Asian Champions Trophy: ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಹಾಕಿ ಪಂದ್ಯದ ಲೈವ್ ಸ್ಟ್ರೀಮಿಂಗ್ ವಿವರ
- India vs Pakistan: ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024ರ ಹಾಕಿ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಹೈವೋಲ್ಟೇಜ್ ಪಂದ್ಯದ ಲೈವ್ ಸ್ಟ್ರೀಮಿಂಗ್ ವಿವರ ಹೀಗಿದೆ.
- India vs Pakistan: ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024ರ ಹಾಕಿ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಹೈವೋಲ್ಟೇಜ್ ಪಂದ್ಯದ ಲೈವ್ ಸ್ಟ್ರೀಮಿಂಗ್ ವಿವರ ಹೀಗಿದೆ.
(1 / 7)
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಕಿ ತಂಡವು ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿದೆ. ಈಗಾಗಲೇ ಲೀಗ್‌ನಲ್ಲಿ ಸತತ ನಾಲ್ಕು ಪಂದ್ಯಗಳನ್ನು ಗೆದ್ದಿರುವ ತಂಡವು ಸೆಮಿಫೈನಲ್ ಸ್ಥಾನ ಖಚಿತಪಡಿಸಿದೆ. ಲೀಗ್‌ನ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಪಾಕಿಸ್ತಾನ ಕೂಡಾ ಟೂರ್ನಿಯ ಸೆಮಿಫೈನಲ್ ತಲುಪಿದೆ. ಭಾರತ 12 ಅಂಕಗಳೊಂದಿಗೆ ಲೀಗ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಕಿಸ್ತಾನ 8 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
(2 / 7)
ಭಾರತ ಈಗಾಗಲೇ ನಾಲ್ಕು ಬಾರಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪ್ರಶಸ್ತಿಯನ್ನು ಗೆದ್ದಿದೆ. ಭಾರತ 2011, 2016 ಮತ್ತು 2023ರಲ್ಲಿ ಚಾಂಪಿಯನ್ ಆಗಿತ್ತು. 2012 ಮತ್ತು 2013ರಲ್ಲಿ ಸತತ ಪ್ರಶಸ್ತಿಗಳನ್ನು ಗೆದ್ದಿರುವ ಪಾಕಿಸ್ತಾನ, ಮತ್ತೆ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿದೆ.
(3 / 7)
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಸೆಪ್ಟೆಂಬರ್ 14ರಂದು ನಡೆಯಲಿದೆ. ಈ ಪಂದ್ಯ ಚೀನಾದ ಹುಲುನ್ಬುಯಿಯಲ್ಲಿ ನಡೆಯಲಿದೆ. ಪಂದ್ಯ ಶನಿವಾರ ಮಧ್ಯಾಹ್ನ 1.15ಕ್ಕೆ ಆರಂಭವಾಗಲಿದೆ.
(4 / 7)
ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯವು ಸೋನಿ ಸ್ಪೋರ್ಟ್ಸ್ ನೆಟ್ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಸೋನಿ ಸ್ಪೋರ್ಟ್ಸ್ ಟೆನ್ 1, ಸೋನಿ ಸ್ಪೋರ್ಟ್ಸ್ ಟೆನ್ 1 ಎಚ್‌ಡಿ, ಸೋನಿ ಸ್ಪೋರ್ಟ್ಸ್ ಟೆನ್ 3 ಮತ್ತು ಸೋನಿ ಸ್ಪೋರ್ಟ್ಸ್ ಟೆನ್ 3 ಎಚ್‌ಡಿ ಚಾನೆಲ್‌ಗಳಲ್ಲಿ ಪಂದ್ಯ ಪ್ರಸಾರವಾಗಲಿದೆ.
(5 / 7)
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯ ಲೈವ್ ಸ್ಟ್ರೀಮಿಂಗ್ ಹಕ್ಕುಗಳನ್ನು ಸೋನಿ ಲಿವ್ ಲೈವ್ ಪಡೆದುಕೊಂಡಿದೆ. ಭಾರತ-ಪಾಕಿಸ್ತಾನ ಹಾಕಿ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿಲಿವ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ಗಳಲ್ಲಿ ನೋಡಬಹುದು.
(6 / 7)
2013ರಿಂದೀಚೆಗೆ ಭಾರತ ಮತ್ತು ಪಾಕಿಸ್ತಾನ ಹಾಕಿಯಲ್ಲಿ 25 ಬಾರಿ ಮುಖಾಮುಖಿಯಾಗಿವೆ. ಭಾರತ 16 ಪಂದ್ಯಗಳನ್ನು ಗೆದ್ದರೆ, ಪಾಕಿಸ್ತಾನ 5 ಪಂದ್ಯಗಳನ್ನು ಗೆದ್ದಿದೆ. ಉಳಿದ ನಾಲ್ಕು ಪಂದ್ಯಗಳು ಡ್ರಾ ಆಗಿವೆ.
ಇತರ ಗ್ಯಾಲರಿಗಳು