ಕರಾವಳಿಯಲ್ಲಿ ಮಳೆ: ತುಂಬಿ ಹರಿಯುತ್ತಿರುವ ನದಿಗಳು, ಮಧೂರು ದೇವಸ್ಥಾನ ಜಲಾವೃತ, ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಹೆಚ್ಚಿದ ನದಿ ನೀರು photos
- Coastal Rains ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಧಾರ್ಮಿಕ ಕ್ಷೇತ್ರಗಳಲ್ಲಿಯೂ ಕುಮಾರಧಾರ, ನೇತ್ರಾವತಿ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ.
- ವರದಿ: ಹರೀಶ ಮಾಂಬಾಡಿ. ಮಂಗಳೂರು
- Coastal Rains ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಧಾರ್ಮಿಕ ಕ್ಷೇತ್ರಗಳಲ್ಲಿಯೂ ಕುಮಾರಧಾರ, ನೇತ್ರಾವತಿ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ.
- ವರದಿ: ಹರೀಶ ಮಾಂಬಾಡಿ. ಮಂಗಳೂರು
(1 / 6)
ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಗುರುವಾರವೂ ಆಗುತ್ತಿದೆ. ಮಳೆಗೆ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಜಲಾವ್ರತಗೊಂಡಿದೆ.
(2 / 6)
ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ
(3 / 6)
ಕುಮಾರಧಾರ ಕಿಂಡಿ ಆಣೆಕಟ್ಟು ಸಂಪೂರ್ಣ ಮುಳುಗಡೆಗೊಂಡಿದ್ದು, ಸುಬ್ರಹ್ಮಣ್ಯದಲ್ಲಿ ನದಿಗಿಳಿಯದಂತೆ ಭಕ್ತದಿಗಳಿಗೆ ಸೂಚನೆ ನೀಡಲಾಗಿದೆ. ಆದರೂ ನದಿ ದಡ ದಲ್ಲೇ ತೀರ್ಥಸ್ನಾನ ಮಾಡುತಿರುವ ಭಕ್ತದಿಗಳು ಕಂಡುಬಂದಿದ್ದಾರೆ.
(5 / 6)
ಬೆಳ್ತಂಗಡಿ ತಾಲೂಕಿನಲ್ಲಿ ನೇತ್ರಾವತಿ ನದಿಯ ಹರಿವು ಹೆಚ್ಚಿದ್ದು ನೀರು ಇನ್ನಷ್ಟು ಏರುವ ಸಾಧ್ಯತೆ,ಪ್ರಸ್ತುತ ನದಿಯಲ್ಲಿ ಪ್ರವಾಹದ ಸ್ಥಿತಿ ಇಲ್ಲದಿದ್ದರೂ, ಆದರೆ ಹರಿವು ಹೆಚ್ಚಿದ್ದು ತಗ್ಗು ಪ್ರದೇಶದ ಕೆಲವು ತೋಟಗಳಿಗೆ ನೀರು ನುಗ್ಗವ ಸಾಧ್ಯತೆ ಇದೆ.ಬಂಟ್ವಾಳದಲ್ಲಿ ನೇತ್ರಾವತಿ ನದಿ 5.8 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.
ಇತರ ಗ್ಯಾಲರಿಗಳು