ಪೊಳಲಿ ಶ್ರೀರಾಜರಾಜೇಶ್ವರಿ ದೇವರ ಜಾತ್ರೆಯಲ್ಲಿ ಕಲ್ಲಂಗಡಿಯನ್ನೇ ಪ್ರಸಾದವಾಗಿ ಕೊಡುವುದು ಏಕೆ; ಫೋಟೊ ಸಹಿತ ಮಾಹಿತಿ ತಿಳಿಯಿರಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಪೊಳಲಿ ಶ್ರೀರಾಜರಾಜೇಶ್ವರಿ ದೇವರ ಜಾತ್ರೆಯಲ್ಲಿ ಕಲ್ಲಂಗಡಿಯನ್ನೇ ಪ್ರಸಾದವಾಗಿ ಕೊಡುವುದು ಏಕೆ; ಫೋಟೊ ಸಹಿತ ಮಾಹಿತಿ ತಿಳಿಯಿರಿ

ಪೊಳಲಿ ಶ್ರೀರಾಜರಾಜೇಶ್ವರಿ ದೇವರ ಜಾತ್ರೆಯಲ್ಲಿ ಕಲ್ಲಂಗಡಿಯನ್ನೇ ಪ್ರಸಾದವಾಗಿ ಕೊಡುವುದು ಏಕೆ; ಫೋಟೊ ಸಹಿತ ಮಾಹಿತಿ ತಿಳಿಯಿರಿ

  • ಅತ್ಯಂತ ಪುರಾತನ ದೇವಸ್ಥಾನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವದಲ್ಲಿ ಪ್ರಸಾದಕ್ಕೆ ಕಲ್ಲಂಗಡಿಯನ್ನು ಬಳಸಲಾಗುತ್ತದೆ. ಆಸಕ್ತಿಕರ ಮಾಹಿತಿ ಫೋಟೊ ಸಹಿತ ಇಲ್ಲಿದೆ.

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವಕ್ಕೆ ಕಲ್ಲಂಗಡಿ ಹಣ್ಣೇ ಪ್ರಸಾದವೆಂಬ ನಂಬಿಕೆ ಇದೆ. ಮಾರ್ಚ್ ನಿಂದ ಎಪ್ರಿಲ್ ವರೆಗೆ ನಡೆಯುವ ಒಂದು ತಿಂಗಳ ಜಾತ್ರೆಯ ವೇಳೆ ಸಂತೆಯಲ್ಲಿ ಕಲ್ಲಂಗಡಿ ಹಣ್ಣಿನದ್ದೇ ಭರ್ಜರಿ ವ್ಯಾಪಾರ. ದೇವಸ್ಥಾನಕ್ಕೆ ಬರುವ ಭಕ್ತರು ಇಲ್ಲಿ ಕಲ್ಲಂಗಡಿ ಹಣ್ಣನ್ನು ಎಷ್ಟು ಹಣಕೊಟ್ಟಾದರೂ ಖರೀದಿಸುತ್ತಾರೆ.
icon

(1 / 6)

ಇಲ್ಲಿನ ಕಲ್ಲಂಗಡಿ ಹಣ್ಣನ್ನು ಪುರಾಣದ ರಕ್ತಬೀಜಾಸುರನೆಂದೇ ನಂಬಲಾಗುತ್ತದೆ. ಅದರೊಳಗಿನ ಕೆಂಪು ತಿರುಳು ರಾಕ್ಷಸನ ರಕ್ತವನ್ನು ಸಂಕೇತಿಸಿದರೆ, ಅದರೊಳಗಿನ ಬೀಜಗಳು ಬೀಜಾಸುರಾದಿಗಳನ್ನು ಸಂಕೇತಿಸುತ್ತದೆ. ಪೊಳಲಿ ವ್ಯಾಪ್ತಿಯ 10 ಗ್ರಾಮಗಳಲ್ಲಿ ಈ ಹಣ್ಣನ್ನು ಬೆಳೆಯಲಾಗುತ್ತಿದ್ದು, ಇದು ಇತ್ತೀಚೆಗೆ ಕಡಿಮೆಯಾಗಿದೆ.
icon

(2 / 6)

ಪೊಳಲಿ, ಮಳಲಿ, ಕರಿಯಂಗಳ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಬೆಳೆಸಲಾಗುವ ಕಲ್ಲಂಗಡಿ ಹಣ್ಣುಗಳನ್ನು ಮಾತ್ರ ಇಲ್ಲಿ ಮಾರಾಟ ಮಾಡಲಾಗುತ್ತದೆ. ಸ್ಥಳೀಯ ಕೃಷಿಕರೇ ಈ ಹಣ್ಣು ಬೆಳೆದು ಮಾರಾಟ ಮಾಡುತ್ತಾರೆ. ಇವರು ವೃತ್ತಿಪರ ಕೃಷಿಕರಲ್ಲ, ಇದು ಅವರ ಹವ್ಯಾಸವಷ್ಟೇ.
icon

(3 / 6)

ಹೊರಗಿನ ಕೃಷಿಕರು ಇಲ್ಲಿ ಕಲ್ಲಂಗಡಿ ಹಣ್ಣಿನ ವ್ಯಾಪಾರಕ್ಕೆ ಬಂದರೆ ಆ ಕಲ್ಲಂಗಡಿ ಮಾರಾಟವಾಗುವುದೂ ಇಲ್ಲ. ಏಕೆಂದರೆ ಸ್ಥಳೀಯ ತಳಿಯ ಆಕಾರ, ಬಣ್ಣಕ್ಕಿಂತ ಇತರ ತಳಿಯ ಕಲ್ಲಂಗಡಿ ಭಿನ್ನವಾಗಿರುತ್ತದೆ. ಇತರೆಡೆಯ ಕಲ್ಲಂಗಡಿ ಮೊಟ್ಟೆಯಾಕಾರವನ್ನು ಹೋಲುತ್ತಿದ್ದರೆ, ಪೊಳಲಿಯಲ್ಲಿ ಮಾರುವ ಕಲ್ಲಂಗಡಿ ಮಾನವನ ತಲೆಯ ಆಕಾರವನ್ನು ಹೋಲುತ್ತದೆ.
icon

(4 / 6)

ಪೊಳಲಿಯ ಜೀವನದಿ ಫಲ್ಗುಣಿ ನದಿಯ ಸುತ್ತಮುತ್ತಲಿನ ಮರಳು ಮಣ್ಣು ಕಲ್ಲಂಗಡಿ ಬೆಳೆಯಲು ಉತ್ತಮ ಪ್ರದೇಶವಾಗಿದೆ. ಇಲ್ಲಿನ ಕಲ್ಲಂಗಡಿ ರಾಸಾಯನಿಕಗಳ ಬಳಕೆಯಿಲ್ಲದೆ ಬೆಳೆಯಲಾಗುತ್ತದೆ.
icon

(5 / 6)

ಪೊಳಲಿ ಜಾತ್ರೆ ನಡೆಯುವ ದಿನ ಹಾಗೂ ಬೆಳೆಯುವ ಅವಧಿಯನ್ನು ಲೆಕ್ಕ ಹಾಕಿ ಕಲ್ಲಂಗಡಿ ಬೆಳೆಗೆ ಬೀಜ ಬಿತ್ತನೆ ಮಾಡಲಾಗುತ್ತದೆ. ಅಂದರೆ ಡಿಸೆಂಬರ್ ಅಂತ್ಯದಿಂದ ಜನವರಿ 25ರೊಳಗೆ ಬೀಜ ಹಾಕಲಾಗುತ್ತದೆ. ಬಳ್ಳಿ ಬೆಳೆದು ಮಾರ್ಚ್ ಅಂತ್ಯಕ್ಕೆ ಕಾಯಿ ಬಲಿತು ಕಲ್ಲಂಗಡಿ ಹಣ್ಣುಗಳು ದೊರೆಯುತ್ತದೆ. ಈ ಹಣ್ಣುಗಳು ಪೊಳಲಿ ಜಾತ್ರೆಯ ವೇಳೆಗೆ ಮಾರಾಟವಾಗುತ್ತವೆ.
icon

(6 / 6)

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು