ಗಾಂಧಿ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ.(HT_PRINT)
(3 / 5)
ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. "ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನು ಹೊಂದಿದ್ದು ಹೇಗೆ?.." ಎಂಬ ರಾಹುಲ್ ಅವರ ಹೇಳಿಕೆ, ಅವರ ಸಂಸತ್ ಸದಸ್ಯತ್ವವನ್ನೇ ಅನರ್ಹಗೊಳಿಸಿದೆ.(HT_PRINT)
(4 / 5)
ವಯನಾಡ್‌ನ ಮಾಜಿ ಲೋಕಸಭಾ ಸಂಸದರು 2019 ರ ಲೋಕಸಭೆ ಚುನಾವಣೆಗೆ ಮುನ್ನ, ಕರ್ನಾಟಕದಲ್ಲಿ ನಡೆದ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಧಾನಿ ಮೋದಿ ಅವರ ಕೊನೆಯ ಹೆಸರನ್ನು ಗುರಿಯಾಗಿಟ್ಟುಕೊಂಡು ಪರಾರಿಯಾದ ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರೊಂದಿಗೆ ಹೋಲಿಸಿದ್ದರು.(REUTERS)
(5 / 5)
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ಸೂರತ್ ನ್ಯಾಯಾಲಯ, ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಪರಿಗಣಿಸಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು. ಇದಾದ ಬಳಿಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಲಾಯಿತು.ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499ರ ಅಡಿಯಲ್ಲಿ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಶಿಕ್ಷೆಯು ಅತ್ಯಂತ ವಿರಳ ಎಂದು ತಜ್ಞರು ಹೇಳಿದ್ದಾರೆ.(PTI)
ಇತರ ಗ್ಯಾಲರಿಗಳು